ಕೊರೊನಾ ಸೋಂಕು ಹೆಚ್ಚಳ: ಧಾರವಾಡ, ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

9, 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಟಿವಿ9ಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ವಿವರಿಸಿದ್ದಾರೆ. ಅವಳಿ ನಗರಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣವು ಶೇ 5ಕ್ಕಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ಕೊರೊನಾ ಸೋಂಕು ಹೆಚ್ಚಳ: ಧಾರವಾಡ, ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on: Jan 12, 2022 | 3:52 PM

ಧಾರವಾಡ: ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಧಾರವಾಡ ಮತ್ತು ಹುಬ್ಬಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಆದೇಶ ಹೊರಡಿಸಿದ್ದಾರೆ. ಅವಳಿ ನಗರಗಳು ಸೇರಿದಂತೆ ಎರಡೂ ತಾಲ್ಲೂಕು ವ್ಯಾಪ್ತಿಯಲ್ಲಿ 1ರಿಂದ 8ನೇ ತರಗತಿ ಮಕ್ಕಳಿಗೆ ನಾಳೆಯಿಂದ ಅನಿರ್ದಿಷ್ಟ ಅವಧಿಗೆ ರಜೆ ಘೋಷಿಸಲಾಗಿದೆ. ಶಾಲೆಗಳು ಮತ್ತೆ ಎಂದಿನಿಂದ ಆರಂಭವಾಗಲಿವೆ ಎಂಬುದನ್ನು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿಲ್ಲ. ‘ಮುಂದಿನ ಆದೇಶದವರೆಗೆ’ ಎಂದಷ್ಟೇ ಹೇಳಲಾಗಿದೆ. 15-18 ವರ್ಷದೊಳಗಿನವರಿಗೆ ಕೊರೊನಾ ಲಸಿಕೆ ನೀಡಲು ಅವಕಾಶವಿರುವ ಹಿನ್ನೆಲೆಯಲ್ಲಿ 9, 10ನೇ ತರಗತಿ ಹಾಗೂ ಪಿಯು ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಟಿವಿ9ಗೆ ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ವಿವರಿಸಿದ್ದಾರೆ. ಅವಳಿ ನಗರಗಳಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣವು ಶೇ 5ಕ್ಕಿಂತ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಜೆ ಘೋಷಿಸಲಾಗಿದೆ.

ಹುಬ್ಬಳ್ಳಿ ವಿಮಾನ ನಿಲ್ದಾಣ ಸಮೀಪವಿರುವ ಕೆಎಲ್​ಇ ಎಂಜಿನಿಯರಿಂಗ್ ಕಾಲೇಜಿನಲ್ಲಿ ಒಂದೇ ದಿನ 15 ಮಂದಿಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಸೋಂಕು ಪ್ರಮಾಣ ಹೆಚ್ಚಾದ ಹಿನ್ನೆಲೆಯಲ್ಲಿ ಭೌತಿಕ ತರಗತಿಗಳನ್ನು ರದ್ದುಗೊಳಿಸಿ ಆನ್​ಲೈನ್ ತರಗತಿ ನಡೆಸಲು ಕಾಲೇಜಿನ ಆಡಳಿತ ಮಂಡಳಿ ನಿರ್ಧರಿಸಿದೆ.

ದಾವಣಗೆರೆ: 71 ವಿದ್ಯಾರ್ಥಿಗಳಿಗೆ ಸೋಂಕು

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಮಾವಿನಹೊಳೆ ಬಳಿಯಿರುವ ಇಂದಿರಾಗಾಂಧಿ ವಸತಿ ಶಾಲೆಯ 71 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ. ನಿಟ್ಟುವಳ್ಳಿ ಮಾರುತಿ ಶಾಲೆಯಲ್ಲಿ ಐವರಿಗೆ ಸೋಂಕು ಕಾಣಿಸಿಕೊಂಡಿದೆ. ಅವರಗೊಳ್ಳ, ವಡ್ಡಿನಹಳ್ಳಿಯಲ್ಲಿ ಇಬ್ಬರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಜಗಳೂರಿನ ಎನ್​ಎಂಕೆ ಶಾಲೆಯಲ್ಲಿ 6, ಗವಿಸಿದ್ದೇಶ್ವರ ಶಾಲೆಯ ಮೂವರು ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಯಾವುದೇ ಕಾರಣಕ್ಕೂ ಜಿಲ್ಲೆಯ ಎಲ್ಲ ಶಾಲೆಗಳನ್ನು ಬಂದ್ ಮಾಡುವುದಿಲ್ಲ. ಸೋಂಕು ಕಾಣಿಸಿಕೊಂಡ ನಿರ್ದಿಷ್ಟ ಶಾಲೆಗಳನ್ನು ಮಾತ್ರ ಏಳು ದಿನ ಬಾಗಿಲು ಹಾಕುತ್ತೇವೆ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಮಕ್ಕಳ ಶಿಕ್ಷಣ ದೃಷ್ಟಿಯಿಂದ ಯಾವುದೇ ಶಾಲೆಗಳನ್ನು ಬಂದ್ ಮಾಡುವುದಿಲ್ಲ. ಆರೋಗ್ಯ ಇಲಾಖೆ ಕೂಡ ಟೆಸ್ಟಿಂಗ್ ಹೆಚ್ಚಿಸಲಿದೆ. ಏಕಾದಶಿ ಹಿನ್ನಲೆಯಲ್ಲಿ ಕೇವಲ 50 ಜನರಿಗೆ ಮಾತ್ರ ದೇಗುಲ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೊವಿಡ್ ನಿಯಮಾವಳಿ ಉಲ್ಲಂಘನೆ ‌ಮಾಡಿದವರಿಗೆ ಶಿಕ್ಷೆ ವಿಧಿಸಲಾಗುವುದು ಎಂದು ಹೇಳಿದರು. ಭಕ್ತಾದಿಗಳು ದೇವಾಲಯಗಳಿಗೆ ತೆರಳುವ ಬದಲು ಮನೆಗಳಲ್ಲಿಯೇ ಪ್ರಾರ್ಥನೆ ಮಾಡಬೇಕು ಎಂದು ಮನವಿ ಮಾಡಿದರು.

ಬೆಳಗಾವಿ: 46 ಬಾಲಕಿಯರಿಗೆ ಸೋಂಕು

ಬೆಳಗಾವಿ: ಕಿತ್ತೂರು ನಗರದ ಹೊರವಲಯದಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಬಾಲಕಿಯರ ಶಾಲೆಯಲ್ಲಿ 46 ವಿದ್ಯಾರ್ಥಿನಿಯರಿಗೆ ಕೊವಿಡ್ ಸೋಂಕು ದೃಢಪಟ್ಟಿದೆ. ಕಳೆದ 4 ದಿನಗಳಲ್ಲಿ ಸಿಬ್ಬಂದಿಯೂ ಸೇರಿದಂತೆ ಶಾಲೆಯ 148 ಮಂದಿಗೆ ಕೊರೊನಾ ದೃಢಪಟ್ಟಿದೆ. ವಸತಿ ನಿಲಯದ ಮಕ್ಕಳಿಗೆ ಐದು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ವೇಳೆ ತಪಾಸಣೆ ಮಾಡಿದಾಗ 80 ವಿದ್ಯಾರ್ಥಿಗಳು, 10 ಸಿಬ್ಬಂದಿಗೆ ಸೋಂಕು ಧೃಢಪಟ್ಟಿತ್ತು. ಪಾಸಿಟಿವ್ ಬಂದವರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಆರೋಗ್ಯ ಇಲಾಖೆಯು ತಪಾಸಣೆಗೆ ಒಳಪಡಿಸಿತ್ತು. 110 ಜನ ವಿದ್ಯಾರ್ಥಿಗಳ ಆರ್‌ಟಿಪಿಸಿಆರ್ ಟೆಸ್ಟ್ ಮಾಡಿದ ಈ ವೇಳೆ ಮತ್ತೆ 46 ವಿದ್ಯಾರ್ಥಿಗಳಿಗೆ ಸೋಂಕು ಧೃಡಪಟ್ಟಿತ್ತು. 148 ಜನರಿಗೆ ಆರೋಗ್ಯ ಇಲಾಖೆಯು ಶಾಲೆಯಲ್ಲಿ ಐಸೋಲೇಷನ್ ಮಾಡಿದೆ. ವಸತಿ ನಿಲಯದಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ಓದುತ್ತಿದ್ದರು‌‌. ಈಗಾಗಲೇ ಅರ್ಧದಷ್ಟು ವಿದ್ಯಾರ್ಥಿಗಳನ್ನ ಆಡಳಿತ ಮಂಡಳಿ ಮನೆಗಳಿಗೆ ಕಳುಹಿಸಿತ್ತು.

ಇದನ್ನೂ ಓದಿ: ಎಸ್​ಟಿ ಸೋಮಶೇಖರ್ ಪುತ್ರನಿಗೆ ಬ್ಲ್ಯಾಕ್​ಮೇಲ್ ಪ್ರಕರಣ: ಆರೋಪಿ ರಾಹುಲ್ ಭಟ್​ಗೆ ಕೊರೊನಾ ಪಾಸಿಟಿವ್

ಇದನ್ನೂ ಓದಿ: ಕೊರೊನಾದಿಂದ ತೀರಾ ಅಗತ್ಯ ಬಿದ್ದರೆ ಮಾತ್ರ ಶಾಲೆ ಬಂದ್ ಮಾಡಿ: ಎಲ್ಲ ಜಿಲ್ಲಾಧಿಕಾರಿಗಳಿಗೆ ಶಿಕ್ಷಣ ಸಚಿವ ನಾಗೇಶ್ ಸಲಹೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್