ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನ ಮತ್ತು ಚಾಮರಾಜಪೇಟೆ ಈದ್ಗಾ ಮೈದಾನ ಸಂಬಂಧ ಇಂದು ತೀರ್ಪು ಹೊರ ಬಿದ್ದಿದೆ. ಅನೇಕ ದಿನಗಳಿಂದ ನಡೆಯುತ್ತಿದ್ದ ವಿವಾದಕ್ಕೆ ಮುಕ್ತಿ ಸಿಕ್ಕಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಆದ್ರೆ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರದ ಅಧಿಕಾರವನ್ನು ಮೇಯರ್ಗೆ ನೀಡಿ ಹೈ ಕೋರ್ಟ್ ಸುಮ್ಮನಾಗಿದೆ. ಹೀಗಾಗಿ ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು ಅರ್ಜಿದಾರರು ಮನವಿ ಮಾಡಿದ್ದಾರೆ.
ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಅರ್ಜಿದಾರರು ಮತ್ತೆ ಹೈಕೋರ್ಟ್ ಮೊರೆಹೋಗಿದ್ದಾರೆ. ‘ಸುಪ್ರೀಂ’ ಆದೇಶ ಹುಬ್ಬಳ್ಳಿ ಈದ್ಗಾ ಮೈದಾನಕ್ಕೂ ಅನ್ವಯಿಸಲು, ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶಿಸುವಂತೆ ಅರ್ಜಿದಾರರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ
ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ವಿಚಾರ ಸಂಬಂಧ ಯಥಾಸ್ಥಿತಿ ಎರಡೂ ಪಕ್ಷಗಳೂ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ನಾಳೆ ಗಣೇಶೋತ್ಸವ ಇಲ್ಲ. ಹೈಕೋರ್ಟ್ನಲ್ಲಿ ಮತ್ತೆ ಹೊಸದಾಗಿ ವಿಚಾರಣೆ ನಡೆಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠದಲ್ಲಿ ಹೊಸದಾಗಿ ಈದ್ಗಾ ಮೈದಾನದ ಬಗ್ಗೆ ವಿಚಾರಣೆ ನಡೆಸುವಂತೆ ಸುಪ್ರೀಂ ಆದೇಶಿಸಿದೆ. ವಕ್ಛ್ ಬೋರ್ಡ್ ಪರ ಕಪಿಲ್ ಸಿಬಲ್ ವಾದ ಮಂಡಿಸಿದರೆ, ಕರ್ನಾಟಕದ ಪರವಾಗಿ ವಕೀಲ ಮುಕುಲ್ ರೋಹಟಗಿ ವಾದ ಮಂಡಿಸಿದರು. ವಾದ ವಿವಾದಗಳ ಬಳಿಕ ಮೂವರು ನ್ಯಾಯಾಧೀಶರ ಪೀಠ ರಚನೆ ಮಾಡಿ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳಲು ತಿಳಿಸಿದೆ. ಇದನ್ನೂ ಓದಿ: ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ನಾಳೆ ಗಣೇಶೋತ್ಸವ ಇಲ್ಲ: ಯಥಾಸ್ಥಿತಿ ಕಾಯ್ದುಕೊಳ್ಳಲು ಸುಪ್ರೀಂಕೋರ್ಟ್ ಆದೇಶ
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:38 pm, Tue, 30 August 22