ಹುಬ್ಬಳ್ಳಿ: ಉದ್ಯಮಿ ಗಣೇಶ್ ಸೇಟ್ ಮನೆ ಮೇಲೆ ಐಟಿ ದಾಳಿ

ಹುಬ್ಬಳ್ಳಿಯ ಅಶೋಕನಗರದಲ್ಲಿರುವ ಉದ್ಯಮಿ ಗಣೇಶ್ ಸೇಟ್​ ಎಂಬುವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದ್ಯಮಿ ಗಣೇಶ್ ಸೇಟ್ ಅವರಿಗೆ ಸೇರಿದ ಕಚೇರಿ, ಹೋಟೆಲ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಹುಬ್ಬಳ್ಳಿ: ಉದ್ಯಮಿ ಗಣೇಶ್ ಸೇಟ್ ಮನೆ ಮೇಲೆ ಐಟಿ ದಾಳಿ
ಆದಾಯ ತೆರಿಗೆ ಇಲಾಖೆ ದಾಳಿ
Edited By: ವಿವೇಕ ಬಿರಾದಾರ

Updated on: Jan 24, 2024 | 11:44 AM

ಹುಬ್ಬಳ್ಳಿ, ಜನವರಿ 24: ಇಲ್ಲಿನ ಅಶೋಕನಗರದಲ್ಲಿರುವ ಉದ್ಯಮಿ ಗಣೇಶ್ ಸೇಟ್​ ಎಂಬುವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ಮಾಡಿದ್ದಾರೆ. ಉದ್ಯಮಿ ಗಣೇಶ್ ಸೇಟ್ ಅವರಿಗೆ ಸೇರಿದ ಕಚೇರಿ, ಹೋಟೆಲ್ ಸೇರಿದಂತೆ ನಾಲ್ಕು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಗಣೇಶ್​​ ಸೇಟ್​ ಅವರು ಸ್ಟೇಶನ್ ರಸ್ತೆಯಲ್ಲಿ ಕೆಜಿಪಿ ಜ್ಯುವೆಲ್ಲರಿ (KGP Jewellery), ಜವಳಿ ಉದ್ಯಮ ಮತ್ತು ಹೋಟೆಲ್ ನಡೆಸುತ್ತಿದ್ದಾರೆ. ಅಧಿಕಾರಿಗಳು ಸತತ 10 ಗಂಟೆಗಳಿಂದ ಶೋಧಕಾರ್ಯ ನಡೆಸುತ್ತಿದ್ದಾರೆ. ಉದ್ಯಮಿ ಗಣೇಶ್ ಸೇಟ್​​​ ಮತ್ತು ಪುತ್ರ ಶ್ರೀಗಂಧ ಸೇಟ್ ಅವರ​​​ ವಿಚಾರಣೆ ನಡೆಸಿದ್ದಾರೆ.

ಲೋಕಾಯುಕ್ತ ಬಲೆಗೆ ಬಿದ್ದ ಪುರಸಭೆ ಬಿಲ್​ ಕಲೆಕ್ಟರ್

ಬಳ್ಳಾರಿ: ಕುರಗೋಡು ಪುರಸಭೆ ಬಿಲ್​ ಕಲೆಕ್ಟರ್ ಹೊನ್ನೂರ್ ಸಾಬ್ 6 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಿವೇಶನದ ಸ್ಕೆಚ್ ನೀಡಲು ಮಹೇಶ್ ಎಂಬುವರ ಬಳಿ ಲಂಚ ಸ್ವೀಕರಿಸುವಾಗ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಜುವೆಲ್ಲರಿ ಶಾಪ್ ಮಾಲೀಕರ ಮನೆ ಮೇಲೆ ಐಟಿ ದಾಳಿ ನಡೆಸಿ ಶೋಧ ನಡೆಸುವಾಗ ಅಪ್ರಾಪ್ತ ಹೆಣ್ಣು ಮಕ್ಕಳು ಪತ್ತೆ

ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ

ವಿಜಯನಗರ: ಕೂಡ್ಲಿಗಿ ತಾಲೂಕಿನ ಹಾಲಸಾಗರಹಟ್ಟಿ ಗ್ರಾಮದ ಹೊರವಲಯದ ಗದ್ದೆಯಲ್ಲಿನ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಪೋಲಿಸರು ದಾಳಿ ಮಾಡುತ್ತಿದ್ದಂತೆ ಇಸ್ಪೀಟ್ ಆಟಗಾರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ದಾಳಿಯಲ್ಲಿ ಪೊಲೀಸರು ಆರು ಬೈಕ್​ಗಳನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರನ್ನು ಬಂಧಿಸಿದ್ದಾರೆ. ಗುಡೇಕೋಟೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us