ರಾಜ್ಯ-ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ: ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ

ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ರಾಷ್ಟ್ರ ರಾಜಕಾರಣ‌, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದ್ದು, ಯುಗಾದಿ ನಂತರ ಏನಾಗುತ್ತೇ ಎಂದು‌ ಕಾದು‌ನೋಡಿ ಎಂದು ಹೇಳಿದ್ದಾರೆ.

ರಾಜ್ಯ-ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ: ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
Follow us
|

Updated on:Sep 11, 2023 | 3:30 PM

ಹುಬ್ಬಳ್ಳಿ, ಸೆ.11: ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ (Shivananda Shivayogi Rajendra Swamiji of Kodi Math) ಮತ್ತೊಂದು ಭವಿಷ್ಯವಾಣಿ ನುಡಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ ಉಂಟಾಗಲಿದೆ ಎಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದ್ದಾರೆ. ರಾಷ್ಟ್ರ ರಾಜಕಾರಣ‌, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದ್ದು, ಯುಗಾದಿ ನಂತರ ಏನಾಗುತ್ತೇ ಎಂದು‌ ಕಾದು‌ನೋಡಿ ಎಂದು ಹೇಳಿದ್ದಾರೆ. ಈ ಹಿಂದೆಯು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿರುವ ಭವಿಷ್ಯವಾಣಿಗಳು ನಿಜವಾಗಿದೆ ಎಂಬುದಕ್ಕೆ ಅನೇಕ ಘಟನೆಗಳೇ ಸಾಕ್ಷಿಯಾಗಿದೆ. ಇದೀಗ ರಾಷ್ಟ್ರ ಮತ್ತು ರಾಜ್ಯ ರಾಜಕೀಯದಲ್ಲಿ ಮಹತ್ವ ಬೆಳವಣಿಗಳು ಕಾಣಲಿದೆ ಎಂದು ಹೇಳಿದ್ದಾರೆ.

ಯುಗಾದಿವರೆಗೂ ಸಮಯ ಇದೆ. ನಂತರ ರಾಜಕೀಯ ಅಸ್ಥಿರತೆ ಉಂಟಾಗಿದೆ. ಇದರ ಜತೆಗೆ ರಾಜ್ಯದಲ್ಲಿ ಬರಗಾಲದ ಛಾಯೆ ವಿಚಾರದ ಬಗ್ಗೆಯು ತಿಳಿಸಿದ್ದು, ಮನುಷ್ಯ ಮಾಡಿದ ತಪ್ಪುಗಳನ್ನು ದೇವರು ಕ್ಷಮಿಸುತ್ತಾನೆ. ಆದರೆ ಮನುಷ್ಯ ಮಾಡಿದ ಪಾಪ‌ಕರ್ಮಗಳು ಮನುಷ್ಯನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.

ಮನುಷ್ಯನ‌ ಪಾಪಕರ್ಮಗಳೇ ಇಂತಹ ಪರಿಸ್ಥಿತಿಗೆ ಕಾರಣ. ಮನುಷ್ಯನ‌ ಕರ್ಮ ಭಾದೆಗಳು ಹೆಚ್ಚಾದಾಗ ಇಂತಹ ದುಸ್ಥಿತಿಗಳನ್ನು ಸಾಮೂಹಿಕವಾಗಿ ಅನುಭವಿಸಬೇಕಾಗುತ್ತದೆ. ಶ್ರಾವಣ ಮಾಸದ ಮಧ್ಯಭಾಗದಲ್ಲಿ ಮಳೆಯಾಗಿದೆ. ಅಮಾವಾಸ್ಯೆ ಕಳೆದ ನಂತರ ಇನ್ನೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿ ಮುಂದುವರಿಯುತ್ತಾರಾ? ಕೋಡಿಮಠ ಸ್ವಾಮೀಜಿ ಭವಿಷ್ಯ ಹೀಗಿದೆ

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರಿಸಿದ ಸ್ವಾಮೀಜಿ, ಅದು ಅವರವರ ವಿಚಾರ, ಅದರ ಬಗ್ಗೆ ಹೇಳಲು ಆಗುವುದಿಲ್ಲ ಎಂದು ಹೇಳಿದ್ದಾರೆ. ಇನ್ನು ತಮಿಳುನಾಡಿನ ಸಚಿವ ಉದಯ್​​ ಸ್ಟಾಲಿನ್ ನೀಡಿದ ಸನಾತನ ಧರ್ಮದ ವಿಚಾರಕ್ಕೆ ಉತ್ತರಿಸಿದ ಅವರು ಇದು ಅವರವರ ಧರ್ಮದವರ ಹೇಳಿಕೆ. ಅದು ಅವರ‌ ನೋವಿನ ಸಂಗತಿ, ಎಲ್ಲಾ ಜನಾಂಗದಲ್ಲಿಯೂ ಅವರವರ ನೋವು ಇರುತ್ತದೆ. ಅದನ್ನು ಈ ರೀತಿ ನೋವಿನ‌ ಮೂಲಕ ಹೊರಹಾಕುತ್ತಾರೆ. ಧರ್ಮದ ವಿಚಾರದಲ್ಲಿ ರಾಜಕೀಯ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದ್ದಾರೆ .

ಉದಯನಿಧಿ ಸ್ಟಾಲಿನ್ ಅವರು ಈ ವಿಚಾರವನ್ನು ಯಾವ ನೋವಿನಿಂದ ಹೇಳಿದ್ದಾರೋ ಗೊತ್ತಿಲ್ಲ. ಆಯಾ ಧರ್ಮದಲ್ಲಿರೋರು ತಮಗಾಗಿರೋ‌ ನೋವಿನಿಂದಾಗಿ ಈ ರೀತಿ‌ ಹೇಳಿಕೆ ನೀಡುತ್ತಾರೆ. ಜನರಲ್ಲಿ ಪೂರ್ಣವಾದ ಜ್ಞಾನದ‌ ಕೊರತೆ ಇದೆ. ಪೂರ್ಣವಾದ ಅರಿವಿನ ಕೊರತೆಯಿಂದಾಗಿ ಈ ರೀತಿ ಧರ್ಮ, ರಾಜಕೀಯ ವಿಚಾರ ಮುನ್ನೆಲೆಗೆ ತರುತ್ತಾರೆ. ಧರ್ಮ‌ ಎಂದರೆ ನೆಮ್ಮದಿ,‌ಶಾಂತಿ ನಿಜವಾದ ಜ್ಞಾನ ಮೂಡಿಸುತ್ತದೆ. ಆದರೆ ಅದರಲ್ಲಿ ನೆಮ್ಮದಿ, ಶಾಂತಿ ಕಂಡುಕೊಳ್ಳದವರಿಂದ‌ ಈ ರೀತಿ ಅಸಮಾಧಾನ‌ ಮೂಡುತ್ತದೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:13 pm, Mon, 11 September 23

ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ