ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ; ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ತಾಲೂಕು ದಂಡಾಧಿಕಾರಿ

ಕಲಘಟಗಿ ತಹಶೀಲ್ದಾರ್​ ಯಲ್ಲಪ್ಪ ಎಂಬುವವರು ಜಯಂತಿ ಕುರಿತು ಪೂರ್ವಭಾವಿ ಸಭೆ ಕರೆಯದೆ ಕಾಟಾಚಾರದ ಜಯಂತಿ ಆಚರಣೆ ಮಾಡಿದ್ದಾರೆ ಎಂದು ತಹಶೀಲ್ದಾರ್ ಕಚೇರಿ ಮುಂದೆ ವೀರಶೈವ ಸಮಾಜದವರು ಪ್ರತಿಭಟನೆ ಮಾಡಿದ್ದಾರೆ.

ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ; ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ತಾಲೂಕು ದಂಡಾಧಿಕಾರಿ
ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ ಆಚರಣೆ; ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ತಾಲೂಕು ದಂಡಾಧಿಕಾರಿ
Follow us
ಕಿರಣ್ ಹನುಮಂತ್​ ಮಾದಾರ್
|

Updated on:Mar 07, 2023 | 10:28 AM

ಧಾರವಾಡ: ತಹಶೀಲ್ದಾರರೊಬ್ಬರು ಕಾಟಾಚಾರಕ್ಕೆ ಜಗದ್ಗುರು ರೇಣುಕಾಚಾರ್ಯರ ಜಯಂತಿ(Jagadguru Renukacharya’s Jayanti) ಆಚರಣೆ ಮಾಡಿ, ಬಳಿಕ ಸ್ವಾಮೀಜಿ ಕಾಲಿಗೆ ಬಿದ್ದು ಕ್ಷಮೆ ಕೇಳಿದ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ. ಕಲಘಟಗಿ ತಹಶೀಲ್ದಾರ್​ ಯಲ್ಲಪ್ಪ ಎಂಬುವವರು ಜಗದ್ಗುರು ರೇಣುಕಾಚಾರ್ಯರ ಜಯಂತಿ ಕುರಿತು ಪೂರ್ವಭಾವಿ ಸಭೆ ಕರೆಯದೆ ಕಾಟಾಚಾರದ ಜಯಂತಿ ಆಚರಣೆ ಮಾಡಿದ್ದಾರೆ ಎಂದು ತಹಶೀಲ್ದಾರ್ ಕಚೇರಿ ಮುಂದೆ ಹನ್ನೆರಡು ಎತ್ತಿನ ಮಠದ ಪೀಠಾಧಿಪತಿ ರೇವಣಶಿದ್ದ ಶಿವಾಚಾರ್ಯರ ನೇತೃತ್ವದಲ್ಲಿ ವೀರಶೈವ ಸಮಾಜದವರು ಪ್ರತಿಭಟನೆ ಮಾಡಿದ್ದಾರೆ.

ತಹಶೀಲ್ದಾರ್​ ಯಲ್ಲಪ್ಪ ಬರ್ಮುಡಾ ಧರಿಸಿ ರೇಣುಕಾಚಾರ್ಯ ಭಾವಚಿತ್ರಕ್ಕೆ ಪೂಜೆ ಸಲ್ಲಿಕೆ ಮಾಡಿದ್ದು, ಅದರ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಹಿನ್ನೆಲೆ ಸಮಾಜದವರು ಆಕ್ರೋಶಗೊಂಡಿದ್ದಾರೆ. ಈ ಕಾರಣಕ್ಕಾಗಿಯೇ ಸಮಾಜದ ಮುಖಂಡರು ತಹಶೀಲ್ದಾರ್​ ಯಲ್ಲಪ್ಪರನ್ನ ತರಾಟೆಗೆ ತೆಗೆದುಕೊಂಡಿದ್ದು, ಸಾರ್ವಜನಿಕವಾಗಿ ಹನ್ನೆರಡು ಎತ್ತಿನ ಮಠದ ಪೀಠಾಧಿಪತಿಯವರ ಕಾಲಿಗೆ ಬಿದ್ದು ತಹಶೀಲ್ದಾರ್ ಕ್ಷಮೆ ಕೇಳಿದ್ದಾರೆ. ಜೊತೆಗೆ ಮತ್ತೊಮ್ಮೆ ಜಯಂತಿಯನ್ನ ಅದ್ಧೂರಿಯಾಗಿ ಮಾಡುವುದಾಗಿ ಭರವಸೆ ನೀಡಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:39 am, Tue, 7 March 23

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ