ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ದೊಡ್ಡ ಸಂಕಷ್ಟ: ಮನವಿ ಪತ್ರಗಳ ಸುರಿಮಳೆ, ಈದ್ಗಾ ಮೈದಾನಕ್ಕೆ ಕಿತ್ತೂರು ಚೆನ್ಮಮ್ಮ ಹೆಸರಿಡಲು ಬೇಡಿಕೆ

ಈದ್ಗಾ ಮೈದಾನದಲ್ಲಿ ಭಗವಾ ಧ್ವಜ ಹಾರಾಟ ಮಾಡಲಾಗುತ್ತಿರುವ ರೀತಿಯ ಎಡಿಟೆಟ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ಟಿಪ್ಪು ಜಯಂತಿ, ಕನಕ ಜಯಂತಿ ನಡುವೆ ಈಗ ಪಾಲಿಕೆಗೆ ಅನೇಕ ಬೇಡಿಕೆಗಳು ಬಂದಿವೆ.

ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ದೊಡ್ಡ ಸಂಕಷ್ಟ: ಮನವಿ ಪತ್ರಗಳ ಸುರಿಮಳೆ, ಈದ್ಗಾ ಮೈದಾನಕ್ಕೆ ಕಿತ್ತೂರು ಚೆನ್ಮಮ್ಮ ಹೆಸರಿಡಲು ಬೇಡಿಕೆ
ಹುಬ್ಬಳ್ಳಿ ಈದ್ಗಾ ಮೈದಾನ
Follow us
TV9 Web
| Updated By: ಆಯೇಷಾ ಬಾನು

Updated on:Nov 09, 2022 | 2:40 PM

ಹುಬ್ಬಳ್ಳಿ: ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಗಣೇಶ ಹಬ್ಬದ ಸಮಯದಲ್ಲಿ ಗಣೇಶೋತ್ಸವಕ್ಕೆ ಹುಬ್ಬಳ್ಳಿ ಮೈದಾನದಲ್ಲಿ ಅವಕಾಶ ಕೊಟ್ಟ ಬೆನ್ನಲ್ಲೇ ಈಗ ಪ್ರತಿ ಆಚರಣೆಗಳಿಗೂ ಅವಕಾಶ ಕೇಳಿ ಅನೇಕ ಸಂಘಟನೆಗಳು ಮನವಿ ಪತ್ರ ಸಲ್ಲಿಸುತ್ತಿದ್ದಾರೆ. ಟಿಪ್ಪು ಜಯಂತಿ, ಕನಕ ಜಯಂತಿ ನಡುವೆ ಈಗ ಪಾಲಿಕೆಗೆ ಅನೇಕ ಬೇಡಿಕೆಗಳು ಬಂದಿವೆ.

ಮುಂಬರುವ ಮಾರ್ಚ್ ನಲ್ಲಿ ರತಿ, ಮನ್ಮಥನ ಪ್ರತಿಷ್ಠಾಪನೆಗೆ ಅವಕಾಶ ಕೇಳಿ ಹುಬ್ಬಳ್ಳಿ ಧಾರಾವಾಡ ಮಹಾನಗರ ಪಾಲಿಕೆಗೆ ಮನವಿ ಪತ್ರ ಸಲ್ಲಿಸಲಾಗಿದೆ. ಗಜಾನನ ಮಹಾಮಂಡಳಿ ಹೋಳಿ ಆಚರಣೆಗೆ ಅವಕಾಶ ಕೇಳಿ ಇಂದು ಮನವಿ ಸಲ್ಲಿಸಿದೆ. ಮತ್ತೊಂದೆಡೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ ನವೆಂಬರ್ 11ರಂದು ಈದ್ಗಾ ಮೈದಾನದಲ್ಲಿ ಒನಕೆ ಓಬವ್ಬ ಜಯಂತಿಗೆ ಅವಕಾಶ ಕೇಳಿ ಮನವಿ‌‌ ಸಲ್ಲಿಸಿದೆ.

ಟಿಪ್ಪು ಜಯಂತಿಗೆ ಅವಕಾಶ ಕೇಳಿದ ಬೆನ್ನಲ್ಲೆ ವಿವಿಧ ಸಂಘಟಕರು ಈದ್ಗಾ ಮೈದಾನದಲ್ಲಿ ಅವಕಾಶ ಕೇಳಿ‌ ಮನವಿ ಸಲ್ಲಿಸಿದ್ದಾರೆ. ಗಣೇಶೋತ್ಸವ ಆಚರಣೆ ಬಳಿಕ ಟಿಪ್ಪು ಜಯಂತಿಗೂ ಅವಕಾಶ ಕೇಳಿ ಸಂಘಟನೆಗಳೂ ಮನವಿ ಮಾಡಿದ್ದವು. ಇದರ ನಡುವೆ ಈಗ ಪಾಲಿಕೆಗೆ ಮನವಿಗಳು ಹೆಚ್ಚಾಗಿದ್ದು ಹುಬ್ಬಳ್ಳಿ ಧಾರವಾಡ ಮಾಹಾನಗರ ಪಾಲಿಕೆ ಗೊಂದಲಕ್ಕೀಡಾಗಿದೆ.

ಇದನ್ನೂ ಓದಿ: Fake passport: ಕೊಲೆ ಪ್ರಕರಣದ ತನಿಖೆ ವೇಳೆ ಪಾಸ್​​ಪೋರ್ಟ್ ಜಾಲ ಬೆಳಕಿಗೆ, ಗ್ಯಾಂಗ್ ಸೆರೆ

ಈದ್ಗಾ ಮೈದಾನಕ್ಕೆ ಕಿತ್ತೂರು ಚೆನ್ಮಮ್ಮ ಮೈದಾನ ಎಂದು ನಾಮಕರಣಕ್ಕೆ ಬೇಡಿಕೆ

ಇನ್ನು ಇದೆಲ್ಲದರ ನಡುವೆ ಈದ್ಗಾ ಮೈದಾನದಲ್ಲಿ ಭಗವಾ ಧ್ವಜ ಹಾರಾಟ ಮಾಡಲಾಗುತ್ತಿರುವ ರೀತಿಯ ಎಡಿಟೆಟ್ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ. ವಿಡಿಯೋ ಎಡಿಟ್ ಮಾಡಿ ಕಿತ್ತೂರ ಚೆನ್ನಮ್ಮ ಮೈದಾನ ಎಂದು ನಾಮಕರಣ ಮಾಡಿದ್ದಾರೆಂದು ಸಂದೇಶ ನೀಡುವ ವಿಡಿಯೋ ವೈರಲ್‌ ಆಗುತ್ತಿದೆ. ಸದ್ಯ ಟಿಪ್ಪು ಜಯಂತಿಗೆ ಅವಕಾಶಕ್ಕೆ ಮನವಿ ಮಾಡಿದ ಬೆನ್ನಲ್ಲೆ ಇಂತಹದೊಂದು ವಿಡಿಯೋ ವೈರಲ್ ಆಗುತ್ತಿದೆ.

Published On - 1:05 pm, Wed, 9 November 22

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ
ಮೈಸೂರು; ಹುಚ್ಚು ಸಾಹಸಗಳನ್ನು ಸೆರೆಹಿಡಿಯಲು ಸಿಸಿಟಿವಿ ಕೆಮೆರಾಗಳು: ಡಿಸಿಪಿ