ಏರ್​​ ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? : ಹೆಚ್​. ಡಿ ಕುಮಾರಸ್ವಾಮಿ

ಏರ್​​ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? ಏರ್​​ಶೋಗೆ ಬರುವುದರಿಂದ ಬಡತನ ನಿವಾರಣೆ ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ ಏರ್​ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ.

ಏರ್​​ ಶೋ ಬಡತನ ನಿವಾರಿಸುವ ಕಾರ್ಯಕ್ರಮನಾ? : ಹೆಚ್​. ಡಿ ಕುಮಾರಸ್ವಾಮಿ
ಹೆಚ್​ ಡಿ ಕುಮಾರಸ್ವಾಮಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Feb 13, 2023 | 1:20 PM

ಹುಬ್ಬಳ್ಳಿ: ಏರ್​​ಶೋ (Air Show) ಬಡತನ ನಿವಾರಿಸುವ ಕಾರ್ಯಕ್ರಮನಾ? ಏರ್​​ಶೋಗೆ ಬರುವುದರಿಂದ ಬಡತನ ನಿವಾರಣೆ ಆಗುತ್ತಾ? ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ ಕುಮಾರಸ್ವಾಮಿ (HD Kumarswamy) ಏರ್​ ಶೋ ಬಗ್ಗೆ ವ್ಯಂಗ್ಯವಾಡಿದ್ದಾರೆ. ಚುನಾವಣೆ ನೆಪದಲ್ಲಿ ಜನರನ್ನು ದಾರಿ ತಪ್ಪಿಸೋ ಯತ್ನ ನಡೆಸಿದ್ದಾರೆ. ಇದು 14ನೇ ಆವೃತಿಯ ಏರ್ ಶೋ ಆಗಿದೆ. ಇದನ್ನು ಹಿಂದೆ ಇದನ್ನು ಪ್ರಧಾನಿ ನರೇಂದ್ರ ಮೋದಿ ಆರಂಭಿಸಿದ್ರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗಕ್ಕೆ ಯಾವ ಪಕ್ಷದಿಂದ ಅನ್ಯಾಯವಾಗಿದೆ. ಮಹದಾಯಿ ನೀರಿನ ವಿಚಾರವಾಗಿ ಕಾನೂನಾತ್ಮಕ ಮತ್ತು ತಾಂತ್ರಿಕ ದೋಷ ಸರಿಪಡಿಸಿಕೊಳ್ಳಲು ಹೇಳಿದ್ದೆ. ಆದರೆ ಬಿಜೆಪಿಯವರು ಪ್ರಚಾರವಾದರೆ ಸಾಕು ಎಂದು ಹೇಳಿದರು. ಈಗಲೂ ಬಿಜೆಪಿ ಅದನ್ನೇ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದರು.

ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚೆಲ್ಲಾಟವಾಡುತ್ತಿವೆ

ಉತ್ತರ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಅಂತ ಹೇಳುತ್ತಾರೆ. ಯೋಜನೆಗಳ ಹೆಸರಿನಲ್ಲಿ ಹಣ ಹೊಡೆಯುವ ಕೆಲಸ ಮಾಡಿದರು. ಬಡವರ ಜೀವನದಲ್ಲಿ ರಾಷ್ಟ್ರೀಯ ಪಕ್ಷಗಳು ಚೆಲ್ಲಾಟವಾಡುತ್ತಿವೆ. ನೀರಾವರಿ ಯೋಜನೆ ಹೆಸರಲ್ಲಿ ಈ ಭಾಗದ ನಾಯಕರೇ ದುಡ್ಡು ಹೊಡೆಯೋ ಕೆಲಸ ಮಾಡಿದ್ದಾರೆ ಎಂದು ಹೇಳಿದರು.

ಸಿದ್ದರಾಮಯ್ಯ ಅಲ್ಲ ಸುಳ್ಳಿನ ರಾಮಯ್ಯ

ಸಿದ್ದರಾಮಯ್ಯ ಅಲ್ಲ ಸುಳ್ಳಿನ ರಾಮಯ್ಯ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಿದ್ದರಾಮಯ್ಯ ಕಾರಣ. ಮೈತ್ರಿ ಸರ್ಕಾರ ಬಂದ 2 ತಿಂಗಳಲ್ಲೇ ಸರ್ಕಾರ ಪತನ ಬಗ್ಗೆ ಹೇಳಿದರು. ಬಿಜೆಪಿಯ ಅಕ್ರಮ ಹೊರ ತಂದಿದ್ದು ನಾನು, ಸಿದ್ದರಾಮಯ್ಯ ಅಲ್ಲ. ನಿಮ್ಮ ಯೋಗ್ಯತೆಗೆ ಸರಿಯಾದ ರೀತಿಯಲ್ಲೇ ಮಾತನಾಡಿ. ಸಿದ್ದರಾಮಯ್ಯ ಕುರ್ಚಿಗಾಗಿ ಕುತಂತ್ರದ ರಾಜಕಾರಣ ಮಾಡುತ್ತಿದ್ದಾರೆ. ಬಿಜೆಪಿಯವರೂ ನನಗೆ ಸಿಎಂ ಸ್ಥಾನ ಕೊಡುವುದಕ್ಕೆ ಸಿದ್ದರಿದ್ದರು. ಇನ್ನೂ 10 ವರ್ಷವಾದರೂ ಇವರಿಗೆ ಬಿಜೆಪಿಯನ್ನು ತೆಗೆಯಲು ಆಗಲ್ಲ. ಜೆಡಿಎಸ್​ನಿಂದ ಮಾತ್ರ ಬಿಜೆಪಿಯನ್ನು ತೆಗೆಯೋಕೆ ಸಾಧ್ಯ.

ಮುಂಬೈ ಕರ್ನಾಟಕದಲ್ಲಿ ಪಂಚರತ್ನ ಯಾತ್ರೆ ನಡೆಸಿದ್ದೇನೆ. ಮಾರ್ಚ್ 23 ರವರೆಗೆ ರಥ ಯಾತ್ರೆ ಮುಂದುವರಿಸುತ್ತೇನೆ. ಯಾತ್ರೆ ಮೂಲಕ, ನಮ್ಮ ಯೋಜನೆ ಕುರಿತು ಜನತೆಗೆ ಮನವರಿಕೆ ಮಾಡಲು ಯಾತ್ರೆ ಮಾಡುತ್ತಿದ್ದೇನೆ. ಜನತೆಗೆ ಹೊಸ ಬದಲಾವಣೆ ತರಬೇಕೆಂದಿದೆ ಎಂದು ಹೇಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:19 pm, Mon, 13 February 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್