AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಅರೆಸ್ಟ್: ಆದರೆ ರಿಂಗ್ ಮಾಸ್ಟರ್ ಮಹಾನಾಯಕನೋ ಅಥವಾ ಮೀರ್‌ಸಾದಿಕ್? -ಬಿಜೆಪಿ ಟ್ವೀಟ್

ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ಮೂಲಕ ಹುಬ್ಬಳ್ಳಿಯಲ್ಲಿ ಗಲಭೆಗೆ ಮೂಲ ಕಾರಣನಾಗಿದ್ದ ವಿದ್ಯಾರ್ಥಿ ಅಭಿಷೇಕ್ ಹಿರೇಮಠನನ್ನು ಪರೀಕ್ಷೆ ಬರೆಸಲು ಪೊಲೀಸರು ಹುಬ್ಬಳ್ಳಿ ಉಪ ಕಾರಾಗೃಹದಿಂದ ಪ್ರಿಯದರ್ಶಿನಿ ಬಡಾವಣೆಯ ಮಹೇಶ್ ಪಿಯುಸಿ ಕಾಲೇಜಿಗೆ ಕರೆತಂದರು.

ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಅರೆಸ್ಟ್: ಆದರೆ ರಿಂಗ್ ಮಾಸ್ಟರ್ ಮಹಾನಾಯಕನೋ ಅಥವಾ ಮೀರ್‌ಸಾದಿಕ್? -ಬಿಜೆಪಿ ಟ್ವೀಟ್
ಹುಬ್ಬಳ್ಳಿ ಗಲಭೆ
TV9 Web
| Updated By: ಸಾಧು ಶ್ರೀನಾಥ್​|

Updated on:Apr 22, 2022 | 9:10 PM

Share

ಹುಬ್ಬಳ್ಳಿ: ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ, ಮತಾಂಧ ಅಲ್ಪಮತೀಯ‌ ಆರೋಪಿಗಳ ಬಂಧನವಾಗಿದೆ. ಆದರೆ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನವಾಗಿದೆ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ ಮಾಡಲಾಗಿದೆ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನವಾಗಿದೆ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನವಾಗಿದ್ದು, ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ. ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ ಆ ರಿಂಗ್‌ ಮಾಸ್ಟರ್‌ ಮಹಾನಾಯಕ ಆಗಿರಬಹುದೇ ಅಥವಾ ಮೀರ್‌ಸಾದಿಕ್ ಆಗಿರಬಹುದೇ ಎಂದು ರಾಜ್ಯ ಬಿಜೆಪಿ ಘಟಕ ಟ್ವೀಟ್​ ಮಾಡಿದೆ.

ಪ್ರಚೋದನಕಾರಿ ವಾಟ್ಸ್ಯಾಪ್ ಸ್ಟೇಟಸ್ ಮೂಲಕ ಹುಬ್ಬಳ್ಳಿಯಲ್ಲಿ ಗಲಭೆಗೆ ಮೂಲ ಕಾರಣನಾಗಿದ್ದ ವಿದ್ಯಾರ್ಥಿ ಅಭಿಷೇಕ್ ಹಿರೇಮಠನನ್ನು ಪರೀಕ್ಷೆ ಬರೆಸಲು ಪೊಲೀಸರು ಹುಬ್ಬಳ್ಳಿ ಉಪ ಕಾರಾಗೃಹದಿಂದ ಪ್ರಿಯದರ್ಶಿನಿ ಬಡಾವಣೆಯ ಮಹೇಶ್ ಪಿಯುಸಿ ಕಾಲೇಜಿಗೆ ಕರೆತಂದರು. ಪರೀಕ್ಷೆ ಬರೆಯಲು ಅಭಿಷೇಕ್​ಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 10.15 ಪಿಯುಸಿ ಪರೀಕ್ಷೆ ಆರಂಭವಾಗಿದೆ. ಹುಬ್ಬಳ್ಳಿಯ ಪ್ರಿಯದರ್ಶಿನಿ ಕಾಲೋನಿಯಲ್ಲಿರುವ ಪರೀಕ್ಷಾ ಕೇಂದ್ರ

ಮತ್ತೊಬ್ಬ ಪೊಲೀಸ್ ವಶಕ್ಕೆ ಹುಬ್ಬಳ್ಳಿ ಗಲಭೆ ಪ್ರಕರಣದ ಮುಖ್ಯ ಆರೋಪಿ ಅಭಿಷೇಕ್ ಹಿರೇಮಠಗೆ ವಿಡಿಯೊ ಕಳಿಸಿದ್ದ ಮತ್ತೋರ್ವನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ವಿವಾದಿತ ಪೋಸ್ಟ್​ ಮೂಲ ರೂವಾರಿ ಇವನೇ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Published On - 8:55 pm, Fri, 22 April 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?