AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಹುಬ್ಬಳ್ಳಿಯ ಸಾಯಿನಗರದಲ್ಲಿ ಡಿಸೆಂಬರ್ 22 ರಂದು ಸಂಭವಿಸಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ನಾಲ್ವರ ಸ್ಥಿತಿ ಗಂಭೀರವಾಗಿದೆ. ಮೃತರಲ್ಲಿ ಶಂಕರ್ ಚವ್ಹಾಣ್ ಎಂಬುವರು ಕಿಮ್ಸ್ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು.

ಹುಬ್ಬಳ್ಳಿ ಸಿಲಿಂಡರ್​ ಸ್ಫೋಟ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ
ಮೃತ ಶಂಕರ್ ಚವ್ಹಾಣ್
ಶಿವಕುಮಾರ್ ಪತ್ತಾರ್
| Edited By: |

Updated on:Dec 29, 2024 | 8:24 AM

Share

ಹುಬ್ಬಳ್ಳಿ, ಡಿಸೆಂಬರ್​ 29: ಗ್ಯಾಸ್ ಸಿಲಿಂಡರ್ (Gas Cylinder) ಸ್ಫೋಟಗೊಂಡು ತೀವ್ರವಾಗಿ ಗಾಯಗೊಂಡು ಕಿಮ್ಸ್​ಗೆ (Kims) ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ (Ayyappa) ಮಾಲಾಧಾರಿ ಮೃತಪಟ್ಟಿದ್ದಾರೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ಮಾಲಾಧಾರಿ. ಮೃತರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ನಾಲ್ವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಉಣಕಲ್​ ನಿವಾಸಿಯಾಗಿದ್ದ ಶಂಕರ್ ಚವ್ಹಾಣ್, ಕಿಮ್ಸ್​ ಆಸ್ಪತ್ರೆಯಲ್ಲಿ ಕಳೆದ 13 ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು. ಶಂಕರ್​ ಚವ್ಹಾಣ್ ಬಾಲ್ಯದಲ್ಲೇ ತಂದೆ-ತಾಯಿಯನ್ನು ಕಳೆದುಕೊಂಡು ದೊಡ್ಡಮ್ಮನ ಆರೈಕೆಯಲ್ಲಿ ಬೆಳೆದಿದ್ದರು. ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ತೀರ್ವವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: ಸಿಲಿಂಡರ್ ಸ್ಪೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

ಶಂಕರ್​ ಚವ್ಹಾಣ್​ಗೆ ಕಳೆದ ಏಳು ದಿನಗಳಿಂದ ಕಿಮ್ಸ್​​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಂಕರ್​ ಚವ್ಹಾಣ್​ ಶನಿವಾರ ಮಧ್ಯರಾತ್ರಿ ​ಕೊನೆಯುಸಿರು ಎಳೆದಿದ್ದಾರೆ. ಶವಗಾರಾದ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಮಂದಿಯಲ್ಲಿ ಐವರು ಅಯ್ಯಪ್ಪ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ನಿಜಲಿಂಗಪ್ಪ ಬೇಪುರಿ (58), ಸಂಜಯ್ ಸವದತ್ತಿ (20), ರಾಜು ಮೂಗೇರಿ (21), ಲಿಂಗಾರಾಜು ಬೀರನೂರ (24), ಶಂಕರ್ ಚವ್ಹಾಣ್ (29) ಮೃತ ದುರ್ದೈವಿಗಳು. ಇನ್ನುಳಿದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ.

ಮೃತರಾದ ನಿಜಲಿಂಗಪ್ಪ ಬೇಪುರಿಯ ದೇಹ ಶೇ86 ರಷ್ಟು, ಸಂಜಯ್ ಸವದತ್ತಿಯ ದೇಹ ಶೇ80 ರಷ್ಟು, ರಾಜು ಮೂಗೇರಿಯ ದೇಹ ಶೇ74 ರಷ್ಟು, ಲಿಂಗಾರಾಜು ಬೀರನೂರ ದೇಹ ಶೇ86 ರಷ್ಟು, ಶಂಕರ್ ಚವ್ಹಾಣ್ ದೇಹ ಶೇ99 ರಷ್ಟು ಸುಟ್ಟಿತ್ತು.

ಇನ್ನು, ಚಿಂತಾಜನಕ ಸ್ಥಿತಿಯಲ್ಲಿರುವ ಮಂಜುನಾಥ್ ವಾಗ್ಮೋಡೆಯ ದೇಹ ಶೇ70 ರಷ್ಟು, ಪ್ರಕಾಶ್ ಬಾರಕೇರ್​ ದೇಹ ಶೇ91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:23 am, Sun, 29 December 24

Follow Us
Shivakumar Pattar
Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು