AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಡಿಮೆಯಾದರೆ ವಿಜಯದಶಮಿಯಿಂದ ಜೆಡಿಎಸ್ ಹೋರಾಟ ಆರಂಭ; ಹೆಚ್.ಡಿ.ಕುಮಾರಸ್ವಾಮಿ

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಆಲಮಟ್ಟಿಯಿಂದ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ. ಎತ್ತಿನಹೊಳೆ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು.

ಕೊರೊನಾ ಕಡಿಮೆಯಾದರೆ ವಿಜಯದಶಮಿಯಿಂದ ಜೆಡಿಎಸ್ ಹೋರಾಟ ಆರಂಭ; ಹೆಚ್.ಡಿ.ಕುಮಾರಸ್ವಾಮಿ
ಹೆಚ್.ಡಿ.ಕುಮಾಸ್ವಾಮಿ
TV9 Web
| Edited By: |

Updated on:Aug 24, 2021 | 11:35 AM

Share

ಹುಬ್ಬಳ್ಳಿ: ಜನಾಶೀರ್ವಾದ ಯಾತ್ರೆಯಲ್ಲಿ (Janashirvada Yatra) ಯಾವುದೇ ಸಂದೇಶ ಇಲ್ಲ. ಗುಂಡು ಹಾರಿಸಿ ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ. ಹಾರ ತುರಾಯಿ ಹಾಕಿಕೊಂಡು ಜನಾಶೀರ್ವಾದ ಯಾತ್ರೆ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಹೇಳಿಕೆ ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ (HD Kumaraswamy), ಕೊರೊನಾ ನಿಯಮ ಕೂಡಾ ವ್ಯಾಪಕವಾಗಿ ಉಲ್ಲಂಘಿಸಲಾಗುತ್ತಿದೆ. ಕಾಂಗ್ರೆಸ್ ನಾಯಕರಿಂದಲೂ ಸಭೆ, ಸಮಾರಂಭಗಳಲ್ಲಿ ಕೊರೊನಾ ನಿಯಮ ಉಲ್ಲಂಘನೆಯಾಗಿದೆ. ರಾಜಕೀಯ ನಾಯಕರಾದ ನಾವೇ ನಿಯಮ ಉಲ್ಲಂಘಿಸುತ್ತಿದ್ದೇವೆ ಎಂದು ಹೇಳಿದರು.

ಕೃಷ್ಣಾ ಮೇಲ್ದಂಡೆ ಯೋಜನೆಗೆ ಆಗ್ರಹಿಸಿ ಆಲಮಟ್ಟಿಯಿಂದ, ಮಹದಾಯಿ ಯೋಜನೆಗಾಗಿ ಬೆಳಗಾವಿಯಿಂದ ಪಾದಯಾತ್ರೆ ಮಾಡುತ್ತೇವೆ. ಎತ್ತಿನಹೊಳೆ ಯೋಜನೆ ಜಾರಿಗೆ ಆಗ್ರಹಿಸಿ ಪಾದಯಾತ್ರೆ ಮಾಡುತ್ತೇವೆ ಎಂದು ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ರಾಷ್ಟ್ರೀಯ ಪಕ್ಷಗಳಿಂದ ರಾಜ್ಯಕ್ಕೆ ನ್ಯಾಯ ಸಿಗುತ್ತಿಲ್ಲ. ಪ್ರಾದೇಶಿಕ ಪಕ್ಷದಿಂದ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ. ಕೇಂದ್ರದ ಕಣ್ಣು ತೆರೆಸಲು ಪಾದಯಾತ್ರೆ ಮಾಡುತ್ತೇವೆ. ಕೊರೊನಾ ಕಡಿಮೆಯಾದರೆ ಇದೇ ವಿಜಯದಶಮಿಯಿಂದ ನಮ್ಮ ಹೋರಾಟ ಆರಂಭವಾಗುತ್ತದೆ ಎಂದು ಹೇಳಿದರು.

14 ತಿಂಗಳಲ್ಲಿ ಉತ್ತರ ಕರ್ನಾಟಕಕ್ಕೆ ನಾನೇನು ಮಾಡಿದ್ದೆ. ಈ ಭಾಗದ ನಾಯಕರು ಏನು ಮಾಡಿದ್ದಾರೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಲಿ. ಜೆಡಿಎಸ್ ಗೆಲ್ಲುವ ಸಾಧ್ಯತೆ ಇರುವ ಕ್ಷೇತ್ರಗಳಲ್ಲಿ ವರ್ಕ್​ಶಾಪ್ ಮಾಡುತ್ತೇವೆ. ಹಳ್ಳಿಹಳ್ಳಿಗೂ ಹೋಗಿ ಶಕ್ತಿ ತುಂಬುತ್ತೇವೆ. ಸಿದ್ದರಾಮಯ್ಯನವರಿಗೆ ಜೆಡಿಎಸ್ ಮುಗಿಸುವುದೇ ಕೆಲಸ. ಅವರು ಯಾವತ್ತೂ ಜನತಾ ಪರಿವಾರ ಅಂತ ಹೆಳಲೇ ಇಲ್ಲ. ಸಿಎಂ ಬೊಮ್ಮಾಯಿಯವರಲ್ಲಿ ಇನ್ನೂ ಸ್ವಲ್ಪ ಭಾವನೆ ಇದೆ. ಕಾಂಗ್ರೆಸ್ ಪರವಾಗಿ ನನ್ನ ನಿಲುವಿಲ್ಲ ಅಂತ ಹೆಚ್ಡಿಕೆ ಅಭಿಪ್ರಾಯಪಟ್ಟರು.

ಇನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಎಲೆಕ್ಷನ್ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ, 65-70 ವಾಡ್೯ಗಳಿಗೆ ಅಭ್ಯರ್ಥಿಗಳನ್ನ ಹಾಕುತ್ತೇವೆ. ಹಲವಾರು ವಿದ್ಯಾವಂತರಿಗೆ ಟಿಕೆಟ್ ನೀಡಿದ್ದೇವೆ. ಕಲಬುರಗಿಯಲ್ಲೂ ಎಲ್ಲಾ ವಾಡ್೯ಗಳಿಗೂ ಅಭ್ಯರ್ಥಿಗಳನ್ನ ಹಾಕುತ್ತೇವೆ. ಆದರೆ ಬೆಳಗಾವಿಯಲ್ಲಿ ನಮಗೆ ಸ್ವಲ್ಪ ಹಿನ್ನಡೆಯಿದೆ ಅಂತ ಅಭಿಪ್ರಾಯಪಟ್ಟರು.

ಇದನ್ನೂ ಓದಿ

ಶಾಲೆಗಳಿಗೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ; 1 ರಿಂದ 8ನೇ ತರಗತಿ ಆರಂಭದ ಬಗ್ಗೆಯೂ ಚರ್ಚೆ

ಶಾಲೆ ಆರಂಭ: ಕೊರೊನಾ ಬಗ್ಗೆಯೇ ಮಕ್ಕಳಿಗೆ ಮೊದಲ ಪಾಠ; ಜಾಗೃತಿ ಮೂಡಿಸುತ್ತಿರುವ ಶಿಕ್ಷಕರು

(If corona goes down we will start the protest from october said HD Kumaraswamy in hubli)

Published On - 11:30 am, Mon, 23 August 21

ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬೈಕ್​ ಸವಾರನ ರಕ್ಷಿಸಲು ಹೋಗಿ ಕಾರಿಗೆ ಲಾರಿ ಡಿಕ್ಕಿ, ಮೂವರು ಸಾವು
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?