ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ

| Updated By: ವಿವೇಕ ಬಿರಾದಾರ

Updated on: Aug 04, 2023 | 10:28 AM

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಚುಕ್ಕಾಣಿ ಹಿಡಿದಿರುವ ಬಿಜೆಪಿ, ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 82 ಜನ ಸದಸ್ಯರಿದ್ದು, 82 ಜನ ಸದಸ್ಯರಿಗೂ ಸರಿಸಮವಾಗಿ ಅನುದಾನ ಹಂಚಿಕೆಯಾಗುತ್ತಿಲ್ಲ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ
Follow us on

ಹುಬ್ಬಳ್ಳಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ (HDMC) ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಜೂನ್​ ತಿಂಗಳಲ್ಲಿ ನಡೆದಿದ್ದು ಸತತ ಎರಡನೇ ಬಾರಿಗೆ ಬಿಜೆಪಿ ಗೆಲುವು ಸಾದಿಸಿತ್ತು. ಇದೀಗ ಆಡಳಿತ ಪಕ್ಷದ ವಿರುದ್ಧ, ವಿರೋಧ ಪಕ್ಷದ ಸದಸ್ಯರು ಅನುದಾನ ಹಂಚಿಕೆ ವಿಚಾರವಾಗಿ ಗಂಭೀರ ಆರೋಪ ಮಾಡುತ್ತಿದ್ದಾರೆ. ಆಡಳಿತಾರೂಢ ಬಿಜೆಪಿ (BJP), ಪಾಲಿಕೆ ಸದಸ್ಯರ ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುತ್ತಿದೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ 82 ಜನ ಸದಸ್ಯರಿದ್ದು, 82 ಜನ ಸದಸ್ಯರಿಗೂ ಸರಿಸಮವಾಗಿ ಅನುದಾನ ಹಂಚಿಕೆಯಾಗುತ್ತಿಲ್ಲ.

ಅವಳಿ‌ನಗರದ ಅಭಿವೃದ್ದಿಗಾಗಿ 15 ನೇ ಹಣಕಾಸಿನಲ್ಲಿ ಬರೋಬ್ಬರಿ 40 ಕೋಟಿ ಅನುದಾನ ಬಿಡುಗಡೆಯಾಗಿದೆ. ಈ 40 ಕೋಟಿ ಅನುದಾನ ಹಂಚಿಕೆಯಲ್ಲಿ ಅನ್ಯಾಯವಾಗುತ್ತಿದೆ. ಸರಿಸಮವಾಗಿ ಅನುದಾನ‌ ಹಂಚಿಕೆ ಮಾಡದೆ ಪಾಲಿಕೆಯ ಬಿಜೆಪಿ ಸದಸ್ಯರಿಗೆ ಹೆಚ್ಚು ಅನುದಾನ ನೀಡಲಾಗುತ್ತಿದೆ. ಕಾಂಗ್ರೆಸ್​ ಸದಸ್ಯರಿಕೆ ಕಡಿಮೆ ಅನುದಾನ ನೀಡಿ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆಡಳಿತ ಪಕ್ಷದ ವಿರುದ್ಧ ಕಾಂಗ್ರೆಸ್​ ಸದಸ್ಯರು ಗಂಭೀರ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿ, ಧಾರವಾಡ, ಬೆಳಗಾವಿಯಿಂದ ಜಲಪಾತಗಳ ವೀಕ್ಷಣೆಗಾಗಿ ವಿಶೇಷ ಬಸ್ ವ್ಯವಸ್ಥೆ

ಈ ಅನ್ಯಾಯದ ಕುರಿತು ಪಾಲಿಕೆ ಕಾಂಗ್ರೆಸ್ ಸದಸ್ಯರು ಹಾಗೂ ವಿಪಕ್ಷ ನಾಯಕರು ಜಿಲ್ಲಾಧಿಕಾರಿಗಳಿಗೆ ದೂರು ನೀಡಲು ನಿರ್ಧರಿಸಿದ್ದಾರೆ. ಅಲ್ಲದೇ ಸರಿಯಾಗಿ ಅನುದಾನ ಹಂಚಿಕೆ ಮಾಡದೆ ಹೋದರೇ ನ್ಯಾಯಾಲಯದ ಮೊರೆ ಹೋಗಲು ಕಾಂಗ್ರೆಸ್ ಸದಸ್ಯರು ಮುಂದಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:27 am, Fri, 4 August 23