ಹುಬ್ಬಳಿ ಧಾರವಾಡ ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ; ಉದ್ಯಮಿ ಮನೆಯಲ್ಲಿ 3 ಕೋಟಿ ರೂ. ಪತ್ತೆ

ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಸಿಕ್ಕ ಕೋಟಿ ಕೋಟಿ ಹಣ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ರಾಜಕೀಯ ಪಕ್ಷಗಳಂತೂ ಈ ವಿಚಾರವಾಗಿ ಬೀದಿಗಳಿದು ಪ್ರತಿಭಟನೆಗೆ ಮುಂದಾಗಿವೆ. ಇಂತಹ ಹೊತ್ತಿನಲ್ಲಿ ಮತ್ತೊಂದು ಪ್ರಕರಣ ಹುಬ್ಬಳಿಯಲ್ಲಿ ಬೆಳಕಿಗೆ ಬಂದಿದ್ದು, ಉದ್ಯಮಿಯೊಬ್ಬರ ಮನೆಯಲ್ಲಿ ಕೋಟಿ ಹಣ ಪತ್ತೆಯಾಗಿದ್ದು, ಸಿಸಿಬಿ ಪೊಲೀಸರು ಪ್ರಕರಣದ ಬೆನ್ನು ಹತ್ತಿದ್ದಾರೆ.

ಹುಬ್ಬಳಿ ಧಾರವಾಡ ಸಿಸಿಬಿ ಪೊಲೀಸರ ಮಿಂಚಿನ ಕಾರ್ಯಾಚರಣೆ; ಉದ್ಯಮಿ ಮನೆಯಲ್ಲಿ 3 ಕೋಟಿ ರೂ. ಪತ್ತೆ
ಹುಬ್ಬಳಿ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿ ಆದಾಯ ಮೂಲವಿಲ್ಲದ 3 ಕೋಟಿ ಹಣ ಪತ್ತೆ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 06, 2023 | 8:01 AM

ಹುಬ್ಬಳ್ಳಿ: ಸದ್ಯ ರಾಜ್ಯದಲ್ಲಿ ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮನೆಯಲ್ಲಿ ಸಿಕ್ಕ ಕೋಟಿ ಹಣದ್ದೆ ಸುದ್ದಿಯಾಗಿದೆ. ಇದೀಗ ಲೋಕಾಯುಕ್ತಕ್ಕೆ ಮರು ಜೀವ ಬಂದ ಬೆನ್ನಲ್ಲೇ ಈ ದಾಳಿ ಮತ್ತೆ ಲೋಕಾಯುಕ್ತದ ಶಕ್ತಿಯನ್ನು ಸಾಬೀತು ಮಾಡಿದೆ. ಹೌದು ಒಂದು ಕಡೆ ಈ ಪ್ರಕರಣ ತೀವ್ರ ತನಿಖೆಯಲ್ಲಿರುವ ಹೊತ್ತಿನಲ್ಲಿಯೇ, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲೂ ಸಹ ಇಂತಹದ್ದೇ ಪ್ರಕರಣ ಬೆಳಕಿಗೆ ಬಂದಿದ್ದು, ಹುಬ್ಬಳಿಯ ಪ್ರತಿಷ್ಠಿತ ಉದ್ಯಮಿ ಮನೆಯಲ್ಲಿ ಆದಾಯ ಮೂಲವಿಲ್ಲದ 3 ಕೋಟಿ ಹಣ ಪತ್ತೆಯಾಗಿದೆ. ಇದು ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ.

ಮಾರ್ಚ್​ 3 ರ ರಾತ್ರಿ ಖಚಿತ ಮಾಹಿತಿ ಮೇರೆಗೆ ಹುಬ್ಬಳಿ ಧಾರವಾಡ ಸಿಸಿಬಿ ಪೊಲೀಸರು ಪ್ರತಿಷ್ಠಿತ ಉದ್ಯಮಿ ರಮೇಶ್ ಬೊಣಗೇರಿಯವರ ಭವಾನಿ ನಗರದ ಮನೆಯ ಮೇಲೆ ದಾಳಿ ಮಾಡಿದ್ದು, ದಾಳಿಯ ಸಮಯದಲ್ಲಿ ಪೊಲೀಸರ ನಿರೀಕ್ಷೆಗೂ ಮೀರಿದ 3 ಕೋಟಿ ಹಣ ಪತ್ತೆಯಾಗಿದೆ. ಆದರೆ ಇಲ್ಲಿಯವರೆಗೆ ಹಣದ ಆದಾಯದ ಮೂಲ ಮಾತ್ರ ಬಯಲಿಗೆ ಬಂದಿಲ್ಲ. ಉದ್ಯಮಿ ರಮೇಶ್ ಬೀಜ, ರಸಗೊಬ್ಬರ ಮತ್ತು ಕ್ರಿಮಿನಾಶಕಗಳನ್ನ ಮಾರಾಟ ಮಾಡುವ ವ್ಯಾಪಾರಿಯಾಗಿದ್ದಾನೆ. ಜೊತೆಗೆ ರಾಜ್ಯ ಸರ್ಕಾರದ ಕೃಷಿ ಇಲಾಖೆಗೂ ಸಹ ಬಿಜ, ರಸಗೊಬ್ಬರ ಮತ್ತು ಕ್ರಿಮಿನಾಶಕ ಸರಬರಾಜು ಮಾಡುತ್ತಿದ್ದಾರೆ. ಇವರ ಮನೆಯಲ್ಲಿ ಅಕ್ರಮವಾಗಿ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿಟ್ಟುಕೊಂಡಿರುವ ಮಾಹಿತಿ ಬಂದ ಬೆನ್ನಲ್ಲೇ ಸಿಸಿಬಿ ಆರ್ಥಿಕ ಅಪರಾಧದ ವಿಭಾಗದ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ದಾಳಿಯ ಸಮಯದಲ್ಲಿ ಹಣ ಮಾತ್ರ ವಶಪಡಿಸಿಕೊಂಡಿರುವ ಪೊಲೀಸರು, ಹಣ ಮೂಲದ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ:ಮಾಡಾಳ್ ವಿರೂಪಾಕ್ಷಪ್ಪ ಮನೆ ಮೇಲೆ ಲೋಕಾಯುಕ್ತ ದಾಳಿ ಮಾಡಿಸಿದ್ದೇ ಜಿಎಂ ಸಿದ್ದೇಶ್ವರ್​: ಹೊಸ ಬಾಂಬ್​ ಸಿಡಿಸಿದ ಶಾಮನೂರ ಶಿವಶಂಕರಪ್ಪ

ಇನ್ನು ಇದು ಸದ್ಯ ಸಿವಿಲ್ ಪ್ರಕರಣವಾಗಿರುವ ಹಿನ್ನಲೆ, ಪೊಲೀಸರು ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು, ಆದಾಯ ತೆರಿಗೆ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಈಗಾಗಲೇ ಆದಾಯ ತೆರಿಗೆ ಅಧಿಕಾರಿಗಳು ಸಿಸಿಬಿ ಪೊಲೀಸರ ಜೊತೆಗೆ ಸೇರಿ ಹಣದ ಮೂಲ ಕುರಿತು ತನಿಖೆ ಆರಂಭಿಸಿದ್ದು, ಒಂದೇ ವೇಳೆ ಹಣದ ಮೂಲ ಅಪರಾಧದ ಮೂಲ ಹೊಂದಿರುವ ಬಗ್ಗೆ ಖಚಿತವಾದರೆ, ಉದ್ಯಮಿ ರಮೇಶ್ ಬಂಧನವಾಗುವ ಸಾಧ್ಯತೆಯಿದೆ. ಇನ್ನು ಲೋಕಾಯುಕ್ತ ದಾಳಿಯ ಬೆನ್ನಲ್ಲೇ ಹುಬ್ಬಳಿ ಧಾರವಾಡ ಸಿಸಿಬಿ ಪೊಲೀಸರು ಈ ಮಹತ್ವದ ಪ್ರಕರಣ ಬೆಳಕಿಗೆ ತಂದಿರುವುದಕ್ಕೆ ಅಧಿಕಾರಿಗಳಿಗೆ ಕಮಿಷನರ್ ರಮಣಗುಪ್ತಾ ಅಭಿನಂದನೆ ಸಲ್ಲಿಸಿ 25 ಸಾವಿರ ನಗದು ಹಣ ಬಹುಮಾನ ಘೋಷಣೆ ಮಾಡಿದ್ದಾರೆ. ಒಟ್ಟಿನಲ್ಲಿ ಚುನಾವಣಾ ಹೊತ್ತಿನಲ್ಲಿ ಕೋಟಿ ಕೋಟಿ ಪತ್ತೆಯಾಗುತ್ತಿದ್ದು, ಹಲವು ಅನುಮಾನಗಳನ್ನು ಹುಟ್ಟುಹಾಕುತ್ತಿರುವುದಂತು ಸತ್ಯ.

ವರದಿ: ಶಿವು ಪತ್ತಾರ ಟವಿ9 ಹುಬ್ಬಳ್ಳಿ

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:51 am, Mon, 6 March 23

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ