ವೀರಶೈವ ಲಿಂಗಾಯತ ಸಂಪ್ರದಾಯದಂತೆ, ಪೊಲೀಸ್ ಗೌರವದೊಂದಿಗೆ ಚೆನ್ನವೀರ ಕಣವಿ ಅಂತ್ಯಕ್ರಿಯೆ

ಪುತ್ರ ಶಿವಾನಂದ ಕಣವಿ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಹಾಲಪ್ಪ ಆಚಾರ್​, ಶಾಸಕ ಅರವಿಂದ ಬೆಲ್ಲದ್, ಡಿಸಿ ಹಾಗೂ ಎಸ್​ಪಿ ಸಹಿತ ವಿವಿಧ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

ವೀರಶೈವ ಲಿಂಗಾಯತ ಸಂಪ್ರದಾಯದಂತೆ, ಪೊಲೀಸ್ ಗೌರವದೊಂದಿಗೆ ಚೆನ್ನವೀರ ಕಣವಿ ಅಂತ್ಯಕ್ರಿಯೆ
ಚೆಂಬೆಳಕಿನ ಖ್ಯಾತಿಯ ನಾಡೋಜ ಚೆನ್ನವೀರ ಕಣವಿ
Follow us
TV9 Web
| Updated By: ganapathi bhat

Updated on: Feb 16, 2022 | 8:12 PM

ಧಾರವಾಡ: ಹಿರಿಯ ಸಾಹಿತಿ, ನಾಡೋಜ, ಕವಿ ಚೆನ್ನವೀರ ಕಣವಿ ಅವರ ಅಂತ್ಯಕ್ರಿಯೆಯನ್ನು ಧಾರವಾಡದ ಅಳ್ನಾವರ ರಸ್ತೆಯಲ್ಲಿರುವ ಸೃಷ್ಟಿ ಫಾರ್ಮ್​ನಲ್ಲಿ ನಡೆಸಲಾಗಿದೆ. ಪೊಲೀಸ್ ಗೌರವದೊಂದಿಗೆ ಸೃಷ್ಟಿ ಫಾರ್ಮ್​ನಲ್ಲಿ ಚೆನ್ನವೀರ ಕಣವಿಯವರ ಅಂತ್ಯಕ್ರಿಯೆ ನಡೆದಿದೆ. ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಪತ್ನಿ ಶಾಂತಾದೇವಿ ಸಮಾಧಿ ಪಕ್ಕದಲ್ಲೇ ಕಣವಿ ಅಂತ್ಯಕ್ರಿಯೆ ಮಾಡಲಾಗಿದೆ. ಪುತ್ರ ಶಿವಾನಂದ ಕಣವಿ ತಂದೆಯ ಅಂತಿಮ ವಿಧಿವಿಧಾನ ನೆರವೇರಿಸಿದ್ದಾರೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಹಾಲಪ್ಪ ಆಚಾರ್​, ಶಾಸಕ ಅರವಿಂದ ಬೆಲ್ಲದ್, ಡಿಸಿ ಹಾಗೂ ಎಸ್​ಪಿ ಸಹಿತ ವಿವಿಧ ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದಾರೆ.

ಚೆಂಬೆಳಕಿನ‌ ಖ್ಯಾತಿಯ ಕವಿ ನಾಡೋಜ ಚೆನ್ನವೀರ ಕಣವಿ(93)(Chennaveera Kanavi) ಅಸ್ತಂಗತರಾಗಿದ್ದಾರೆ. ಅಸೌಖ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಹಿರಿಯ ಕವಿ, ನಾಡೋಜ ಚೆನ್ನವೀರ ಕಣವಿ ಧಾರವಾಡದ ಎಸ್​ಡಿಎಂ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಣವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಧಾರವಾಡದ ಎಸ್​ಡಿಎಂ ಆಸ್ಪತ್ರೆ ಈ ಹಿಂದೆ ಹೆಲ್ತ್ ಬುಲೆಟಿನ್​ ಬಿಡುಗಡೆ ಮಾಡಿತ್ತು. ಆ ಬಳಿಕ ಅವರ ಆರೋಗ್ಯ ಸ್ಥಿತಿ ಸುಧಾರಿಸಲಿಲ್ಲ. ಕಣವಿಯವರ ಶ್ವಾಸಕೋಶದಲ್ಲಿ ಸೋಂಕಿನ ತೀವ್ರತೆ ಹೆಚ್ಚಾಗಿದ್ದು, ಎದೆ ಭಾಗದಲ್ಲಿ ಹೆಚ್ಚಿನ ಸೋಂಕು ಹರಡಿತ್ತು. ಶ್ವಾಸಕೋಶ ಉಸಿರಾಟದ ಶಕ್ತಿ ಕಳೆದುಕೊಂಡಿತ್ತು.

ಅಕ್ಯೂಟ್​ ರೆಸ್ಪಿರೇಟರಿ ಡಿಸ್ಟ್ರೆಸ್​ ಸಿಂಡ್ರೋಮ್​ನಿಂದ (ARDS) ಚೆನ್ನವೀರ ಕಣವಿ ಬಳಲುತ್ತಿದ್ದರು. ಸುಮಾರು ಒಂದು ತಿಂಗಳಿನಿಂದ ಎಸ್​ಡಿಎಂ ಆಸ್ಪತ್ರೆಯಲ್ಲಿ ಕಣವಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಈ ಮೊದಲು, ಉಸಿರಾಟ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದ ಹಿರಿಯ ಕವಿ ನಾಡೋಜ ಚೆನ್ನವೀರ ಕಣವಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿತ್ತು. ಆದರೆ, ಮತ್ತೆ ಆರೋಗ್ಯ ಕ್ಷೀಣಿಸಿತ್ತು. ಕಣವಿಯವರಿಗೆ ಕೊರೊನಾ ಸೋಂಕು ಕೂಡ ದೃಢಪಟ್ಟಿತ್ತು.

ನಾಡೋಜ ಚೆನ್ನವೀರ ಕಣವಿ ನಿಧನಕ್ಕೆ ಸಿಎಂ ಸಂತಾಪ

ನಾಡೋಜ ಚೆನ್ನವೀರ ಕಣವಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ. ಸಜ್ಜನಿಕೆಗೆ ಸಾಕಾರಮೂರ್ತಿ ಚೆನ್ನವೀರ ಕಣವಿಯವರು ಮೃದು ಮಾತುಗಳಿಂದಲೇ ಮನಸ್ಸನ್ನು ಗೆಲ್ಲುತ್ತಿದ್ದರು. ಕಣವಿ ಅವರು ಸಾಹಿತ್ಯ ಲೋಕಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ರು. ಅವರು ಅವರ ಕುಟುಂಬ ನಮಗೆ ನಾಲ್ಕು ದಶಕಗಳಿಂದ ಆಪ್ತ. ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಪ್ರಶಸ್ತಿಗಳಿಗೇ ಅವರಿಂದ ಶೋಭೆ ಸಿಕ್ತಿತ್ತು. ಪ್ರಶಸ್ತಿಗೆ ಗೌರವ ತರುವಂತೆ ಅವರ ವ್ಯಕ್ತಿತ್ವ ಇರುತ್ತಿತ್ತು. ಕನ್ನಡ ಸಾರಸ್ವತ ಲೋಕಕ್ಕೆ ಅಪಾರ ನಷ್ಟವಾಗಿದೆ. ಕನ್ನಡ ಸಾಹಿತ್ಯ ಒಬ್ಬೊಬ್ಬರನ್ನೇ ಕಳೆದುಕೊಳ್ತಿದೆ. ಕಳೆದುಕೊಂಡವರ ಪ್ರೇರಣೆ ಕನ್ನಡ ಸಾಹಿತ್ಯದವರು ಪಡೆಯಲಿ. ಆ ಮೂಲಕ ಮತ್ತಷ್ಟು‌ ಮೇರು ಸಾಹಿತಿಗಳು ಬರಲಿ. ನಾಡೋಜ ಚೆನ್ನವೀರ ಕಣವಿ ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಬೆಂಗಳೂರಿನಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: Chennaveera Kanavi Death: ‘ಗದ್ಯವನ್ನು ನಾನು ಆಮೆಗತಿಯಲ್ಲಿ ಬರೆಯಲು ಶುರು ಮಾಡಿದ್ದೇನೆ’ ಎಂದಿದ್ದರು ಚೆನ್ನವೀರ ಕಣವಿ

ಇದನ್ನೂ ಓದಿ: Chennaveera Kanavi Death: ಲಂಬಾಣಿ ಭಾಷೆ, ಕುಣಿತದ ಮೋಡಿಗೆ ಒಳಗಾಗಿದ್ದ ಕವಿ ಕಣವಿ ಮನಸ್ಸು

ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?