International Kite Fest 2023: ಹುಬ್ಬಳ್ಳಿಯಲ್ಲಿ ಜ. 21 ರಿಂದ ಅಂತರಾಷ್ಟ್ರೀಯ ಗಾಳಿಪಟ ಉತ್ಸವ -ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಂದ ಚಾಲನೆ
Pralhad Joshi: ಹುಬ್ಬಳ್ಳಿಯ ಜೆ.ಕೆ ಶಾಲಾ ಮಾರ್ಗದ ಬಳಿ ವೆಂಕಟರಮಣ ದೇವಸ್ಥಾನದ ಮುಂಭಾಗ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ನಡೆಯಲಿದ್ದು, ವೈಭವದ ಉತ್ಸವದಲ್ಲಿ ಎಲ್ಲರೂ ಭಾಗವಹಿಸುವಂತೆ ಪ್ರಲ್ಹಾದ್ ಜೋಶಿ ಕರೆ ನೀಡಿದ್ದಾರೆ.
ಹುಬ್ಬಳ್ಳಿ: ಇದೇ ತಿಂಗಳ ಜನವರಿ 21 ಹಾಗೂ 22 ರಂದು ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಗಾಳಿಪಟ ಉತ್ಸವ (International Kite Fest 2023) ಹಮ್ಮಿಕೊಳ್ಳಲಾಗಿದ್ದು, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ದೇಶ ವಿದೇಶಗಳಿಂದ ಗಾಳಿಪಟ ಪಟುಗಳು ಉತ್ಸವದಲ್ಲಿ ಭಾಗವಹಿಸಲಿದ್ದಾರೆ. ಅಲ್ಲದೇ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನಾಡಿನ ಹೆಸರಾಂತ ಕಲಾವಿದರು ಒಂದೇ ವೇದಿಕೆಯಲ್ಲಿ ಜನರನ್ನ ಮನರಂಜಿಸಲಿದ್ದಾರೆ.
ಎರಡು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ದೇಸಿ ಕ್ರೀಡಾ ಸ್ಪರ್ಧೆಗಳು, ಶಾಲಾ – ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಮಹಿಳೆಯರಿಗೆ ಕ್ರೀಡೆ – ಸಂಗೀತ ಸ್ಪರ್ಧೆ, ಆಹಾರ ಉತ್ಸವ ಹಾಗೂ ಪ್ರದರ್ಶನ ಕೂಡ ನಡೆಯಲಿದೆ.
ಹುಬ್ಬಳ್ಳಿಯ ಜೆ.ಕೆ ಶಾಲಾ ಮಾರ್ಗದ ಬಳಿ ವೆಂಕಟರಮಣ ದೇವಸ್ಥಾನದ ಮುಂಭಾಗ ಅಂತರಾಷ್ಟ್ರೀಯ ಗಾಳಿಪಟ ಉತ್ಸವಕ್ಕೆ ನಡೆಯಲಿದ್ದು, ಈ ವೈಭವದ ಉತ್ಸವದಲ್ಲಿ ಎಲ್ಲರೂ ಭಾಗವಹಿಸುವಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರೆ ನೀಡಿದ್ದಾರೆ.
ಈ ಸಾಂಸ್ಕೃತಿಕ ಮಹೋತ್ಸವದ ಅಂಗವಾಗಿ ಗಾಳಿಪಟ ಉತ್ಸವ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 7:49 pm, Wed, 18 January 23