ಹುಬ್ಬಳ್ಳಿ- ಧಾರವಾಡ ಮಂದಿಗೆ ಸಿಹಿ ಸುದ್ದಿ: ಮೆಟ್ರೋ ಮಾದರಿ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

| Updated By: ವಿವೇಕ ಬಿರಾದಾರ

Updated on: Apr 12, 2025 | 4:29 PM

ಹುಬ್ಬಳ್ಳಿ-ಧಾರವಾಡ ಅವಳಿ ನಗರ ಸಂಪರ್ಕಿಸುವ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ (e-RT) ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಹೆಚ್‌ಇಎಸ್‌ಎಸ್ ಎಜಿ, ಹೆಸ್‌ ಇಂಡಿಯಾ ಮತ್ತು ಎಸ್‌ಎಸ್‌ಬಿ ಎಜಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಮೂರು ತಿಂಗಳಲ್ಲಿ ಡಿಪಿಆರ್ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಈ ಯೋಜನೆಯು ಯುರೋಪಿನಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿರುವ ಮಾದರಿಯನ್ನು ಅನುಸರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಹುಬ್ಬಳ್ಳಿ- ಧಾರವಾಡ ಮಂದಿಗೆ ಸಿಹಿ ಸುದ್ದಿ: ಮೆಟ್ರೋ ಮಾದರಿ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ
ಹುಬ್ಬಳ್ಳಿ- ಧಾರವಾಡ ಮಧ್ಯೆ ಮೆಟ್ರೋ ಮಾದರಿ ಸಾರಿಗೆ ಯೋಜನೆ ಒಡಂಬಡಿಕೆ
Follow us on

ಹುಬ್ಬಳ್ಳಿ, ಏಪ್ರಿಲ್​ 12: ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್‌ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ-ಭಾದಕಗಳ ಕುರಿತು ಶನಿವಾರ (ಏ.12) ಚರ್ಚೆ ನಡೆದಿದೆ. ಈ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು ಅವಕಾಶಗಳನ್ನು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಸಭೆಯಲ್ಲಿ ವಿವರಿಸಿದರು.

ಈ ವೇಳೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು ಎಚ್‌ಇಎಸ್‌ಎಸ್ ಎಜಿ, ಹೆಸ್‌ ಇಂಡಿಯಾ ಮತ್ತು ಎಸ್‌ಎಸ್‌ಬಿ ಎಜಿ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಯೋಜನೆ ಅನುಷ್ಠಾನ ಕುರಿತು ಮೂರು ತಿಂಗಳ ಒಳಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಇದು ಸಂಪೂರ್ಣ ವಿದ್ಯುತ್ ಚಾಲಿತ ವ್ಯವಸ್ಥೆಯಾಗಿದ್ದು ನಗರದಲ್ಲಿ ಎತ್ತರಿಸಿದ ರಸ್ತೆ (ಫ್ಲೈ ಓವರ್​) ಹಾಗೂ ಇತರೆಡೆ ನೆಲದ ಮೇಲೆ ಸಂಚರಿಸಲಿದೆ. ಇದರಲ್ಲಿ 250 ಜನರು ಒಮ್ಮೆಗೆ ಪ್ರಯಾಣಿಸಬಹುದಾಗಿದೆ. ಕಳೆದ ಒಂದು ವರ್ಷದಿಂದ ಯೋಜನೆ ಕಾರ್ಯ ಸಾಧ್ಯತೆ ಬಗ್ಗೆ ಅಧ್ಯಯನ ನಡೆಸಲಾಗಿದೆ. ಸ್ವತಃ ಕಾರ್ಮಿಕ ಸಚಿವ ಸಂತೋಷ ಲಾಡ್, ಸ್ವಿಟ್ಜರಲ್ಯಾಂಡ್​ಗೆ ಹೋಗಿ ಸಾಧ್ಯ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸಿ ಬಂದಿದ್ದಾರೆ.

ಇದನ್ನೂ ಓದಿ
ಚಲಿಸುತ್ತಿರುವ ರೈಲು ಹತ್ತಲು ಹೋಗಿ ನಿಯಂತ್ರಣ ಕಳೆದುಕೊಂಡ ವೃದ್ಧ
ಶುಭ ಸುದ್ದಿ ನೀಡಿದ ರೈಲ್ವೆ: ಈ ನಿಲ್ದಾಣದಲ್ಲಿ ವಂದೇ ಭಾರತ್ ನಿಲುಗಡೆಗೆ ಆದೇಶ
ಭಾರತಕ್ಕೆ ಶೀಘ್ರದಲ್ಲೇ ಈ ದೇಶದಿಂದ ಅಂಡರ್​ವಾಟರ್ ರೈಲು ಸಂಚಾರ ಆರಂಭ
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು

ಮೆಟ್ರೊ ಮಾದರಿಯ ಈ ಸಂಚಾರ ವ್ಯವಸ್ಥೆ ಯುರೋಪಿನ ಹಲವು ರಾಷ್ಟ್ರಗಳಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಕಂಪನಿಗಳ ಪ್ರತಿನಿಧಿಗಳು ಮಾಹಿತಿ ನೀಡಿದರು.

ಹುಬ್ಬಳ್ಳಿ ಧಾರವಾಡದಲ್ಲಿ ಈ ಯೋಜನೆ ಯಶಸ್ವಿಯಾದರೆ, ರಾಜ್ಯದ ಇತರ ಎರಡನೇ ಹಂತದ ನಗರಗಳಿಗೂ ಇದನ್ನು ವಿಸ್ತರಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು.

ಇದನ್ನೂ ಓದಿ: ಬೇಸಿಗೆ ರಜೆ: ಬೆಂಗಳೂರು, ಮೈಸೂರಿನಿಂದ ಕಲಬುರಗಿ, ಹುಬ್ಬಳ್ಳಿ, ಬೆಳಗಾವಿಗೆ ವಿಶೇಷ ರೈಲು

ಈ ಸಭೆಯಲ್ಲಿ ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ, ಸಮಾಜ ಕಲ್ಯಾಣ ಸಚಿವರಾದ ಡಾ. ಎಚ್‌ ಸಿ ಮಹಾದೇವಪ್ಪ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಹೆಚ್ಇಎಸ್ಎಸ್‌ ಎಜಿ ಕಂಪನಿಯ ಸುಸಾನ್ ವಾನ್ ಸುರಿ, ಎಸ್ಎಸ್‌ಬಿ ಕಂಪನಿಯ ನಿರ್ದೇಶಕ ಬುರಾಕ್ ಸೆನಸರ್ ಮತ್ತಿತರರು ಭಾಗಿಯಾಗಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:29 pm, Sat, 12 April 25