AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ

Narendra Modi: ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಎರಡು ಮೂರು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರ ಭೇಟಿ ವೇಳೆ ಧಾರವಾಡ ಐಐಟಿಯನ್ನ ಜನವರಿಯಲ್ಲಿ ಉದ್ಘಾಟಿಸಲು ಯೋಜಿಸಲಾಗಿದೆ - ಪ್ರಲ್ಹಾದ್ ಜೋಶಿ

IIT Dharwad: ಜ. 1ಕ್ಕೆ ಧಾರವಾಡ ಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ -ಪ್ರಧಾನಿ ಮೋದಿಯವರಿಂದ ಉದ್ಘಾಟನೆ
ಜ. 1ಕ್ಕೆ ಧಾರವಾಡ ಐಐಐಟಿ ಕಟ್ಟಡ ಉದ್ಘಾಟನೆ ತಯಾರಿಗೆ ಕೇಂದ್ರ ಸಚಿವ ಜೋಶಿ ಸೂಚನೆ
TV9 Web
| Edited By: ಸಾಧು ಶ್ರೀನಾಥ್​|

Updated on:Dec 10, 2022 | 4:09 PM

Share

ಧಾರವಾಡ: ಧಾರವಾಡದಲ್ಲಿ ನಿರ್ಮಾಣವಾಗುತ್ತಿರುವ ಐಐಟಿ ಕಟ್ಟಡ (II T-Dharwad) ಕಾಮಗಾರಿಯನ್ನು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಯವರು (Pralhad Joshi) ಇಂದು ಪರಿಶೀಲಿಸಿದರು. ಜನವರಿ 1 ರೊಳಗೆ ನೂತನ ಕಟ್ಟಡ ಕಾಮಗಾರಿ ಮುಗಿಸುವಂತೆ ಪ್ರಲ್ಹಾದ್ ಜೋಶಿ ಅಧಿಕಾರಿಗಳಿಗೆ ಇದೇ ವೇಳೆ ಸೂಚನೆ ನೀಡಿದ್ದಾರೆ.

ಕಾಮಗಾರಿ ವೀಕ್ಷಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿಯವರು, ಧಾರವಾಡ ಐಐಐಟಿ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಆಗಮಿಸಲು ಒಪ್ಪಿದ್ದಾರೆ. ಡಿಸೆಂಬರ್ ನಲ್ಲೇ ಉದ್ಘಾಟನೆಗೆ (Inauguration) ಯೋಜಿಸಲಾಗಿತ್ತು. ಆದರೆ ಕಾಮಗಾರಿಯ ಕೆಲಸ ಮುಗಿಯದ ಕಾರಣ ಜನವರಿ 1 ಕ್ಕೆ ಉದ್ಘಾಟನೆ ಮಾಡಲು ಚಿಂತಿಸಲಾಗಿದೆ. ಜನವರಿಗೆ ಕಾಮಗಾರಿ ಪೂರ್ಣಗೊಳಿಸಿ, ಉದ್ಘಾಟನೆಗೆ ತಯಾರಿ ಮಾಡುವಂತೆ ಅಧಿಕಾರಿಗಳಿಗೆ, ಗುತ್ತಿಗೆದಾರರಿಗೆ ನಿರ್ದೇಶನ ನೀಡಿದ್ದೇನೆ. ಮತ್ತೊಂದು ಬಾರಿ ಕಾಮಗಾರಿ ವೀಕ್ಷಿಸಿ, ಉದ್ಘಾಟನೆ ದಿನಾಂಕ ಫೈನಲ್ ಮಾಡುವುದಾಗಿ ಪ್ರಲ್ಹಾದ್ ಜೋಶಿ ಹೇಳಿದರು.

ಜನವರಿ ತಿಂಗಳಲ್ಲಿ ಪ್ರಧಾನಿ ಮೋದಿ ಅವರು ಎರಡು ಮೂರು ಬಾರಿ ಕರ್ನಾಟಕಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರೊಂದಿಗೆ ಚರ್ಚೆ ನಡೆಸಿದ್ದೇನೆ. ಅವರ ಭೇಟಿ ವೇಳೆ ಧಾರವಾಡ ಐಐಟಿಯನ್ನ ಜನವರಿಯಲ್ಲಿ ಉದ್ಘಾಟಿಸಲು ಯೋಜಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.

Also Read:

ಕರ್ನಾಟಕದಲ್ಲಿ ಕನ್ನಡದಲ್ಲೇ ಮಾತನಾಡಬೇಕು, ಕನ್ನಡದಲ್ಲೇ ವ್ಯವಹರಿಸಬೇಕು: ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ

Published On - 3:46 pm, Sat, 10 December 22

Follow Us
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ