ಹುಬ್ಬಳ್ಳಿ, ಸೆಪ್ಟೆಂಬರ್ 28: ನಮ್ಮ ಧರ್ಮ, ಸಂಸ್ಕೃತಿ ಉಳಿಸುವ ಉದಾತ್ತ ಸತ್ಕಾರ್ಯ ಮಾಡುತ್ತಿರುವ ಗಜಾನನ ಸೇವಾ ಸಮಿತಿಗಳ (God Ganesha service committees) ಗುರುತಿಸಿ, ಸತ್ಕರಿಸಿ ಗೌರವಿಸಬೇಕಾದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಅಭಿಪ್ರಾಯಪಟ್ಟಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಸಂಸದೀಯ ವ್ಯವಹಾರಗಳು , ಕಲ್ಲಿದ್ದಲು ಮತ್ತು ಗಣಿ ಖಾತೆ ಕೇಂದ್ರ ಸಚಿವ ಜೋಶಿ (Union Minister Pralhad Joshi) ಅವರು, ಗಜಾನನ ಸೇವಾ ಸಮಿತಿಗಳು (Ganesha Chaturthi) ಧರ್ಮದ ಪರ ಕೆಲಸಗಳನ್ನು ಅತ್ಯಂತ ಶ್ರದ್ಧೆ, ಭಕ್ತಿ ಹಾಗೂ ಅಷ್ಟೇ ವಿಜೃಂಭಣೆಯಿಂದ ನಡೆಸುತ್ತಿದ್ದು, ಅಂತವರನ್ನು ಗುರುತಿಸಿ ಗೌರವಿಸಬೇಕಾದ್ದು ನಮ್ಮೆಲ್ಲರ ಕರ್ತವ್ಯ ಹಾಗೂ ಇದೊಂದು ಹೆಮ್ಮೆಯ ಸಂಗತಿ ಎಂದಿದ್ದಾರೆ.
ಪ್ರಲ್ಹಾದ ಜೋಶಿ ನೇತೃತ್ವದ ಕ್ಷಮತಾ ಸೇವಾ ಸಂಸ್ಥೆ ಹಾಗೂ ನವಯುಗ ಸಂಘಟನೆಯ ಸಹಯೋಗದಲ್ಲಿ ನಿನ್ನೆ ಬುಧವಾರ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಹುಬ್ಬಳ್ಳಿಯಲ್ಲಿ ಗಣಪತಿ ಪ್ರತಿಷ್ಠಾಪನೆ ಮಾಡಿದ ಗಜಾನನ ಸಮಿತಿಗಳನ್ನು ಸತ್ಕರಿಸಿ ಗೌರವಿಸಲಾಯಿತು.
ತಮ್ಮ ಫೇಸ್ಬುಕ್ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಇದನ್ನು ಹಂಚಿಕೊಂಡಿರುವ ಪ್ರಲ್ಹಾದ ಜೋಶಿಯವರು, ಗಜಾನನ ಸೇವಾ ಸಮಿತಿಯವರು ನಮ್ಮ ಸಂಸ್ಕೃತಿ ಉಳಿಸುವ ಬೆಳೆಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೆಮ್ಮೆ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಗಜಾನನ ಸೇವಾ ಸಮಿತಿಯ ಸತ್ಕಾರ್ಯವನ್ನು ಗುರುತಿಸಿ ಸತ್ಕರಿಸಿ ಗೌರವಿಸುವ ಈ ವಿಶೇಷ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ (Mahesh Tenginakai), ಕ್ಷಮತಾ ಸೇವಾ ಸಂಸ್ಥೆಯ ಸಂಚಾಲಕ ಗೋವಿಂದ ಜೋಶಿ ಹಾಗೂ ಮಹಾನಗರ ಪಾಲಿಕೆಯ ಸದಸ್ಯರು ಪ್ರಮುಖರು ಉಪಸ್ಥಿತರಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ