ಮೀಟರ್, ತಿಂಗಳ ಬಡ್ಡಿ ಸೇರಿದಂತೆ ಬಡ್ಡಿ ವ್ಯವಹಾರ ಬಂದ್ ಮಾಡ್ಬೇಕು: ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ

ಛೋಟಾ ಮುಂಬೈ ಹುಬ್ಬಳ್ಳಿಯಲ್ಲಿ ಮೀಟರ್ ಬಡ್ಡಿ ದಂಧೆ ದೊಡ್ಡ ಪ್ರಮಾಣದಲ್ಲಿ ಬೇರು ಬಿಟ್ಟಿದೆ. ಪೊಲೀಸರು ಚಾಪೆ ಕೆಳಗೆ ನುಸಿಳಿದರೆ, ಬಡ್ಡಿಕೋರರು ರಂಗೋಲಿ ಕೆಳಗೆ ನುಸುಳುತ್ತಿದ್ದಾರೆ. ಇಷ್ಟು ದಿನ ಯುವಕರನ್ನ ಟಾರ್ಗೆಟ್ ಮಾಡುತ್ತಿದ್ದ ಬಡ್ಡಿ ದಂಧೆಕೊರರು, ಈಗ ಅಪ್ರಾಪ್ತರನ್ನ ಖೆಡ್ಡಾಗೆ ಕೆಡವಿದ್ದಾರೆ. ಮೀಟರ್ ಬಡ್ಡಿ ಹಣವನ್ನ ನೀಡದೆ ಹೋದರೆ ಅಂತವರ ಉಸಿರು ನಿಲ್ಲಿಸುವ ಹಂತಕ್ಕೆ ದಂಧೆಕೋರರು ಬಂದು ನಿಂತಿದ್ದಾರೆ. ಇದೀಗ ಬಡ್ಡಿ ವ್ಯವಹಾರ ಬಂದ್ ಮಾಡಬೇಕು ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಮೀಟರ್, ತಿಂಗಳ ಬಡ್ಡಿ ಸೇರಿದಂತೆ ಬಡ್ಡಿ ವ್ಯವಹಾರ ಬಂದ್ ಮಾಡ್ಬೇಕು: ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ
ಹುಬ್ಬಳ್ಳಿ ಪೊಲೀಸ್ ಆಯುಕ್ತ ಖಡಕ್ ಎಚ್ಚರಿಕೆ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 21, 2024 | 10:35 PM

ಹುಬ್ಬಳ್ಳಿ, ಆ.21: ವಾಣಿಜ್ಯ ನಗರಿ ಹುಬ್ಬಳ್ಳಿ(Hubballi)ಯಲ್ಲಿ ದೋ ನಂಬರ್ ದಂಧೆಗಳು ಎಗ್ಗಿಲ್ಲದೆ ನಡೆಯುತ್ತಿವೆ. ಇವುಗಳನ್ನ ಮಟ್ಟ ಹಾಕಲು ಪೋಲೀಸರು ಎಷ್ಟೇ ಪ್ರಯತ್ನ ಮಾಡಿದರೂ ದಂಧೆಗಳು ಮಾತ್ರ ನಿಲ್ಲುತ್ತಿಲ್ಲ. ಈ ದೋ ನಂಬರ್​ ದಂಧೆಗಿಂತ ಈಗ ಹುಬ್ಬಳ್ಳಿಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡಿತ್ತಿರುವುದು ಮೀಟರ್ ಬಡ್ಡಿ ದಂಧೆ. ಈ ದಂಧೆಕೋರರ ಕಾಟಕ್ಕೆ ಅದೆಷ್ಟೋ ಜನರು ಜೀವವನ್ನೇ ಕಳೆದುಕೊಂಡಿದ್ದಾರೆ. ಮೀಟರ್ ಬಡ್ಡಿ ದಂಧೆಕೋರರಿಗೆ ಪೊಲೀಸರು ಅದೆಷ್ಟೇ ಬಿಸಿ ಮುಟ್ಟಿಸಿದರೂ ಈ ದಂಧೆಗೆ ಫುಲ್ ಸ್ಟಾಪ್ ಮಾತ್ರ ಬೀಳುತ್ತಿಲ್ಲ.

ಶಾಲಾ ವಿದ್ಯಾರ್ಥಿಗಳನ್ನ ಬಳಸಿಕೊಂಡು ಮೀಟರ್ ಬಡ್ಡಿ ದಂಧೆ

ಇಷ್ಟು ದಿನ ಯುವಕರನ್ನ ಮತ್ತು ವ್ಯಾಪಾರಸ್ಥರನ್ನ ಟಾರ್ಗೆಟ್ ಮಾಡುತ್ತಿದ್ದ ದಂಧೆಕೋರರು ಈಗ ಶಾಲಾ ವಿದ್ಯಾರ್ಥಿಗಳನ್ನ ಬಳಸಿಕೊಂಡು ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದಾರೆ. ವಿವಿಧ ರೀತಿಯ ಆಮಿಷವನ್ನ ನೀಡಿ, ಅವರಿಗೆ ಮೀಟರ್ ಬಡ್ಡಿಯಲ್ಲಿ ಹಣ ನೀಡುತ್ತಿದ್ದಾರೆ. ಹಣ ತೆಗೆದುಕೊಂಡ ವಿದ್ಯಾರ್ಥಿಗಳು ಬಡ್ಡಿ ಕಟ್ಟದೆ ಹೋದರೆ ಧಮ್ಕಿ ಹಾಕಿ ಅವರ ಮೇಲೆ ಹಲ್ಲೆ ಮಾಡುವಂತಹ ಘಟನೆಗಳು ಹುಬ್ಬಳ್ಳಿಯಲ್ಲಿ ನಡೆಯುತ್ತಿದೆ. ಈಗ ಅಂತಹುದೇ ಒಂದು ಘಟನೆ ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೀಟರ್ ಬಡ್ಡಿ ವ್ಯವಹಾರ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಮಹಮ್ಮದ್ ಸೋಫಿಯಾನ್ ಗೆ ಸಲೀಂ ಚಾಕು ಇರಿದಿದ್ದಾನೆ. ಮಹಮ್ಮದ್‌ಗೆ ಕುತ್ತಿಗೆ ಭಾಗದಲ್ಲಿ ಚಾಕು ಇರಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದಾನೆ.

ಇದನ್ನೂ ಓದಿ:ಮೀಟರ್ ಬಡ್ಡಿ ವ್ಯವಹಾರ ನಡೆಸುತ್ತಿದ್ದವನ ಮನೆ ಮೇಲೆ ಸಿಸಿಬಿ ದಾಳಿ

ಬಡ್ಡಿ ವಿಚಾರವಾಗಿ ಹಲ್ಲೆ

ಕೂಡಲೇ ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕಾರ್ಯಾಚರಣೆ ನಡೆಸಿ ಹಲ್ಲೆ ನಡೆಸಿದ 10 ನೇ ತರಗತಿ ವಿದ್ಯಾರ್ಥಿ ಸಲೀಂನನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ವಿಚಾರಣೆ ವೇಳೆ ಹತ್ತು ಸಾವಿರ ಸಾಲದ ಬಡ್ಡಿ ವಿಚಾರವಾಗಿ ಹಲ್ಲೆ ನಡೆಸಿರುವ ಭಯಾನಕ ವಿಷಯ ಹೊರಬಿದ್ದಿದೆ. ಈ ಮೊದಲು ಹಲ್ಲೆಗೆ ಒಳಗಾದ ಬಾಲಕ ಮಹಮ್ಮದ್‌ನನ್ನ 10 ರಿಂದ 12 ಜನರ ಗುಂಪು ಒತ್ತಾಯಪೂರ್ವಕವಾಗಿ ಕರೆದೊಯ್ದು ಮನಬಂದಂತೆ ಥಳಿಸಿ ಬಡ್ಡಿ, ಅಸಲು ಕೊಡುವಂತೆ ಪೀಡಿಸಿದ್ದಾರೆ. ಆ ಬಳಿಕ ಅಪ್ರಾಪ್ತನ ಪೋಷಕರನ್ನು ಕರೆಸಿ ವಿಷಯವನ್ನು ಗಮನಕ್ಕೆ ತಂದಿದ್ದಾರೆ. ಅಷ್ಟೇ ಅಲ್ಲದೇ ಬಾಲಕನನ್ನು ಬಿಟ್ಟು ಕಳಿಸಿದ್ದಾರೆ. ನಂತರ ಸ್ವಲ್ಪ ಸಮಯದ ಬಳಿಕ ಪುನಃ ಮಹಮ್ಮದ್‌ನನ್ನ ಕರೆಸಿಕೊಂಡು ಚಾಕುವಿನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

ಬಡ್ಡಿಕುಳಗಳಿಗೆ ಕಮಿಷನರ್ ಎಚ್ಚರಿಕೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲ್ಲೆ ನಡೆಸಿದ ಆರೋಪಿ ಸಲೀಂ ಹಾಗೂ ಮತ್ತೆ ಕೆಲವರನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆ ನಡೆಸಿದ್ದಾರೆ. ಈ ವೇಳೆ ಬಡ್ಡಿಕುಳಗಳಿಗೆ ಕಮಿಷನರ್ ಎಚ್ಚರಿಕೆ ನೀಡಿದ್ದಾರೆ. ಬಡ್ಡಿ ದಂಧೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಅಪ್ರಾಪ್ತ ಮಕ್ಕಳನ್ನು ಬಳಸಿಕೊಂಡು, ಅವರಿಂದಲೇ ಬಡ್ಡಿ ಹಣ ವಸೂಲಿ ಮಾಡುತ್ತಿದ್ದಾರೆ. ಪೊಲೀಸ್ ಕಮಿಷನರೇಟ್ ಈ ಕುರಿತು ಗಂಭೀರವಾಗಿ ತೆಗೆದುಕೊಂಡಿದ್ದು, ಮುಂದಿನ ದಿನಗಳಲ್ಲಿ ಬಡ್ಡಿಕುಳಗಳ ಹೆಡೆಮುರಿ ಕಟ್ಟಲಾಗುವುದು. ಈಗಾಗಲೇ ಈ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ‌‌. ಯಾರೇ ಮೀಟರ್ ಬಡ್ಡಿ, ವಾರದ ಬಡ್ಡಿ, ತಿಂಗಳ ಬಡ್ಡಿ ವ್ಯವಹಾರ ಮಾಡುತ್ತಿದ್ದರೆ ಅವುಗಳನ್ನು ಬಂದ್ ಮಾಡಬೇಕು. ಇಲ್ಲವಾದರೇ ಅಂತವರ ವಿರುದ್ಧ ನಾವು ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಡ್ರಗ್ಸ್ ಡ್ರೈವ್ ಮಾಡಿದಂತೆ ಮೀಟರ್ ಬಡ್ಡಿ ದಂಧೆಕೋರರ ಡ್ರೈವ್ ಮಾಡಲು ಚಿಂತನೆ ನಡೆಸಿದ್ದಾರೆ‌‌. ಈಗಾಗಲೇ ಆಯಾ ಪೊಲೀಸ್ ಠಾಣೆಯಲ್ಲಿ ಅನುಮತಿ‌ ಇಲ್ಲದೆ ಬಡ್ಡಿ ವ್ಯವಹಾರ ಮಾಡುತ್ತಿರೋರ ಮಾಹಿತಿ ಕಲೆ ಹಾಕಲು ಹು-ಧಾ ಕಮೀಷನರ್ ಸೂಚನೆ ಕೊಟ್ಟಿದ್ದಾರೆ. ಇನ್ನು ಹತ್ತು ಸಾವಿರ ಸಾಲಕ್ಕೆ ಪ್ರತಿಯಾಗಿ ಒಂದು ಸಾವಿರ ಬಡ್ಡಿ ಕಟ್ಟಬೇಕಿತ್ತು. ಬಡ್ಡಿ ಹಣ ನೀಡದೆ ಹೋದಾಗ ಇಂತಹ ದುರ್ಘಟನೆ ನಡೆದು, ಓರ್ವ ಶಾಲಾ ವಿದ್ಯಾರ್ಥಿ ಸಾವು ಬದುಕಿನ ಹೋರಾಟ ಮಾಡುವಂತಾಗಿದೆ. ಹುಬ್ಬಳ್ಳಿ-ಧಾರಾವಾಡ ಪೊಲೀಸರು ಮೀಟರ್ ಬಡ್ಡಿ ದಂಧೆಕೋರರಿಗೆ ಹೆಡೆಮೂರಿ ಕಟ್ಟಿ ಅವಳಿ ನಗರದ ಜನರಿಗೆ ದಂಧೆಕೋರರಿಂದ ಮುಕ್ತಿ ಕೊಡಿಸಬೇಕಿದೆ.

ರಾಜ್ಯದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ಬೈಕ್​ನ್ನ 60 ಮೀಟರ್ ಎಳೆದೊಯ್ದ ಕಾರು: ಎದೆ ಝಲ್​ ಎನಿಸುವ ವಿಡಿಯೋ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ತಂದೆಯ ರೀತಿ ಆಶೀರ್ವಾದ ಮಾಡಿದ್ದರು: ಸರಿಗಮ ವಿಜಿ ನಿಧನಕ್ಕೆ ತರುಣ್ ಸಂತಾಪ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಬಹಳ ಎಚ್ಚರವಹಿಸಬೇಕೆಂದು ಹೇಳುತ್ತಾರೆ ಪ್ರಯಾಗ್​ರಾಜ್​ಗೆ ಬಂದಿರುವ ಕನ್ನಡಿಗ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಕೊಪ್ಪಳ ಗವಿಮಠದ ಅಜ್ಜನ ಜಾತ್ರೆಗೆ ಹರಿದು ಬಂದ ಜನ ಸಾಗರದ ವಿಡಿಯೋ ನೋಡಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಯಡಿಯೂರಪ್ಪ ಕಾಲಿಗೆ ಚಕ್ರ ಕಟ್ಟಿಕೊಂಡು ಪಕ್ಷ ಸಂಘಟನೆ ಮಾಡಿದ್ದಾರೆ: ಬಿವೈವಿ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಮೂಕ ಪ್ರಾಣಿಯ ಕೆಚ್ಚಲು ಕೊಯ್ಯುವುದು ತಾಯಿಗೆ ದ್ರೋಗ ಬಗೆದಂತೆ: ತನ್ವೀರ್ ಸೇಟ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ಆರತಿ ಉಕ್ಕಡಕ್ಕೆ ಭೇಟಿ ನೀಡಿದ ದರ್ಶನ್; ಅಹಲ್ಯ ದೇವಿಗೆ ವಿಶೇಷ ಪೂಜೆ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ನವಿ ಮುಂಬೈನಲ್ಲಿ ಏಷ್ಯಾದ 2ನೇ ದೊಡ್ಡ ಇಸ್ಕಾನ್ ದೇವಾಲಯ ಉದ್ಘಾಟಿಸಿದ ಮೋದಿ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ದೇವರಾಜ ಮಾರ್ಕೆಟ್ ಡೆಮಾಲಿಶ್ ಮಾಡಲು ನ್ಯಾಯಾಲಯ ಆದೇಶಿಸಿದೆ: ಮಹದೇವಪ್ಪ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ
ಮಹಾಕುಂಭದಲ್ಲಿ ಭಕ್ತಸಾಗರ; ಕಣ್ಸೆಳೆಯುತ್ತಿದೆ ವಿಹಂಗಮ ನೋಟ