ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ

ಮದುವೆಗೂ ಐದು ದಿನ ಮೊದಲೇ ಯುವಕ ಭೀಕರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ವಿವಾಹಿತ ಮಹಿಳೆಯೊಂದಿಗಿನ ಲವ್ವಿಡವ್ವಿಯಿಂದಲೇ ಮದ್ವೆಯಾಗಬೇಕಿದ್ದ ಯುವಕ ಹತ್ಯೆಯಾಗಿದ್ದಾನೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ,

ಮದ್ವೆಗೆ 5 ದಿನ ಮೊದಲೇ ಯುವಕನ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಹಿಳೆಯೊಂದಿಗಿನ ಲವ್ವಿಡವ್ವಿಯೇ ಕಾರಣ
ನಿಂಗಪ್ಪ, ಕೊಲೆಯಾದ ಯುವಕ
Follow us
ರಮೇಶ್ ಬಿ. ಜವಳಗೇರಾ
|

Updated on: Jun 05, 2023 | 9:46 AM

ಧಾರವಾಡ: ಜಿಲ್ಲೆಯ ಕಲಘಟಗಿಯಲ್ಲಿ ಹಸೆಮಣೆ ಏರಬೇಕಿದ್ದ ನಿಂಗಪ್ಪ ನವಲೂರ  ಎನ್ನುವ ಯುವಕನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಜೂನ್ 7ರಂದು ಮದುವೆಯಾಗಬೇಕಿದ್ದ ಯುವಕನ ಹತ್ಯೆ ಪ್ರಕರಣವನ್ನು ಕಲಘಟಗಿ ಪೊಲೀಸರು(kalaburagi police) ಘಟನೆ ನಡೆದ 48 ಗಂಟೆಗಳಲ್ಲಿ ಭೇದಿಸಿದ್ದಾರೆ. ವಿವಾಹಿತಳ ಜೊತೆ ಅನೈತಿಕ ಸಂಬಂಧವೇ ಕೊಲೆಗೆ ಕಾರಣ ಎಂದು ಪೊಲೀಸ್​ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಂಗಪ್ಪ ಅನೈತಿಕ ಸಂಬಂಧ ಹೊಂದಿದ್ದ ಮಹಿಳೆಯ ಪತಿ ಹಾಗೂ ಆತನ ಸಹೋದರನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ: ಐದೇ ದಿನದಲ್ಲಿ ಮದ್ವೆಯಾಗಬೇಕಿದ್ದ ಯುವಕನ ಹತ್ಯೆ: ತೋಟದ ಮನೆಯಲ್ಲಿ ನಡೆಯಿತು ಘೋರ ಕೃತ್ಯ

ಜಿನ್ನೂರು ಗ್ರಾಮದ ವಿವಾಹಿತ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ. ಈ ವಿಷಯ ಮಹಿಳೆಯ ಪತಿ ಮುತ್ತಪ್ಪ ಹುಲ್ಲೊಳ್ಳಿಗೆ ತಿಳಿದಿದ್ದು, ಬಳಿಕ ಮುತ್ತಪ್ಪ ತನ್ನ ಸಹೋದರ ವೀರಭದ್ರ ಜಾಲಿಹಾಳ ಜೊತೆ ಸೇರಿಕೊಂಡು ನಿಂಗಪ್ಪನನ್ನು ಹತ್ಯೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಇಬ್ಬರನ್ನು ಇನ್ಸ್‌ಪೆಕ್ಟರ್ ಶ್ರೀಶೈಲ ಕೌಜಲಗಿ ನೇತೃತ್ವದ ತಂಡ ವಿಚಾರಣೆಗೊಳಪಡಿಸಿದೆ.

ಘಟನೆ ಹಿನ್ನೆಲೆ

ನಿಂಗಪ್ಪನಿಗೆ ಇದೇ ಜೂನ್ 7ರಂದು ತಾವರಗೇರೆ ಗ್ರಾಮದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಆದ್ರೆ, ಮದುವೆ ಐದು ದಿನಗಳ ಮುಂಚೆ ಅಂದರೆ ಜೂನ್ 2ರಂದು ನಿಂಗಪ್ಪ ತೋಟದ ಮನೆಯಲ್ಲಿ ಕೊಲೆಯಾಗಿದ್ದ. ಕಲಘಟಗಿ ತಾಲೂಕಿನ ಜಿನ್ನೂರು ಗ್ರಾಮದ ತೋಟದ ಮನೆಯಲ್ಲಿ ಮಧ್ಯರಾತ್ರಿ ನಿಂಗಪ್ಪನ ಕಣ್ಣಿಗೆ ಖಾರದ ಪುಡಿ ಎರಚಿ ಕತ್ತು ಹಿಸುಕಿ ಕೊಲೆ ಮಾಡಲಾಗಿತ್ತು. ಇನ್ನೇನು ಐದೇ ದಿನದಲ್ಲಿ ಮದುವೆಯಾಗಿ ಹೊಸ ಜೀವನ ಆರಂಭಿಸಬೇಕಿದ್ದ ನಿಂಗಪ್ಪ ಮಸಣ ಸೇರಿದ್ದ. ಇದರಿಂದ ಮದುವೆ ಮನೆಯಲ್ಲಿ ನೀರವ ಮೌನ ಆವರಿಸಿತ್ತು.

ವಿಷಯ ತಿಳಿದು ಸ್ಥಳಕ್ಕೆ ಕಲಘಟಗಿ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪೊಲೀಸರು ಕೊಲೆಯಾದ ಎರಡೇ ದಿನದಲ್ಲಿ ಪ್ರಕರಣವನ್ನು ಭೇದಿಸಿದ್ದು, ಹತ್ಯೆಗೆ ಅನೈತಿಕ ಸಂಬಂಧವೇ ಕಾರಣ ಎಂದು ತಿಳಿದುಬಂದಿದೆ. ಅಲ್ಲದೇ ಕೊಲೆ ಆರೋಪಿಗಳಾದ ಮಹಿಳೆಯ ಗಂಡ ಮುತ್ತಪ್ಪ ಹಾಗೂ ಆತನ ಸಹೋದರ ವೀರಭದ್ರ ಜಾಲಿಹಾಳ ಎನ್ನುವಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ