AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹು-ಧಾ ಪಾಲಿಕೆ ಆಯುಕ್ತರನ್ನು ನಿಯುಕ್ತಿಗೊಳಿಸುವಂತೆ ಕಾರ್ಪೊರೇಟರ್​​ನಿಂದ ಸಿದ್ದರಾಮಯ್ಯಗೆ ಪತ್ರ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಹು-ಧಾ ಪಾಲಿಕೆ ಆಯುಕ್ತರನ್ನು ನಿಯುಕ್ತಿಗೊಳಿಸುವಂತೆ ಕಾರ್ಪೊರೇಟರ್​​ನಿಂದ ಸಿದ್ದರಾಮಯ್ಯಗೆ ಪತ್ರ
ಸಿಎಂಗೆ ಪತ್ರ (ಎಡಚಿತ್ರ), ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (ಬಲಚಿತ್ರ)
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Nov 05, 2023 | 11:33 AM

Share

ಹುಬ್ಬಳ್ಳಿ ನ.05: ಹುಬ್ಬಳ್ಳಿ-ಧಾರವಾಡ (Hubballi-Dharwad) ಮಹಾನಗರ ಪಾಲಿಕೆ (Hubli-Dharwad City Corporation) ಆಯುಕ್ತ ಈಶ್ವರ ಉಳ್ಳಾಗಡ್ಡಿ ಅವರನ್ನು ನಿಯುಕ್ತಿಗೊಳಿಸುವಂತೆ ವಾರ್ಡ್ ನಂಬರ್ 53ರ ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದಾರೆ. ಒಳ್ಳೆ ಐಎಎಸ್​ ಅಧಿಕಾರಿಯನ್ನು ನೇಮಿಸುವಂತೆ ಕೋರಿದ್ದಾರೆ.

ಆಯುಕ್ತರಾದ ಈಶ್ವರ ಉಳ್ಳಾಗಡ್ಡಿ ಪಾಲಿಕೆಯನ್ನು ಅಧೋಗತಿಗೆ ತಗೆದುಕೊಂಡು ಹೋಗುತ್ತಿದ್ದಾರೆ. ಯಾವುದೇ ಕೆಲಸ ಮಾಡದೇ ಕಾಲಹಣರ ಮಾಡುತ್ತಿದ್ದಾರೆ. ಪಾಲಿಕೆ ಆಯುಕ್ತರು ನಮ್ಮ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡಿದೆ ನೋಡೋಣ ನೋಡೋಣ ಎಂದು ಕಾಲ ದೂಡುತ್ತಿದ್ದಾರೆ. ನಾವು ವಾರ್ಡ್​ನಲ್ಲಿ ಜನರಿಂದ ಬೈಸಿಕೊಳ್ಳುತ್ತಿದ್ದೇವೆ. ಹೀಗಾಗಿ ಪಾಲಿಕೆ ಆಯುಕ್ತರನ್ನು ನಿಯುಕ್ತಿಗೊಳಿಸಿ, ಒಳ್ಳೆ ಅಧಿಕಾರಿಯನ್ನು ಪಾಲಿಕೆಗೆ ನೇಮಿಸಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪತ್ರದಲ್ಲಿ ಏನಿದೆ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಈ ಹಿಂದೆ ಇದ್ದಂತಹ ಗೋಪಾಲಕೃಷ್ಣ ಬಿ.ಐ.ಎ.ಎಸ್.  ಆಯುಕ್ತರು ಪಾಲಿಕೆಯಿಂದ ವರ್ಗಾವಣೆಯಾದ ನಂತರ ಸದರಿ ಹುದ್ದೆಗೆ ಆಯುಕ್ತರಾಗಿ ಈಶ್ವರ ಉಳ್ಳಾಗಡ್ಡಿ, ಕೆ.ಎ.ಎಸ್. ಅಧಿಕಾರವನ್ನು ವಹಿಸಿಕೊಂಡರು. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರ ಹುದ್ದೆಯನ್ನು ಅಲಂಕರಿಸಿದ ನಂತರ ನಾನು ಮತ್ತು ನಮ್ಮ ಪಕ್ಷದ ಹಲವು ಸದಸ್ಯರು, ಮುಖಂಡರು ಈಶ್ವರ ಉಳ್ಳಾಗಡ್ಡಿ ರವರನ್ನು ಭೇಟಿಯಾಗಿ ಮಹಾನಗರ ಪಾಲಿಕೆಯಲ್ಲಿ ಹೆಚ್ಚು ಆದಾಯ ಕ್ರೂಢೀಕರಣದ ಬಗ್ಗೆ ಹೊಸದಾಗಿ ಟ್ಯಾಕ್ಸಿನಲ್ಲಿ ಹೆಸರುಗಳನ್ನು ದಾಖಲಿಸುವುದು, ಎಲ್‌&ಟಿ ಕಂಪನಿಯವರು ಎಲ್ಲ ವಾರ್ಡಗಳಲ್ಲಿ ಕರ್ತವ್ಯದಲ್ಲಿ ನಿಷ್ಕಾಳಜಿ ಮಾಡುತ್ತಿರುವುದು, ಎಲ್ಲ ವಾರ್ಡಗಳ ಒಳಚರಂಡಿ ವ್ಯವಸ್ಥೆ ಸರಿ ಪಡಿಸುವುದು, ಸದಸ್ಯರಿಂದ ಸಮರ್ಪಕವಾಗಿ ಸಲಹೆಗಳನ್ನು ತೆಗೆದುಕೊಳ್ಳುವುದು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಖಾಯಂ, ನೇರವೇಶನ ಮತ್ತು ಗುತ್ತಿಗೆ ಪೌರಕಾರ್ಮಿಕರ ಆರೋಗ್ಯ/ಸಲಕರಣಿಗಳ ನೀಡುವುದರ ಬಗ್ಗೆ ಸಭೆ ಮಾಡಿ ವಿಚಾರಿಸಲಾಯಿತು.

ಇದನ್ನೂ ಓದಿ: ವಿಜಯಪುರ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ

ಆದರೆ ಈಶ್ವರ ಉಳ್ಳಾಗಡ್ಡಿ, ಕೆ.ಎ.ಎಸ್ ರವರು ನಮ್ಮೆಲ್ಲ ಸದಸ್ಯರ ಮಾತುಗಳನ್ನು ಗಮನಕ್ಕೆ ತೆಗೆದುಕೊಳ್ಳದೇ ಕಾಮಗಾರಿಗಳನ್ನು ಮಾಡುವುದರ ಬಗ್ಗೆ ಯೋಗ್ಯತೆ ಇಲ್ಲದೇ ಚಿಂತಿತರಾಗಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ರಾಜ್ಯದ 2ನೇ ಅತೀ ದೊಡ್ಡ ಮಹಾನಗರ ಪಾಲಿಕೆಯನ್ನು ಅಧೋಗತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ.

ಸದ್ಯ ಯಾವುದಾದರೂ ವಿಷಯವನ್ನು ಪ್ರಸ್ತಾಪಿಸಿದರೆ ನೋಡೋಣಾ, ಮಾಡೋಣಾ ಅಂತಾ ಉಡಾಫೆ ಉತ್ತರ ನೀಡಿ ಸಮಯದ ಕಾಲಹರಣ ಮಾಡುತ್ತಿದ್ದಾರೆ. ಆಯುಕ್ತರ ಇಂತಹ ಧೋರಣೆಯಿಂದ ಮಹಾನಗರ ಪಾಲಿಕೆಯ ಅಭಿವೃದ್ಧಿ ಕಾಮಗಾರಿಗಳು ಹಿಂದೆ ಬಿದ್ದಿದ್ದು, ಅಭಿವೃದ್ಧಿ ಪಡಿಸುವಂತೆ ಸ್ಥಳೀಯ ಪ್ರದೇಶದ ಸಾರ್ವಜನಿಕರು ವಾರ್ಡ ಸದಸ್ಯರಾದ ನಮಗೆ ಪದೇ ಪದೇ ಮನವಿ ಮಾಡಿಕೊಳ್ಳುತ್ತಿದ್ದಾರೆ. ಆದರೆ ಇಂತಹ ಅನುಭವದ ಕೊರತೆ ಇರುವ ಆಯುಕ್ತರಿಂದ ವಾರ್ಡ ಸದಸ್ಯರು ವಾರ್ಡಿನ ಮತದಾರರಿಂದ ಬೈಯಿಸಿಕೊಳ್ಳುವ ಪರಿಸ್ಥಿತಿ ಉದ್ಭವಗೊಂಡಿದೆ ಎಂದು ಪಾಲಿಕೆ ಸದಸ್ಯ ಎಂ.ಎಂ.ಭದ್ರಾಪುರ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:28 am, Sun, 5 November 23

Follow Us
ಶಿವಕುಮಾರ್ ಪತ್ತಾರ್
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ