ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಕೇಸ್​: ಪ್ರಕರಣ ಸಿಬಿಐಗೆ ವಹಿಸಿ ಎಂದ ಸಚಿವ ಪ್ರಹ್ಲಾದ್​​ ಜೋಶಿ

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಖಂಡನೀಯ. ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಬೇಕು ಆಗ ಸಂಪೂರ್ಣ ಸತ್ಯ ಹೊರಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು.

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ ಕೇಸ್​: ಪ್ರಕರಣ ಸಿಬಿಐಗೆ ವಹಿಸಿ ಎಂದ ಸಚಿವ ಪ್ರಹ್ಲಾದ್​​ ಜೋಶಿ
ಕೇಂದ್ರ ಸಚಿವ ಪ್ರಹ್ಲಾದ್​​ ಜೋಶಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jul 09, 2023 | 6:28 PM

ಹುಬ್ಬಳ್ಳಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ (Kamakumaranandi Maharaj) ಹತ್ಯೆ ಖಂಡನೀಯ. ಪ್ರಕರಣವನ್ನು ಸಿಬಿಐ ತನಿಖೆಗೆ ರಾಜ್ಯ ಸರ್ಕಾರ ನೀಡಬೇಕು ಆಗ ಸಂಪೂರ್ಣ ಸತ್ಯ ಹೊರಬರುತ್ತದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ಹುಬ್ಬಳ್ಳಿಯ ವರೂರಿನ ಜೈನ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜೈನಮುನಿಗಳ ವಿರುದ್ಧ ಸುಳ್ಳು ಹೇಳಿಕೆಗಳನ್ನು ಸೃಷ್ಟಿ ಮಾಡಲಾಗುತ್ತಿದೆ ಎಂದರು.

ಇದು ಇತಿಹಾಸದಲೇ ಕ್ರೂರ ಘಟನೆ

ವಿದ್ಯುತ್ ಶಾಕ್ ಕೊಟ್ಟು, ಕೈಕಾಲು ಕತ್ತರಿಸಿ ಕೊಳವೆಬಾವಿಗೆ ಹಾಕಿದ್ದಾರೆ. ಇದು ಇತಿಹಾಸದಲೇ ಕ್ರೂರ ಘಟನೆ. ಜೈನ ಸನ್ಯಾಸಿಗಳು ಸರ್ವಸಂಗ ಪರೀತ್ಯಾಗ ಮಾಡುತ್ತಾರೆ. ಅಂತವರನ್ನು ಹೀಗೆ ಹತ್ಯೆ ಮಾಡಿದ್ದು ಹೇಯ ಕೃತ್ಯ. ಶ್ರೀಗಳು ಕಾಣೆಯಾಗಿದ್ದಾರೆ ಎಂದ ಮೇಲೂ ಗಂಭೀರವಾಗಿ ಪರಿಗಣಿಸಲಿಲ್ಲ. ಅಭಯ ಪಾಟೀಲ್ ಗಂಭೀರ ಆರೋಪ ಮಾಡಿದಾಗ ಹೆಸರು ಹೇಳಿದರು.

ಇದನ್ನೂ ಓದಿ: ಹಿರೇಕೋಡಿಯಲ್ಲಿ ನೆರವೇರಿದ ಜೈನಮುನಿ ಮಹಾರಾಜರ ಅಂತ್ಯಸಂಸ್ಕಾರ, ಹತ್ಯೆ ಖಂಡಿಸಿ ನಾಳೆ ಮೌನ ಪ್ರತಿಭಟನೆ

ಕಟ್ಟಡ ಕಟ್ಟಲು ಹಣ ಕೊಟ್ಟಿದ್ದರು ಅಂತ ಮಾಹಿತಿ ಇದೆ. ಬಡ್ಡಿ ವ್ಯವಹಾರ ಮಾಡುತ್ತಿದ್ದರು ಅಂತ ಹೇಳಿಕೆ ತೆಗೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ. ಇದು ಸರ್ಕಾರಕ್ಕೆ ಶೋಭೆ ತರುವ ಸಂಗತಿ ಅಲ್ಲಾ. ಯಾರೇ ತಪ್ಪು ಮಾಡಿದರೂ ಅಪರಾಧ. ಇದಕ್ಕೆ ಜಾತಿ ಇರಲ್ಲ. ಸರ್ಕಾರದ ನಿಲುವು ಸರಿ ಪಡಿಸಿಕೊಳ್ಳಬೇಕು ಎಂದರು.

ಉಪವಾಸ ಕೈಬಿಡುವಂತೆ ಮನವಿ

ಪ್ರಕರಣವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಮನಕ್ಕೆ ತರುತ್ತೇನೆ. ಉಪವಾಸ ಕೈಬಿಡುವಂತೆ ಜೈನಮುನಿ ಗುಣಧರನಂದಿ ಶ್ರೀಗಳಿಗೆ ಮನವಿ ಮಾಡಿದ್ದೇನೆ. ನ್ಯಾಯ ಸಿಗದಿದ್ದರೆ ಎಲ್ಲರೂ ಸೇರಿ ಪ್ರತಿಭಟನೆ ಮಾಡೋಣ ಎಂದಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಜೈನಮುನಿ ಹತ್ಯೆ ಪ್ರಕರಣ: 400 ಅಡಿ ಆಳದ ಕೊಳವೆ ಬಾವಿಯಲ್ಲಿ ಮೃತದೇಹ ಪತ್ತೆ

ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ ಸ್ವಾಮೀಜಿ

ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣ ಖಂಡಿಸಿ ಜೈನಮುನಿ ಗುಣಧರನಂದಿ ಮಹಾರಾಜರು ಹುಬ್ಬಳ್ಳಿಯ ವರೂರಿನ ಜೈನ ಮಂದಿರದಲ್ಲಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಉಗ್ರನಿಗೆ ನೀಡುವ ಶಿಕ್ಷೆಗಿಂತಲೂ ಬರ್ಬರವಾಗಿ ಕೊಲ್ಲಲಾಗಿದೆ. ಇಂತಹ ಪೈಶಾಚಿಕ ಕೃತ್ಯವೆಸಗಿದರೂ ಸಿಎಂ ಸಿದ್ದರಾಮಯ್ಯ ಸ್ಪಂದನೆ ನೀಡಿಲ್ಲ ಎಂದು ಸಿಎಂ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ