AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಮಾ.12ರಂದು ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂನ್ನು ಉದ್ಘಾಟನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ

ವಿಶ್ವದರ್ಜೆಯ ಪ್ಲಾಟ್ ಫಾರಂ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್ ಫಾರಂ ಅನ್ನು ಮಾ.12 ರಂದು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ.

ಹುಬ್ಬಳ್ಳಿ: ಮಾ.12ರಂದು ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್ ಫಾರಂನ್ನು ಉದ್ಘಾಟನೆ ಮಾಡಲಿರುವ ಪ್ರಧಾನಿ ನರೇಂದ್ರ ಮೋದಿ
ವಿಶ್ವದ ಅತಿದೊಡ್ಡ ರೈಲ್ವೆ ಪ್ಲಾಟ್​ ಪಾರ್ಮ್​ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಕಿರಣ್ ಹನುಮಂತ್​ ಮಾದಾರ್
|

Updated on:Mar 11, 2023 | 2:19 PM

Share

ಹುಬ್ಬಳ್ಳಿ: ವಿಶ್ವದರ್ಜೆಯ ಪ್ಲಾಟ್ ಫಾರಂ ಆಗಿ ಹೊರ ಹೊಮ್ಮಿರುವ ನೈಋತ್ಯ ರೈಲ್ವೆ ವಲಯದ ಹುಬ್ಬಳ್ಳಿಯ ರೈಲ್ವೆ ಪ್ಲಾಟ್ ಫಾರಂ ಅನ್ನು ಅಧಿಕೃತವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಉದ್ಘಾಟನೆ ಮಾಡಲಿದ್ದಾರೆ. ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ ಉದ್ಘಾಟನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಮಾಡಲಿದ್ದಾರೆ. ಹೌದು ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್ 12 ರಂದು ಹುಬ್ಬಳ್ಳಿಧಾರವಾಡಕ್ಕೆ ಭೇಟಿ ನೀಡಿದಾಗಲೇ ಹುಬ್ಬಳ್ಳಿಯಲ್ಲಿರುವ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ನ್ನು ಅಧಿಕೃತವಾಗಿ ಲೋಕಾರ್ಪಣೆಗೊಳಿಸಲಿದ್ದಾರೆ ಎಂದು ನೈಋತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅನೀಶ್ ಹೆಗ್ಡೆ ಸ್ಪಷ್ಟಪಡಿಸಿದ್ದಾರೆ.

ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಇದಕ್ಕೂ ಮುನ್ನ 1ನೇ ಪ್ಲಾಟ್‌​ಫಾರಂ 550 ಮೀಟರ್‌ ಉದ್ದ ಹೊಂದಿತ್ತು. ಇದೀಗ ಈ ಪ್ಲಾಟ್​ಫಾರಂನ್ನು ವಿಸ್ತರಿಸಿ 10 ಮೀಟರ್‌ ಅಗಲದೊಂದಿಗೆ 1,505 ಮೀಟರ್​ಗೆ ವಿಸ್ತರಣೆ ಮಾಡಲಾಗಿದೆ. ಹುಬ್ಬಳ್ಳಿಯಲ್ಲಿ ಈ ಹೊಸ ರೈಲು ಪ್ಲಾಟ್​ಫಾರಂ ಲೋಕಾರ್ಪಣೆ ಮಾಡಿದ ನಂತರ 1,366 ಮೀಟರ್ ಉದ್ದದ ಗೋರಖ್‌ಪುರ ರೈಲು ನಿಲ್ದಾಣವನ್ನು ಇದು ಹಿಂದಿಕ್ಕಲಿದೆ.

ಇದನ್ನೂ ಓದಿ:Sumalatha Ambareesh: ಅಭಿವೃದ್ಧಿಗೆ ಮತ್ತೊಂದು ಹೆಸರೇ ಪ್ರಧಾನಿ ಮೋದಿ; ಸುಮಲತಾ ಬಣ್ಣನೆ

ಐಐಟಿ ಕ್ಯಾಂಪಸ್​ನಿಂದಲೇ ಶ್ರೀ ಸಿದ್ದಾರೂಢ ಸ್ವಾಮಿ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ಅಭಿವೃದ್ಧಿಪಡಿಸಿದ ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್‌ ಲೋಕಾರ್ಪಣೆಯನ್ನು ಸಾಂಕೇತಿಕವಾಗಿ ಮಾಡಲಿದ್ದಾರೆ ಎನ್ನಲಾಗಿದೆ. ವಿಶ್ವದ ಅತಿ ಉದ್ದದ ವೇದಿಕೆ ಎರಡು ವರ್ಷಗಳ ಹಿಂದೆ ಉದ್ಘಾಟನೆಗೆ ಸಿದ್ಧವಾಗಿತ್ತು. ಕಳೆದ ಅಕ್ಟೋಬರ್‌ನಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹುಬ್ಬಳ್ಳಿಧಾರವಾಡ ಅವಳಿ ನಗರಕ್ಕೆ ಭೇಟಿ ನೀಡಿದರೂ ಈ ಪ್ಲಾಟ್​ಫಾರಂ ಉದ್ಘಾಟನೆ ಮಾಡಿರಲಿಲ್ಲ. ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ ಈ ಪ್ಲಾಟ್​ಫಾರಂ ಉದ್ಘಾಟನೆ ಮಾಡಲಿದ್ದಾರೆ ಎಂದು ಈ ಮುನ್ನವೇ ತಿಳಿಸಲಾಗಿತ್ತು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:33 am, Sat, 11 March 23