PFI Ban ವಿರೋಧಿಸಿದರೆ ಜನ ಒದೆಯುತ್ತಾರೆ -ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ಕಂಡು ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಆದರೆ, ಪಿಎಫ್ ಐ ಭಯೋತ್ಪಾದಕ ಚಟುವಟಿಕೆಗಳು, ದೇಶ ದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ ಎಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪಿಎಫ್ ಐ ಮೇಲೆ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್ ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ವಾಗ್ದಾಳಿ ನಡೆಸಿದ್ದಾರೆ. ಪಿಎಫ್ ಐ ಬ್ಯಾನ್ (PFI Ban) ಕುರಿತಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಜೋಶಿ, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ಕಂಡು ಸಿದ್ದರಾಮಯ್ಯ ಹಾಗು ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್ ಐ ಭಯೋತ್ಪಾದಕ ಚಟುವಟಿಕೆಗಳು, ದೇಶ ದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂಥಹ ಸಂದರ್ಭದಲ್ಲಿ ಪಿಎಫ್ ಐ ಬ್ಯಾನ್ ಮಾಡಿರುವುದನ್ನ ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್ ಐ ಪರ ಮಾತನಾಡಿದ್ರೆ ಏಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತೆ ಎಂಬುದು ಕಾಂಗ್ರೆಸ್ ಗೆ ಚಿಂತೆಯಾಗಿದೆ.
ಪಿಎಫ್ ಐ ಬ್ಯಾನ್ ಮಾಡಿರುವ ಬಿಜೆಪಿ ಸರ್ಕಾರದ ನಿಲುವನ್ನ ವಿರೋಧಿಸಲು ಕಾಂಗ್ರೆಸ್ ಗೆ ಸಾಧ್ಯವಾಗ್ತಿಲ್ಲ. ಏಕಂದರೆ ಪಿಎಫ್ ಐ ವಿರುದ್ಧ ದೇಶ ದ್ರೋಹದ ಕೃತ್ಯಗಳ ಸಾಕಷ್ಟು ಸಾಕ್ಷಿಗಳು ನಮ್ಮ ಬಳಿ ಇವೆ. ಹೀಗಾಗಿ ಏನಾದರು ಮಾಡಿ ಮುಸ್ಲಿಂ ಒಲೈಕೆ ಮಾಡಬೇಕು ಎಂಬ ಕಾರಣಕ್ಕೆ ಆರ್ ಎಸ್.ಎಸ್ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ.
ಆರ್.ಎಸ್ ಎಸ್ ಎಂದರೆ ನಾವೇ. ಈ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಆರ್.ಎಸ್.ಎಸ್ ನಿಂದ ಬಂದವರು. ಆರ್.ಎಸ್.ಎಸ್ ಅನ್ನ ಯಾವ ಆಧಾರದ ಮೇಲೆ ಹೇಗೆ ಬ್ಯಾನ್ ಮಾಡ್ತೀರಾ.? ಈ ಹಿಂದೆ ಕಾಂಗ್ರೆಸ್ ಸರ್ಕಾರ ಮೂರು ಬಾರಿ ಆರ್.ಎಸ್ ಎಸ್ ಬ್ಯಾನ್ ಮಾಡಿತ್ತು. ಬ್ಯಾನ್ ಮಾಡಿ ಕಾಂಗ್ರೆಸ್ ಏನು ಸಾಧಿಸಿದೆ. ಆರ್.ಎಸ್.ಎಸ್ ವಿರುದ್ಧ ಒಂದೇ ಒಂದು ಸಾಕ್ಷಿಯನ್ನೂ ಪ್ರಸ್ತುತಪಡಿಸಲು ಕಾಂಗ್ರೆಸ್ ಗೆ ಸಾಧ್ಯವಾಗಿಲ್ಲ.
ಆರ್.ಎಸ್.ಎಸ್ ಒಂದು ರಾಷ್ಟ್ರೀಯವಾದಿ ಸಂಘಟನೆ. ದೇಶದ ಪರ ಕೆಲಸ ಮಾಡ್ತಿರುವ ಸಂಘಟನೆ. ಆದ್ರೆ ಪಿಎಫ್ ಐ ಸಂಘಟನೆ ಭಯೋತ್ಪಾದನಾ ಚಟುವಟಿಕೆಗಳನ್ನ ಪ್ರೇರೆಪಿಸುತ್ತಿರುವ ಕುರಿತು ಹಲವು ಸಾಕ್ಷ್ಯಗಳು ದೊರೆತಿವೆ. ದೇಶದಾದ್ಯಂತ ಹಲವು ಹತ್ಯೆಗಳಲ್ಲಿ ಈ ಸಂಘಟನೆ ಕೈವಾಡವಿರುವುದು ಸ್ಪಷ್ಟವಾಗಿದೆ. ಎಲ್ಲ ಸಾಕ್ಷಿಗಳನ್ನ ಕಲೆಹಾಕಿಯೇ ಕೇಂದ್ರ ಬಿಜೆಪಿ ಸರ್ಕಾರ ಪಿಎಫ್ ಐ ಬ್ಯಾನ್ ಮಾಡಿದೆ. ಇದು ರಾಷ್ಟ್ರೀಯ ಸುರಕ್ಷತೆಯ ವಿಚಾರ. ಇಂಥಹ ಸೂಕ್ಷ್ಮ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ. ಎಸ್.ಡಿ.ಪಿ.ಐ ಒಂದು ಪೊಲಿಟಿಕಲ್ ಪಾರ್ಟಿ. ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ತನ್ನ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಜೋಶಿ, ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.
Published On - 4:30 pm, Thu, 29 September 22