AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಧರ್ಮ, ಸಂಸ್ಕೃತಿ ಉಳಿಸುವ ಸತ್ಕಾರ್ಯ ಮಾಡುತ್ತಿರುವ ಗಜಾನನ ಸೇವಾ ಸಮಿತಿಗಳನ್ನು ಗೌರವಿಸಬೇಕಾದ್ದು ನಮ್ಮ ಕರ್ತವ್ಯ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕ್ಷಮತಾ ಸೇವಾ ಸಂಸ್ಥೆ, ನವಯುಗ ಸಂಘಟನೆಯ ಸಹಯೋಗದಲ್ಲಿ ಗಣೇಶ ಚತುರ್ಥಿ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿದ ಗಜಾನನ ಸಮಿತಿಗಳನ್ನು ಸತ್ಕರಿಸಲಾಯಿತು. ತಮ್ಮ ಫೇಸ್​​ಬುಕ್​​ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಪ್ರಲ್ಹಾದ ಜೋಶಿಯವರು, ಗಜಾನನ ಸೇವಾ ಸಮಿತಿಯವರು ನಮ್ಮ ಸಂಸ್ಕೃತಿ ಉಳಿಸುವ ಬೆಳೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ನಮ್ಮ ಧರ್ಮ, ಸಂಸ್ಕೃತಿ ಉಳಿಸುವ ಸತ್ಕಾರ್ಯ ಮಾಡುತ್ತಿರುವ ಗಜಾನನ ಸೇವಾ ಸಮಿತಿಗಳನ್ನು ಗೌರವಿಸಬೇಕಾದ್ದು ನಮ್ಮ ಕರ್ತವ್ಯ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಗಜಾನನ ಸೇವಾ ಸಮಿತಿಗಳ ಗೌರವಿಸಬೇಕಾದ್ದು ನಮ್ಮ ಕರ್ತವ್ಯ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 28, 2023 | 12:23 PM

Share

ಹುಬ್ಬಳ್ಳಿ, ಸೆಪ್ಟೆಂಬರ್​​ 28: ನಮ್ಮ ಧರ್ಮ, ಸಂಸ್ಕೃತಿ ಉಳಿಸುವ ಉದಾತ್ತ ಸತ್ಕಾರ್ಯ ಮಾಡುತ್ತಿರುವ ಗಜಾನನ ಸೇವಾ ಸಮಿತಿಗಳ (God Ganesha service committees) ಗುರುತಿಸಿ, ಸತ್ಕರಿಸಿ ಗೌರವಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಂಸದೀಯ ವ್ಯವಹಾರಗಳು , ಕಲ್ಲಿದ್ದಲು ಮತ್ತು ಗಣಿ ಖಾತೆ ಕೇಂದ್ರ ಸಚಿವ ಜೋಶಿ (Union Minister Pralhad Joshi) ಅವರು, ಗಜಾನನ ಸೇವಾ ಸಮಿತಿಗಳು (Ganesha Chaturthi) ಧರ್ಮದ ಪರ ಕೆಲಸಗಳನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಅಷ್ಟೇ ವಿಜೃಂಭಣೆಯಿಂದ ನಡೆಸುತ್ತಿದ್ದು, ಅಂತವರನ್ನು ಗುರುತಿಸಿ ಗೌರವಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ ಹಾಗೂ ಇದೊಂದು ಹೆಮ್ಮೆಯ ಸಂಗತಿ ಎಂದಿದ್ದಾರೆ.

ಪ್ರಲ್ಹಾದ ಜೋಶಿ ನೇತೃತ್ವದ ಕ್ಷಮತಾ ಸೇವಾ ಸಂಸ್ಥೆ ಹಾಗೂ ನವಯುಗ ಸಂಘಟನೆಯ ಸಹಯೋಗದಲ್ಲಿ ನಿನ್ನೆ ಬುಧವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿದ ಗಜಾನನ ಸಮಿತಿಗಳನ್ನು ಸತ್ಕರಿಸಿ ಗೌರವಿಸಲಾಯಿತು.

ತಮ್ಮ ಫೇಸ್​​ಬುಕ್​​ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಪ್ರಲ್ಹಾದ ಜೋಶಿಯವರು, ಗಜಾನನ ಸೇವಾ ಸಮಿತಿಯವರು ನಮ್ಮ ಸಂಸ್ಕೃತಿ ಉಳಿಸುವ ಬೆಳೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಗಜಾನನ ಸೇವಾ ಸಮಿತಿಯ ಸತ್ಕಾರ್ಯವನ್ನು ಗುರುತಿಸಿ ಸತ್ಕರಿಸಿ ಗೌರವಿಸುವ ಈ ವಿಶೇಷ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai), ಕ್ಷಮತಾ ಸೇವಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್