Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯತ್ನಾಳ್​ಗೆ ಬೆಂಬಲ: ಜಯಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಎಚ್ಚರಿಕೆ ನೀಡಿದೆ. ಯತ್ನಾಳ್ ಅವರು ಟ್ರಸ್ಟ್ ಬಗ್ಗೆ ಬೇಜವಾಬ್ದಾರಿಯಿಂದ ಮಾತನಾಡಿದ್ದಾರೆ. ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಿದೆ. ಸ್ವಾಮೀಜಿ ರಾಜಕೀಯ ವ್ಯಕ್ತಿಗಳ ಪರವಾಗಿ ಮಾತನಾಡದಂತೆ ಎಚ್ಚರಿಕೆ ನೀಡಿದೆ. ಮುಂದಿನ ವಾರ ಮತ್ತೆ ಸಭೆ ನಡೆಸಿ, ವರ್ತನೆ ಬದಲಾವಣೆಯಾಗದಿದ್ದರೆ ಕ್ರಮ ಕೈಗೊಳ್ಳುವುದಾಗಿ ಟ್ರಸ್ಟ್ ತಿಳಿಸಿದೆ.

ಯತ್ನಾಳ್​ಗೆ ಬೆಂಬಲ: ಜಯಮೃತ್ಯುಂಜಯ ಸ್ವಾಮೀಜಿಗೆ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ
ಜಯಮೃತ್ಯುಂಜಯ ಸ್ವಾಮೀಜಿ, ವಿಜಯಾನಂದ ಕಾಶಪ್ಪನವರ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ವಿವೇಕ ಬಿರಾದಾರ

Updated on:Apr 11, 2025 | 6:12 PM

ಹುಬ್ಬಳ್ಳಿ, ಏಪ್ರಿಲ್​ 11: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ (Basangouda Patil Yatnal) ಪರವಾಗಿ ಮತ್ತು ಒಂದು ಪಕ್ಷದ ಪರವಾಗಿ ಕೂಡಲಸಂಗಮದ ಪಂಚಮಸಾಲಿ ಗುರುಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿಯವರು (Jay Mrityunjay Swamiji) ಮಾತನಾಡಬಾರದು. ಸ್ವಾಮೀಜಿಯವರು ತಮ್ಮ ವರ್ತನೆ ಬದಲಾವಣೆ ಮಾಡಿಕೊಳ್ಳಬೇಕು. ಮಾತನಾಡಿದರೆ ಅವರ ವಿರುದ್ಧ ಅನಿವಾರ್ಯವಾಗಿ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್ ಎಚ್ಚರಿಕೆ ನೀಡಿದೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಟ್ರಸ್ಟ್​ನ ಸದಸ್ಯರು, ಯಾವುದೇ ರಾಜಕೀಯ ಪಕ್ಷದ ಪರವಾಗಿ, ವ್ಯಕ್ತಿ ಪರವಾಗಿ ಮಾತನಾಡದಂತೆ ಜಯಮೃತ್ಯುಂಜಯ ಸ್ವಾಮೀಜಿ ಅವರಿಗೆ ಮನವಿ ಮಾಡಿದ್ದೇವೆ. ಒಂದು ವೇಳೆ ಮಾತನಾಡಿದರೆ, ಪೀಠದಿಂದ ಸ್ವಾಮೀಜಿ ಉಚ್ಛಾಟನೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಅಂತ ಹೇಳಿದ್ದೆವು ಎಂದು ತಿಳಿಸಿದರು.

ಮುಂದಿನ ವಾರದಲ್ಲಿ ಮತ್ತೆ ಸಭೆ ನಡೆಸುತ್ತೇವೆ. ಅಷ್ಟರಲ್ಲಿ ಸ್ವಾಮೀಜಿಯವರ ವರ್ತನೆ ಬದಲಾವಣೆಯಾಗದಿದ್ದರೆ ಕ್ರಮ ಕೈಗೊಳ್ಳುತ್ತೇವೆ. ಟ್ರಸ್ಟ್​ನ ನಿಯಮಗಳ ವಿರುದ್ಧ ನಡೆದುಕೊಂಡರೆ ಅವರನ್ನು ಪೀಠದಿಂದ ಕೆಳಗೆ ಇಳಿಸುವ ಅಧಿಕಾರ ಟ್ರಸ್ಟ್​ಗೆ ಇದೆ ಎಂದು ಹೇಳಿದರು.

ಇದನ್ನೂ ಓದಿ
Image
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
Image
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
Image
ಕುಟುಂಬ ರಾಜಕಾರಣದಿಂದ ಹೊರಬರುವ ವರೆಗೂ ಮತ್ತೆ ಬಿಜೆಪಿಗೆ ಬರಲ್ಲ: ಯತ್ನಾಳ್
Image
ರಾಜಿನಾಮೆ ನೀಡಿ ಚುನಾವಣೆಗೆ ಬಾ: ವಿಜಯೇಂದ್ರಗೆ ಯತ್ನಾಳ್​ ಸವಾಲು

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ ಅವರು ಟ್ರಸ್ಟ್ ಬಗ್ಗೆ ಬೇಜವಬ್ದಾರಿತನದಿಂದ ಮಾತನಾಡಿದ್ದಾರೆ. ಇದು ಟ್ರಸ್ಟ್ ಮತ್ತು ಸಮಾಜದವರಿಗೆ ನೋವು ತರಿಸಿದೆ. ಯಾವುದೇ ಪದಾಧಿಕಾರಿಗಳು ಸಮಾಜದ ಆಸ್ತಿ ಕಬಳಿಕೆ ಮಾಡಿಲ್ಲ. ಸಾರ್ವಜನಿಕವಾಗಿ ಟ್ರಸ್ಟ್ ಪದಾಧಿಕಾರಿಗಳ ವಿರುದ್ಧ ಮಾತನಾಡಿದ್ದಾರೆ. ಇದಕ್ಕೆ ಬಸನಗೌಡ ಪಾಟೀಲ್​ ಯತ್ನಾಳ್ ಅವರು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಮೃತ್ಯುಂಜಯ ಸ್ವಾಮೀಜಿ ಯತ್ನಾಳ್ ಪರ ನಿಂತು ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿದ್ದಾರೆ: ವಿಜುಗೌಡ ಪಾಟೀಲ್

ಸ್ವಾಮೀಜಿ ಯತ್ನಾಳ ಬೆಂಬಲಿಸುವುದು ಸರಿಯಲ್ಲ: ಕಾಶಪ್ಪನವರ

ಸಮಾಜದವರು ಗುರುತಿಸಿ ಸ್ವಾಮೀಜಿಯವರನ್ನು ಪೀಠಾಧ್ಯಕ್ಷರನ್ನಾಗಿ ಮಾಡಿದೆ. ವ್ಯಯಕ್ತಿಕವಾಗಿ ಯತ್ನಾಳ ಮತ್ತು ಬಿಜೆಪಿ ಬೆಂಬಲಿಸೋದು ಖಂಡನೀಯವಾಗಿದೆ. ಓರ್ವ ವ್ಯಕ್ತಿ ಹಿಂದೆ‌ ನಿಲ್ಲುವದು ಸರಿಯಲ್ಲ ಹಂದಿ, ನರಿ, ನಾಯಿ ಅಂತಾರೆ. ಅವರ ಸಂಸ್ಕಾರ ನೋಡಿಯೇ ಅವರನ್ನು ಅವರ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ ಅವರೊಬ್ಬ ಸ್ವಯಂ ಘೋಷಿತ ನಾಯಕ ಎಂದು ಶಾಸಕ ವಿಜಯಾನಂದ ಕಾಶಪ್ಪನವರ ಯತ್ನಾಳ್​ ವಿರುದ್ಧ ವಾಗ್ದಾಳಿ ಮಾಡಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:21 pm, Fri, 11 April 25