ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ

ಇತ್ತೀಚೆಗೆ ಕ್ಷುಲ್ಲಕ ಕಾರಣಗಳಿಗೆ ಬಾಳಿ ಬದುಕಬೇಕಾದ ಯುವಕ-ಯುವತಿಯರು ಜೀವತೊರೆಯುತ್ತಿದ್ದಾರೆ. ಅದರಂತೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಪ್ರೇಮ ವೈಫಲ್ಯ; ಲಾಡ್ಜ್​ಗೆ​​ ಹೋಗಿ ಪ್ರಾಣ ಬಿಟ್ಟ ಯುವಕ
ಧಾರವಾಡದಲ್ಲಿ ಯುವಕ ವಿಷ ಸೇವಿಸಿ ಆತ್ಮಹತ್ಯೆ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಕಿರಣ್ ಹನುಮಂತ್​ ಮಾದಾರ್

Updated on:Sep 08, 2024 | 2:50 PM

ಧಾರವಾಡ, ಸೆ.08: ಪ್ರೇಮ‌ ವೈಫಲ್ಯ ಹಿನ್ನೆಲೆ ಯುವಕ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡ (Dharwad)ದ ರೈಲ್ವೆ ನಿಲ್ದಾಣ ಬಳಿಯ ಶ್ರೀನಿವಾಸ್ ಲಾಡ್ಜ್​​ನಲ್ಲಿ‌ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಸಿಗೆಹಡ್ಲು ಕಾಮನಕೆರೆ ನಿವಾಸಿ ಚಿನ್ಮಯ್ ಎಸ್.ಜಿ, ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ ಸೆ.04 ರಂದು ಶ್ರೀನಿವಾಸ್ ಲಾಡ್ಜ್​ನ ರೂಮ್ ನಂ. 212 ರಲ್ಲಿ ತಂಗಿದ್ದ. ಸೆ. 6 ರಂದು ಸಂಜೆ ರೂಮ್ ಕ್ಲೀನ್ ಮಾಡಲು ಲಾಡ್ಜ್ ಸಿಬ್ಬಂದಿ ಹೋಗಿದ್ದ ವೇಳೆ ರೂಮ್ ಒಳಗಿನಿಂದ ಲಾಕ್ ಆಗಿತ್ತು.

ಈ ಹಿನ್ನಲೆ ಮಾರನೇ ದಿನ(ಸೆ. 7) ರಾತ್ರಿ ಲಾಡ್ಜ್ ಸಿಬ್ಬಂದಿ ಮತ್ತೆ ರೂಮ್ ಬಾಗಿಲು ತಟ್ಟಿದ್ದಾನೆ. ಆದರೂ ಚಿನ್ಮಯ್ ಬಾಗಿಲು ತೆರೆಯದ ಹಿನ್ನಲೆ ಅನುಮಾನಗೊಂಡು ಮತ್ತೊಂದು ಬೀಗ ಬಳಸಿ ಲಾಕ್ ಓಪನ್ ಮಾಡಿದ್ದಾರೆ. ಬಾಗಿಲು ತೆಗೆದಾಗ ಯುವಕ ಚಿನ್ಮಯ್​​ ಶವವಾಗಿ ಬಿದ್ದಿದ್ದ. ಕೂಡಲೇ ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಲವರ್ ಜೊತೆ ರಾತ್ರಿ ಲಾಡ್ಜ್​ನಲ್ಲಿದ್ದ ಅಪ್ರಾಪ್ತ ಬಾಲಕಿ ಮನೆಗೆ ಬಂದಕೂಡಲೆ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ?

ಬೈಕ್, ಆಟೋ ನಡುವೆ ಮುಖಾಮುಖಿ ಡಿಕ್ಕಿ; ಮೂವರಿಗೆ ಗಂಭೀರ ಗಾಯ

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಬಳಿ ಬೈಕ್ ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ. ಗಾಯಾಳುಗಳಿಗೆ ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಈ ಕುರಿತು ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:40 pm, Sun, 8 September 24

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ