AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಸಿಲಿಂಡರ್​ ಬ್ಲಾಸ್ಟ್​: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ಡಿಸೆಂಬರ್ 22 ರಂದು ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಆರು ಜನರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನೆಯ ನಂತರ ಐದು ಜನರು ಅಯ್ಯಪ್ಪ ಮಾಲೆಯನ್ನು ತೆಗೆದಿದ್ದಾರೆ.

ಹುಬ್ಬಳ್ಳಿ ಸಿಲಿಂಡರ್​ ಬ್ಲಾಸ್ಟ್​: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು
ಸಿಲಿಂಡರ್​ ಸ್ಫೋಟಗೊಂಡ ಸ್ಥಳ, ಮೃತ ಅಯ್ಯಪ್ಪ ಮಾಲಾಧಾರಿ ರಾಜು
ಶಿವಕುಮಾರ್ ಪತ್ತಾರ್
| Edited By: ವಿವೇಕ ಬಿರಾದಾರ|

Updated on:Dec 27, 2024 | 8:53 AM

Share

ಹುಬ್ಬಳ್ಳಿ, ಡಿಸೆಂಬರ್​ 27: ಸಿಲಿಂಡರ್ ಸ್ಫೋಟಗೊಂಡು ತೀರ್ವವಾಗಿ ಗಾಯಗೊಂಡು ಕಿಮ್ಸ್​ಗೆ (KIMS) ದಾಖಲಾಗಿದ್ದ ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ (Ayyappa Maladhari) ಚಿಕಿತ್ಸೆ ಫಲಕಾರಿಯಾಗದೆ ಮೃತಪಟಿದ್ದಾರೆ. ರಾಜು ಮೂಗೇರಿ (16) ಮೃತ ದುರ್ದೈವಿ. ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.

ಡಿಸೆಂಬರ್​ 22ರಂದು ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಿಕಾರಿಗಳು ಗಾಯಗೊಂಡಿದ್ದರು. 9 ಜನರನ್ನು ಕಿಮ್ಸ್​ಗೆ ದಾಖಲಾಖಲಿಸಲಾಗಿತ್ತು. ಈಗವರೆಗೆ ಮೂವರು ಮೃತಪಟ್ಟಿದ್ದು, ಆರು ಜನರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ಚನ ಕಾಲೋನಿಯಲ್ಲಿ ಡಿಸೆಂಬರ್​ 22 ರಂದು ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡು 9 ಜನ ಮಾಲಾಧಾರಿಗಳು ಗಾಯಗೊಂಡಿದ್ದರು. 9 ಜನರಿಗೆ ಹುಬ್ಬಳ್ಳಿಯ‌ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗತಿತ್ತು. ಬೆಂಗಳೂರಿನಿಂದ ತಜ್ಞ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಗುರುವಾರ (ಡಿ.26) ಚಿಕಿತ್ಸೆ ಫಲಿಸದೆ ಇಬ್ಬರು ಮೃತಪಟ್ಟಿದ್ದರು. ಇಂದು (ಡಿ.27) ಮತ್ತೊಬ್ಬ ಅಯ್ಯಪ್ಪ ಮಾಲಧಾರಿ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ: ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

58 ವರ್ಷದ ನಿಜಲಿಂಗಪ್ಪ ಬೇಪುರಿ, 18 ವರ್ಷದ ಸಂಜಯ್ ಸವದತ್ತಿ, 16 ವರ್ಷದ ರಾಜು ಮೂಗೇರಿ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಮಾಲಾಧಾರಿಗಳು ಸಾವನ್ನಪ್ಪಿದ ಹಿನ್ನಲೆಯಲ್ಲಿ ಐವರು ಅಯ್ಯಪ್ಪನ ಮಾಲೆಯನ್ನು ತಗೆದಿದ್ದಾರೆ.

ಅಚ್ಚವ್ವನ ಕಾಲೋನಿಯ ಸನ್ನಿಧಿಯಲ್ಲಿ ಒಟ್ಟು 14 ಜನ ಮಾಲಾಧಾರಿಗಳಿದ್ದರು. ಅದರ ಪೈಕಿ ಸನ್ನಿಧಿಯ ಮೇಲಿನ ಕೋಣೆಯಲ್ಲಿ 9 ಜ‌ನ ಇದ್ದರು, ಕೆಳಗೆ 5 ಜನ ಇದ್ದರು. ಹೀಗಾಗಿ, ಆ ಐದು‌ ಜನರು ಮಾನಸಿಕವಾಗಿ ನೊಂದು ತಾವು ಧರಿಸಿದ್ದ ಮಾಲೆಯನ್ನು ತಗೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:52 am, Fri, 27 December 24

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು