AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಧಾರವಾಡ ಮೆಟ್ರೋ ರೈಲು ಮಾರ್ಗ ನಿರ್ಮಾಣ; ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ

ಪಾಲಿಕೆ ಚುನಾವಣೆಯ ಕೈ ಪಕ್ಷದ ಉಸ್ತುವಾರಿ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ.

ಹುಬ್ಬಳ್ಳಿ ಧಾರವಾಡ ಮೆಟ್ರೋ ರೈಲು ಮಾರ್ಗ ನಿರ್ಮಾಣ; ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ
ಸಾಂದರ್ಭಿಕ ಚಿತ್ರ
Follow us
TV9 Web
| Updated By: guruganesh bhat

Updated on:Aug 28, 2021 | 7:45 PM

ಹುಬ್ಬಳ್ಳಿ: ಸೆಪ್ಟೆಂಬರ್ 3 ರಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಗೆ ಕಾಂಗ್ರೆಸ್ 23 ಅಂಶಗಳ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಅವಳಿ ನಗರಗಳಾದ ಹುಬ್ಬಳ್ಳಿ- ಧಾರವಾಡ ನಡುವೆ ಮೆಟ್ರೋ ರೈಲು ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಘೋಷಿಸಿದೆ. ಜನರ ಆರೋಗ್ಯಕ್ಕೆ ಒತ್ತು, ಹುಬ್ಬಳ್ಳಿ ಧಾರವಾಡ ಪಾಲಿಕೆ ವ್ಯಾಪ್ತಿಯಲ್ಲಿ ಸುಸಜ್ಜಿತ ಶಾಲೆ ನಿರ್ಮಾಣ ಮಾಡುವುದಾಗಿಯೂ ಕಾಂಗ್ರೆಸ್ ತಿಳಿಸಿದೆ. ಜತೆಗೆ ರಾಜಕಾಲುವೆ ದುರಸ್ತಿ, ಕ್ರೀಡಾಂಗಣ ನಿರ್ಮಾಣ ಮಾಡುವುದು ಕಾಂಗ್ರೆಸ್ ಘೋಷಿಸಿದ ಪ್ರಣಾಳಿಕೆಯ ಪ್ರಮುಖ ಅಂಶಗಳಾಗಿವೆ. ಪಾಲಿಕೆ ಚುನಾವಣೆಯ ಕೈ ಪಕ್ಷದ ಉಸ್ತುವಾರಿ ಸಮಿತಿ ಅಧ್ಯಕ್ಷ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ನೇತೃತ್ವದಲ್ಲಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಗಿದೆ.

ಉತ್ತಮ ದರ್ಜೆ ಶಾಲೆ, ಉಚಿತ ಲ್ಯಾಪ್​ಟಾಪ್; ಹುಬ್ಬಳ್ಳಿ ಧಾರವಾಡ ನಗರ ಪಾಲಿಕೆ ಚುನಾವಣೆಗೆ ಆಮ್ ಆದ್ಮಿ ಪ್ರಣಾಳಿಕೆ ಹುಬ್ಬಳ್ಳಿ- ಧಾರವಾಡ ನಗರ ಪಾಲಿಕೆ ಚುನಾವಣೆಯು ಸಪ್ಟೆಂಬರ್ 3 ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಆಮ್ ಆದ್ಮಿ ಪಕ್ಷದಿಂದ (AAP) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಲಾಗಿದೆ. ಉತ್ತಮ ದರ್ಜೆಯ ಶಾಲೆ, ಮಕ್ಕಳಿಗೆ ಉಚಿತ ಲ್ಯಾಪ್​ಟಾಪ್ , ಎಲ್ಲಾ ಮನೆಗಳಿಗೆ ಪ್ರತೀ ತಿಂಗಳು 20 ಸಾವಿರ ಲೀಟರ್ ನೀರು ನೀಡುವ ಭರವಸೆಯನ್ನು ಆಮ್ ಆದ್ಮಿ ಪಕ್ಷ ನೀಡಿದೆ. ಆಮ್ ಆದ್ಮಿ ಪಕ್ಷ ಆಶ್ವಾಸನೆ ನೀಡುತ್ತಿಲ್ಲ, ಖಾತ್ರಿ ಪಡಿಸಲಿದೆ ಎಂದು ಹೇಳಿದ್ದಾರೆ. ಸ್ಮಾರ್ಟ್ ಸಿಟಿ, ಬಿಆರ್​ಟಿಸಿ​ ಅವೈಜ್ಞಾನಿಕ ಕಾಮಗಾರಿ ಬಗ್ಗೆ ಮಾಹಿತಿ ನೀಡಿದ್ದಾರೆ.

ಈಗಾಗಲೇ ಅಭ್ಯರ್ಥಿಗಳ 3 ಪಟ್ಟಿಗಳನ್ನ ಬಿಡುಗಡೆ ಮಾಡಿದ್ದೇವೆ. ಇನ್ನೊಂದು ಪಟ್ಟಿಯನ್ನ ಶೀಘ್ರದಲ್ಲೇ ಬಿಡುಗಡೆ ಮಾಡುತ್ತೆವೆ. ಉತ್ತಮ ದರ್ಜೆಯ ಶಾಲೆಯ ಜೊತೆ ಪ್ರತಿ ಮಕ್ಕಳಿಗೆ ಉಚಿತ ಲ್ಯಾಪ್ಟ್ಯಾಪ್ ನೀಡುತ್ತೇವೆ. ಪ್ರತಿ ತಿಂಗಳು 20 ಸಾವಿರ ಲೀಟರ್ ಪ್ರತಿ ಮನೆಗೆ ಕುಡಿಯವ ನೀರು ಸೇರಿದಂತೆ ಎಲ್ಲರಿಗೂ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಆಪ್ ಚುನಾವಣೆಯ ಪ್ರಣಾಳಿಕೆಯಾಗಿ ಘೋಷಣೆ ಮಾಡಿದೆ.

ಇದನ್ನೂ ಓದಿ: 

ಬೆಳಗಾವಿ ಪಾಲಿಕೆ ಚುನಾವಣೆ: ಎಂಇಎಸ್ ಬಂಡಾಯ ಅಭ್ಯರ್ಥಿ ಬಿಜೆಪಿಗೆ ಸೇರ್ಪಡೆ; ಪ್ರಣಾಳಿಕೆ ಬಿಡುಗಡೆ

ಅಮರುಲ್ಲಾ ಸಲೇಹ್: ಅಫ್ಘಾನಿಸ್ತಾನ ಪ್ರತಿರೋಧ ಹೋರಾಟದ ಕೊನೆಯ ಆಸರೆ, ತಾಲಿಬಾನ್-ಪಾಕಿಸ್ತಾನವನ್ನು ಎಂದಿಗೂ ಒಪ್ಪದ ನಾಯಕನೀತ

(Hubli Dharwad Metro Congress released its manifesto for local body election 2021)

Published On - 7:43 pm, Sat, 28 August 21

ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್
ದರಿದ್ರ ದೇಶವಾದ ಪಾಕಿಸ್ತಾನದ ವಿರುದ್ಧ ಯುದ್ಧವಾಗಲೇಬೇಕು; ಎಂ.ಬಿ ಪಾಟೀಲ್