ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ: ಆಗಸ್ಟ್ 17 ರಂದು ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ

Dharawad News; ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಧ್ಯಾಹ್ನ 1 ಗಂಟೆಯಿಂದ ಚುನಾವಣಾಧಿಕಾರಿಗಳು ಚುನಾವಣೆ ಸಂಬಂಧಿಸಿದ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ: ಆಗಸ್ಟ್ 17 ರಂದು ನಾಲ್ಕು ಸ್ಥಾಯಿ ಸಮಿತಿಗಳಿಗೆ ಚುನಾವಣೆ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Edited By:

Updated on: Aug 11, 2023 | 8:58 PM

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (Hubli Dharwad Municipal Corporation) 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳಿಗೆ (Standing Committees) ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆ ಆಗಸ್ಟ್ 17 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ. ಧಾರವಾಡ ಪಾಲಿಕೆಯ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಭಾಭವನದಲ್ಲಿ ಮತದಾನ ನಡೆಯಲಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 22ನೇ ಅವಧಿಗೆ ತೆರಿಗೆ ನಿರ್ಧಾರಣಾ ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿ ರಚನೆಗೆ ಚುನಾವಣೆ ನಡೆಯಲಿದೆ.

ಅಂದು ಬೆಳಿಗ್ಗೆ 9 ಗಂಟೆಯಿಂದ ಚುನಾವಣಾ ಪ್ರಕ್ರಿಯೆ ಪ್ರಾರಂಭವಾಗಿ ಮಧ್ಯಾಹ್ನ 1 ಗಂಟೆಯಿಂದ ಚುನಾವಣಾಧಿಕಾರಿಗಳು ಚುನಾವಣೆ ಸಂಬಂಧಿಸಿದ ಕಾರ್ಯಗಳನ್ನು ಕೈಗೊಳ್ಳಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಾನಸಿಕ ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನೆ ನಡೆಸಿದ ಡಬ್ಲೂಹೆಚ್‍ಓ ತಂಡ

ಸಾಮಾನ್ಯರಂತೆ ರಸ್ತೆಗಿಳಿದ ಸಂತೋಷ ಲಾಡ್

ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಶುಕ್ರವಾರ ಸಾಮಾನ್ಯರಂತೆ ರಸ್ತೆಗಿಳಿದು ಸಂಚಾರ ನಡೆಸಿದರು. ನಗರದ ಡಿಸಿ ಕಚೇರಿ ಬಳಿ ಕಾಣಿಸಿಕೊಂಡ ಲಾಡ್, ನಂತರ ಕಚೇರಿ ಎದುರಿನ ಹೋಟೆಲ್‌ನಲ್ಲಿ ಚಹಾ ಸೇವನೆ ಮಾಡಿದರು. ಅಲ್ಲಿದ್ದವರೊಂದಿಗೆ ಹರಟೆ ಹೊಡೆದರು. ಬಳಿಕ ಐಬಿ ಕಡೆ ನಡೆದುಕೊಂಡು ಹೋದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Narasimha Murti Pyati

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 17 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
Follow Us