AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್; ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ ಕಿಡಿಗೇಡಿಗಳು

ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್​​ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.

ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್; ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ ಕಿಡಿಗೇಡಿಗಳು
ಜಗದೀಶ್ ಶೆಟ್ಟರ್ ಫೇಸ್​​​ಬುಕ್ ಹ್ಯಾಕ್; ಹಣಕಾಸಿನ ವ್ಯವಹಾರದ ಬಗ್ಗೆ ಪೋಸ್ಟ್
ಶಿವಕುಮಾರ್ ಪತ್ತಾರ್
| Updated By: Rakesh Nayak Manchi|

Updated on:Feb 27, 2024 | 5:27 PM

Share

ಹುಬ್ಬಳ್ಳಿ, ಫೆ.27: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ (Jagadish Shettar) ಅವರ ಫೇಸ್​​ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನಾನು ಮಾಡಿದ ವ್ಯವಹಾರದಲ್ಲಿ ಆರಂಭದಲ್ಲೇ ಲಾಭ ಬಂದಿದೆ. ನೀವ ಸಹ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ.

ಅಲ್ಲದೆ, ಕ್ರಿಸ್ಟಿನಾ ಪೆನಾಟೆ ಎಂಬುವರ ಸಲಹೆ ಪಡೆಯಬಹುದು ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ. ತಂದೆಯ ಫೇಸ್​ಬುಕ್ ಖಾತೆ ಹ್ಯಾಕ್ ಆಗಿರುವ ಮಾಹಿತಿ ನೀಡಿದ ಪುತ್ರ ಸಂಕಲ್ಪ ಶೆಟ್ಟರ್, ಯಾರೂ ಕೂಡ ಹಣ ಹಾಕಬಾರದು ಎಂದು ನೆಟ್ಟಿಗರಿಗೆ ಮನವಿ ಮಾಡಿದ್ದಾರೆ.

ಉತ್ತರ ಕರ್ನಾಟಕದ ಲಿಂಗಾಯತ ಪ್ರಭಾವಿ ನಾಯಕ ನಾಯಕ ಜಗದೀಶ್‌ ಶೆಟ್ಟರ್‌ ಅವರು ವಿಧಾನಸಭೆ ಚುನಾವಣೆಗೂ ಮುನ್ನ ಸ್ವಾಭಿಮಾನಕ್ಕೆ ಧಕ್ಕೆಯಾಯ್ತು ಎಂದು ತತ್ವಸಿದ್ಧಾಂತಗಳನ್ನು ಬಿದಿಗಿಟ್ಟು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಕಾಂಗ್ರೆಸ್​ನಿಂದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಬಿಜೆಪಿ ವಿರುದ್ಧವೇ ಸೋಲು ಅನುಭವಿಸಿದ್ದರು. ಬಳಿಕ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿ ಎಂಎಲ್​ಸಿ ಆಗಿದ್ದರು.

ಇದನ್ನೂ ಓದಿ: ಸಮುದ್ರದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ: ಖರ್ಗೆ ಪ್ರಶ್ನೆಗೆ ಜಗದೀಶ್ ಶೆಟ್ಟರ್ ಕಿಡಿಕಿಡಿ

ಒಟ್ಟಾರೆಯಾಗಿ ಎಂಟು ತಿಂಗಳು ಕಾಂಗ್ರೆಸ್​ನಲ್ಲಿದ್ದ ಶೆಟ್ಟರ್ ಕಳೆದ ತಿಂಗಳಷ್ಟೇ ಬಿಜೆಪಿಗೆ ಘರ್​​ವಾಪ್ಸಿ ಆಗಿದ್ದಾರೆ. ಅಷ್ಟಕ್ಕೂ ಶೆಟ್ಟರ್ ಕಾಂಗ್ರೆಸ್ ತೊರೆಯಲು ಕಾರಣವೇನು ಎನ್ನುವುದನ್ನು ನೋಡುವುದಾದರೆ ಕಾಂಗ್ರೆಸ್ ಸ್ಥಳೀಯ ಮುಖಂಡರಿಂದ ಜಗದೀಶ್ ಶೆಟ್ಟರ್‌ಗೆ ವಿರೋಧವಿತ್ತು. ಶೆಟ್ಟರ್ ವಿರುದ್ಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಅಪಪ್ರಚಾರ ಮಾಡಿರುವ ಆರೋಪವೂ ಇದೆ. ಸಚಿವ ಸ್ಥಾನ ಸಿಗಲಿದೆ ಎಂದು ಶೆಟ್ಟರ್ ನಂಬಿದ್ದರು. ಆದರೆ, ಸಿಗದಿದ್ದಕ್ಕೆ ತೀವ್ರ ನಿರಾಸೆ ಅನುಭವಿಸಿದ್ದರಂತೆ. ಬಿಜೆಪಿಯಲ್ಲಿ ಬಿ.ಎಲ್.ಸಂತೋಷ್ ಹಿಡಿತ ಕಡಿಮೆಯಾಗಿದ್ದೂ ಬಿಜೆಪಿಗೆ ವಾಪಸ್ ಬರಲು ಕಾರಣ ಎನ್ನಲಾಗಿತ್ತು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಮಂಗಳಾ ಅಂಗಡಿಗೆ ಟಿಕೆಟ್ ಸಿಗುವುದು ಅನುಮಾನ​​​ ಎಂಬ ಬಗ್ಗೆ ಶೆಟ್ಟರ್ ಬಿಜೆಪಿಗೆ ಮರು ಸೇರ್ಪಡೆಯಾಗುವುದಕ್ಕೂ ಮುನ್ನ ಚರ್ಚೆಯಾಗಿತ್ತು. ಆದರೆ, ಶೆಟ್ಟರ್ ಬಿಜೆಪಿ ಸೇರ್ಪಡೆಯಾಗುತ್ತಿದ್ದಂತೆಯೇ ಬೆಳಗಾವಿ ಜಿಲ್ಲೆಯ ರಾಜಕಾರಣದಲ್ಲಿ ಲೆಕ್ಕಾಚಾರಗಳು ಬದಲಾಗಿದ್ದವು. ಶೆಟ್ಟರ್​​, ಅಂಗಡಿ ಇಬ್ಬರೂ ಬೀಗರಾಗಿರುವ ಹಿನ್ನೆಲೆ ಅವರಿಗೆ ರಾಜಕೀಯ ಲಾಭ ದೊರೆಯುವ ಮಾತುಗಳು ಮುನ್ನೆಲೆಗೆ ಬಂದಿದ್ದವು.

ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಶೆಟ್ಟರ್, ಲೋಕಸಭೆ ಚುನಾವಣೆಗೆ ಬೆಳಗಾವಿಯಿಂದ ಸ್ಪರ್ಧಿಸುವ ಯಾವುದೇ ನಿರ್ಧಾರ ಮಾಡಿಲ್ಲ ಎಂದಿದ್ದರು. ಅಲ್ಲದೆ, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಕೇಳಿ ಬರ್ತಿದೆ ಎಂಬುದು ಗೊತ್ತಿಲ್ಲ. ಆ ಕುರಿತು ಇಂದಿನ ಸಭೆಯಲ್ಲಿ ಯಾವುದೂ ಚರ್ಚೆ ಆಗಲ್ಲ. ಲೋಕಸಭೆ ಚುನಾವಣೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದು ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Tue, 27 February 24

ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಸಂಸತ್ತಿನಲ್ಲಿ ವಿರೋಧಪಕ್ಷ ವಿನಾಕಾರಣ ಗದ್ದಲವೆಬ್ಬಿಸುತ್ತಿದೆ: ಸೋಮಣ್ಣ
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
ಜೈಲಿನಲ್ಲಿ ಇರುವ ಕೈದಿಗೆ ಹಾಡುವ ಅವಕಾಶ ನೀಡಿದ ಕೆ. ಕಲ್ಯಾಣ್
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
‘ಜೂನಿಯರ್’ ಸಿನಿಮಾದ ಯಶಸ್ಸು, ನಿರ್ದೇಶಕ ರಾಧಾಕೃಷ್ಣ ಹೇಳಿದ್ದೇನು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಏನೂ ಅರಿಯದ ಮಗುವನ್ನು ಸಾಯಿಸುವ ಮಾನಸಿಕತೆಗೆ ಏನೆನ್ನಬೇಕು?
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ಸ್ಟಂಟ್ ದೃಶ್ಯಕ್ಕೆ ಎಷ್ಟು ಶ್ರಮ ಪಟ್ಟಿದ್ದಾರೆ ಕಿರೀಟಿ: ವಿಡಿಯೋ ನೋಡಿ
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ರೌಡಿಶೀಟರ್ ಬಿಕ್ಲು ಶಿವ ಬರ್ಬರ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಸ್ವಜನ ಪಕ್ಷಪಾತ, ಭ್ರಷ್ಟಾಚಾರದಿಂದ ಸಿದ್ದರಾಮಯ್ಯ ಗಾವುದ ದೂರ: ಮಹದೇವಪ್ಪ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ಖಜಾನೆ ತುಂಬಿಸಿಕೊಳ್ಳಲು ರಾಜ್ಯ ಸರ್ಕಾರ ವಾಮಮಾರ್ಗ ಅನುಸರಿಸಿದೆ: ಸಿಟಿ ರವಿ
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ನಾಲ್ಕು ದಿನಗಳ ಅಂತರದಲ್ಲಿ ಇಬ್ಬರು ಮಹಿಳೆಯರನ್ನು ಬಲಿಪಡೆದ ಬಿಎಂಟಿಸಿ ಬಸ್
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,
ಅಪ್ರಾಪ್ತೆಯ ಕೊರಳಿಗೆ ಚಾಕು ಹಿಡಿದ ಪಾಗಲ್ ಪ್ರೇಮಿ,