ಹು-ಧಾ ಮೇಯರ್-ಉಪಮೇಯರ್ ಗದ್ದುಗೆಗಾಗಿ ಕೈ, ಕಮಲ ಕಸರತ್ತು, ಬಿಜೆಪಿಗೆ ಅಡ್ಡಮತದಾನದ ಭೀತಿ

ಹು-ಧಾ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸ್ಥಾನಕ್ಕೆ ಇಂದು (ಜೂನ್ 20) ಚುನಾವಣೆ ನಡೆಯಲಿದೆ. ಇದೇ ಮೊದಲ ಬಾರಿಗೆ ಧಾರವಾಡ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.‌

ಹು-ಧಾ ಮೇಯರ್-ಉಪಮೇಯರ್ ಗದ್ದುಗೆಗಾಗಿ ಕೈ, ಕಮಲ ಕಸರತ್ತು, ಬಿಜೆಪಿಗೆ ಅಡ್ಡಮತದಾನದ ಭೀತಿ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Follow us
TV9 Web
| Updated By: ಆಯೇಷಾ ಬಾನು

Updated on:Jun 20, 2023 | 7:12 AM

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ(Hubli Dharwad) ಪಾಲಿಕೆಯ ಆಡಳಿತ ಹಲವಾರು ವರ್ಷಗಳಿಂದ ಬಿಜೆಪಿ ಕೈಯಲ್ಲಿಯೇ ಇದೆ. ಈ ಸಲವೂ ಬಿಜೆಪಿಯ ಈರೇಶ ಅಂಚಟಗೇರಿ ಮೇಯರ್ ಹಾಗೂ ಉಮಾ ಮುಕ್ಕುಂದ ಉಪಮೇಯರ್ ಆಗಿದ್ದರು. ಅವರ ಅವಧಿ ಇದೇ ಮೇ 27ಕ್ಕೆ ಮುಕ್ತಾಯಗೊಂಡಿದ್ದು, ಹು-ಧಾ ಮಹಾನಗರ ಪಾಲಿಕೆಯ ಮೇಯರ್-ಉಪಮೇಯರ್ ಸ್ಥಾನಕ್ಕೆ ಇಂದು (ಜೂನ್ 20) ಚುನಾವಣೆ ನಡೆಯಲಿದೆ(Hubli Dharwad Mayor Election) . ಇದೇ ಮೊದಲ ಬಾರಿಗೆ ಧಾರವಾಡ ಕಚೇರಿಯಲ್ಲಿ ಚುನಾವಣೆ ನಡೆಯಲಿದೆ.‌

ಬೆಳಗ್ಗೆ 9 ರಿಂದ 11 ಗಂಟೆ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ಮಧ್ಯಾಹ್ನ 1ಕ್ಕೆ ಚುನಾವಣೆ ನಡೆಯಲಿದೆ. ಚುನಾವಣೆಯನ್ನು ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ ನಡೆಸಲಿದ್ದಾರೆ. 82 ಸದಸ್ಯ ಬಲದ ಪಾಲಿಕೆಯಲ್ಲಿ ಬಿಜೆಪಿಯಿಂದ 39, ಕಾಂಗ್ರೆಸ್‌ನಿಂದ 33, ಎಐಎಂಐಎಂನಿಂದ 3, ಜೆಡಿಎಸ್ 1 ಹಾಗೂ 6 ಜನ ಪಕ್ಷೇತರರು ಚುನಾಯಿತರಾಗಿದ್ದಾರೆ. ಸದ್ಯ ಬಿಜೆಪಿಯವರು ಮೇಯರ್-ಉಪಮೇಯರ್ ಆಗಿದ್ದಾರೆ. ಕಳೆದ ಬಾರಿ ಮೇಯರ್ – ಉಪ ಮೇಯರ್ ಆಯ್ಕೆ ಚುನಾವಣೆ ವೇಳೆ ಐವರು ಪಕ್ಷೇತರರು, ಜೆಡಿಎಸ್‌ನ ಒಬ್ಬರು ಬಿಜೆಪಿಗೆ ಮತ ಹಾಕಿದ್ದರು. ಓರ್ವ ಪಕ್ಷೇತರ ಸದಸ್ಯೆ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದರು.‌ ಪಾಲಿಕೆಯ ಮೇಯರ-ಉಪ ಮೇಯರ್ ಆಯ್ಕೆ ಚುನಾವಣೆಯಲ್ಲಿ ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಮತಾಧಿಕಾರ ಹೊಂದಿದ್ದಾರೆ. ಹೀಗಾಗಿ ಈ ಬಾರಿ ಕಾಂಗ್ರೆಸ್ ಶತಾಯಗತಾಯ ಸರ್ಕಸ್ ನಡೆಸಿದೆ.

ಇದನ್ನೂ ಓದಿ: ತೀವ್ರ ಸ್ವರೂಪ ಪಡೆದುಕೊಂಡ ಅಕ್ಕಿ ರಾಜಕೀಯ: ರಾಜ್ಯಾದ್ಯಂತ ಇಂದು ಕಾಂಗ್ರೆಸ್‌, ಬಿಜೆಪಿ ಪ್ರತಿಭಟನೆ

ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು

ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಹಾಗೂ ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲಿಡಲಾಗಿದೆ. ಇನ್ನು ಜಗದೀಶ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸ್ಪಷ್ಟ ಬಹುಮತವಿದ್ದರೂ ಅಡ್ಡಮತದಾನದ ಭೀತಿ ಎದುರಾಗಿದೆ. ಈ ಕಾರಣಕ್ಕೆ ಬಿಜೆಪಿ ತನ್ನ ಸದಸ್ಯರನ್ನು ದಾಂಡೇಲಿ ರೆಸಾರ್ಟ್‌‌ನಲ್ಲಿಟ್ಟಿದೆ. ಸದಸ್ಯರು ರೆಸಾರ್ಟ್‌ನಿಂದಲೇ ನೇರವಾಗಿ ಮತದಾನಕ್ಕೆ ಆಗಮಿಸಲಿದ್ದಾರೆ. ಬಿಜೆಪಿಯಿಂದ ವಿಪ್ ಜಾರಿ ಮಾಡಲಾಗಿದೆ.

ಮಹಾನಗರ ಪಾಲಿಕೆ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಧಾರವಾಡ ಕಚೇರಿಯಲ್ಲಿ ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ನಡೆಯುತ್ತಿದೆ. ಇಷ್ಟು ವರ್ಷಗಳ ಕಾಲ ಹುಬ್ಬಳ್ಳಿಯಲ್ಲಿ ಪಾಲಿಕೆ ಸಾಮಾನ್ಯ ಸಭೆ ಮತ್ತು ಚುನಾವಣೆಗಳು ನಡೆಯುತ್ತಿದ್ದವು. ಆದರೆ, ಹುಬ್ಬಳ್ಳಿಯ ಪಾಲಿಕೆಯ ಸಭಾಂಗಣದ ನಿರ್ಮಾಣ ಕಾರ್ಯ ನಡೆಯುತ್ತಿರುವುದರಿಂದ ಇಡೀ ಆಡಳಿತದ ಪ್ರಮುಖ ಸಭೆ, ಚುನಾವಣೆಗಳೂ ಧಾರವಾಡದಲ್ಲಿಯೇ ನಡೆಯುತ್ತಿವೆ.

ಹುಬ್ಬಳ್ಳಿ-ಧಾರವಾಡಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:12 am, Tue, 20 June 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ