ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಆಗಿಲ್ಲ: ಜಗದೀಶ್ ಶೆಟ್ಟರ್
ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಧಾರವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಜಗದೀಶ ಶೆಟ್ಟರ್, ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಹೇಳಿದ್ದಾರೆ. ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಧಾರವಾಡ, ಜನವರಿ 08: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ (Jagadish Shettar) ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ ಶೆಟ್ಟರ್ ಇದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ.
ಲೋಕಸಭೆ ತಯಾರಿ ಕುರಿತು ಕಾಂಗ್ರೆಸ್ ಸಭೆಗೂ ಮುಂಚೆ ಮಾತನಾಡಿದ ಅವರು, ಲೋಕಸಭೆ ಚುನಾವಣೆ ಹಿನ್ನೆಲೆ ಕಾರ್ಯಕರ್ತರನ್ನು ಸೇರಿಸಿ ಮಾರ್ಗದರ್ಶನ ಮಾಡುವ ಸಭೆ ಇದು. ಜ. 10ಕ್ಕೆ ಬೆಂಗಳೂರಿನಲ್ಲಿ ಸಭೆ ಕರೆಯಲಾಗಿದೆ. ಪಕ್ಷದ ರಾಜ್ಯಾಧ್ಯಕ್ಷರು, ಸಿಎಂ ಸಭೆ ನಡೆಸಲಿದ್ದಾರೆ.
ಇದನ್ನೂ ಓದಿ: ಜುಲೈನಲ್ಲಿ ಸಚಿವ ಸಂಪುಟ ಪುನರ್ ರಚನೆ: ಮಂತ್ರಿ ಸ್ಥಾನ ಸಿಗುವ ಬಗ್ಗೆ ಸುಳಿವು ನೀಡಿದ ಬಸವರಾಜ್ ರಾಯರೆಡ್ಡಿ
ಲೋಕಸಭೆ ಚುನಾವಣೆ ಬಗ್ಗೆ ಸಭೆಯಲ್ಲಿ ಚರ್ಚೆ ಆಗಲಿದೆ. ಟಿಕೆಟ್ ಆಕಾಂಕ್ಷಿಗಳು, ಅಭ್ಯರ್ಥಿಗಳ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆ ಆಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಕಾಂಗ್ರೆಸ್ನವರೇ ನಿಜವಾದ ಹಿಂದೂಗಳು; ರಾಜಕಾರಣಕ್ಕೆ ಹಿಂದುತ್ವ, ಶ್ರೀರಾಮನ ಬಳಸಿಕೊಂಡಿಲ್ಲ -ಸಚಿವ ರಾಮಲಿಂಗಾರೆಡ್ಡಿ
ಪಕ್ಷಕ್ಕೆ ಹೊಸಬರ ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ಪಕ್ಷಕ್ಕೆ ತತ್ವ ಸಿದ್ಧಾಂತ ಒಪ್ಪಿ ಯಾರೇ ಬಂದರು ತೆಗೆದುಕೊಳ್ಳಲು ಸಿದ್ಧವಿದ್ದೇವೆ ಎಂದಿದ್ದಾರೆ.
ನಾನಾಗಿಯೇ ಯಾರನ್ನು ಕರೆಯುತ್ತಿಲ್ಲ ಎಂದ ಶೆಟ್ಟರ್
ಮುನೇನಕೊಪ್ಪ ಕಾಂಗ್ರೆಸ್ ಪಕ್ಷದ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಮುನೇಕೊಪ್ಪ ಜೊತೆಗೆ ನಾನು ಮಾತನಾಡಿಲ್ಲ. ನಾನಾಗಿಯೇ ಯಾರನ್ನು ಕರೆಯುತ್ತಿಲ್ಲ. ಸ್ವಯಂ ಪ್ರೇರಣೆಯಿಂದ ಅನೇಕರು ಪಕ್ಷಕ್ಕೆ ಬಂದಿದ್ದಾರೆ. ಸ್ವಪ್ರೇರಣೆಯಿಂದ ಅನೇಕರು ಕಾಂಗ್ರೆಸ್ಗೆ ಬರುತ್ತಾರೆ ಎಂದು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.