AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಡಿನ ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಕನ್ನಡ ಪುಸ್ತಕ ಪ್ರಾಧಿಕಾರದ 2021ನೇ ಸಾಲಿನ ಡಾ.ಎಂ.ಎಂ. ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿಗೆ ಭಾಜನರಾಗಿದ್ದ ಧಾರವಾಡದ ಸಾಹಿತಿ ಗುರುಲಿಂಗ ಕಾಪಸೆ ಅವರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾಡಿನ ಹೆಸರಾಂತ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ
ಗುರುಲಿಂಗ ಕಾಪಸೆ
Follow us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Updated By: ಆಯೇಷಾ ಬಾನು

Updated on:Mar 27, 2024 | 8:38 AM

ಧಾರವಾಡ, ಮಾರ್ಚ್​.27: ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಸಾಹಿತಿ ಗುರುಲಿಂಗ ಕಾಪಸೆ(96) ಅವರು ಖಾಸಗಿ ಆಸ್ಪತ್ರೆಯಲ್ಲೇ ಬೆಳಗಿನ ಜಾವ ನಿಧನರಾಗಿದ್ದಾರೆ. ನಾಡಿನ ಹೆಸರಾಂತ ಸಾಹಿತಿಯಾಗಿದ್ದ ಗುರುಲಿಂಗ ಕಾಪಸೆ (Gurulinga Kapase) ಅವರ ಮೂಲ ಊರು ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಲೋಣಿ ಬಿಕೆ ಗ್ರಾಮ. ಸದ್ಯ ಧಾರವಾಡದ (Dharwad) ಸಪ್ತಾಪುರ ದುರ್ಗಾ ಕಾಲೋನಿಯಲ್ಲಿ ನೆಲೆಸಿದ್ದರು. ಕನ್ನಡ ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷರಾಗಿದ್ದರು.

1928ರ ಎಪ್ರಿಲ್ 2ರಂದು ಜನಿಸಿದ ಗುರುಲಿಂಗ ಕಾಪಸೆ ಅವರು ತಮ್ಮ 96ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇಂದು ಮಧ್ಯಾಹ್ನ 2ರವರೆಗೆ ದುರ್ಗಾ ಕಾಲೋನಿಯ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಗುರುಲಿಂಗ ಕಾಪಸೆ ಅವರು ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಪಾರ ಅಭಿಮಾನಿ ಬಳಗವನ್ನಗಲಿದ್ದಾರೆ.

ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದ ಕಾಪಸೆ ಕನ್ನಡ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಧುರ ಚೆನ್ನರ ಜೀವನ ಹಾಗೂ ಕೃತಿಗಳ ಕುರಿತ ಮಹಾಪ್ರಬಂಧ ರಚಿಸಿದ್ದರು. ಮಧುರ ಚೆನ್ನ, ಅಕ್ಕಮಹಾದೇವಿ, ಅರವಿಂದರು, ಬಸವೇಶ್ವರ, ಹಲಸಂಗಿ ಗೆಳೆಯರು ಸೇರಿ ಹಲವು ಕೃತಿಗಳನ್ನು ರಚಿಸಿದ್ದಾರೆ. ಮರಾಠಿಯಿಂದ ಅನೇಕ ಕೃತಿಗಳನ್ನು ಕನ್ನಡ ಅನುವಾದ ಮಾಡಿದ ಹೆಗ್ಗಳಿಕೆ ಇವರಿಗೆ ಸಲ್ಲುತ್ತದೆ. ಮಕ್ಕಳ ಸಾಹಿತ್ಯದಲ್ಲಿ ಅನೇಕ ಕೃತಿಗಳನ್ನು ರಚಿಸಿದ್ದಾರೆ. ಕಾಪಸೆಯವರು ದ.ರಾ.ಬೇಂದ್ರೆ, ಮಧುರ ಚೆನ್ನ ಸೇರಿ ಹಲವು ಸಾಹಿತಿಗಳ ಒಡನಾಡಿಯಾಗಿದ್ದರು.

ಇದನ್ನೂ ಓದಿ: Award : ಹಿರಿಯ ಲೇಖಕ ಡಾ. ಗುರುಲಿಂಗ ಕಾಪಸೆ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಅನುವಾದ ಪ್ರಶಸ್ತಿ

ಕಾಪಸೆಯವರು ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. 1945ರಲ್ಲಿ ತಮ್ಮ 18ನೇ ವಯಸ್ಸಿನಲ್ಲಿಯೇ ತಮ್ಮೂರಿನಲ್ಲಿ ಶಿಕ್ಷಕರಾಗಿ ಸೇವೆ ಆರಂಭ ಮಾಡಿದ ಕಾಪಸೆ ಕಾಲಾಂತರದಲ್ಲಿ ಧಾರವಾಡಕ್ಕೆ ಬಂದು ನೆಲೆಸಿದ್ದರು.

ತಮ್ಮ ಬಡತನದ ಪರಿಸ್ಥಿತಿಯಲ್ಲೇ ಗುರುಲಿಂಗ ಕಾಪಸೆಯವರು “ರೇಲೋಣಿಯಲ್ಲಿ ನಾಲ್ಕನೇ ತರಗತಿಯವರೆಗೆ ಶಿಕ್ಷಣವನ್ನು ಪೂರೈಸಿದರು. ನಂತರ ಶಿಕ್ಷಣ ಮುಂದುವರಿಸದೇ ಎರಡು ವರ್ಷ ಹೊಲ-ಮನೆ ಕೆಲಸದಲ್ಲಿ ತೊಡಗಿದರು. ಪ್ರತಿಭಾವಂತ “ವಿದ್ಯಾರ್ಥಿಯಾಗಿರುವುದರಿಂದ ಗುರುಗಳ ಪ್ರೋತ್ಸಾಹದಿಂದ ಕಾಪಸೆಯವರು ಚಡಚಣ ಮತ್ತು ಬರಡೋಲಗಳಲ್ಲಿ ಶಿಕ್ಷಣ ಮುಂದುವರೆಸಿ 1945ರಲ್ಲಿ ಮುಲ್ಕಿ ಪರೀಕ್ಷೆಯನ್ನು ಪಾಸು ಮಾಡಿದರು. 1953ರಲ್ಲಿ ಹಿಂದಿ ಭಾಷೆ ತೆಗೆದುಕೊಂಡು ಪೂನಾ ಬೋರ್ಡಿನಿಂದ ಮೆಟ್ರಿಕ್‌ನ್ನು ಪೂರ್ಣಗೊಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 8:36 am, Wed, 27 March 24

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್
ಸದ್ಯದ ಸ್ಥಿತಿಯಲ್ಲಿ ಪ್ರಧಾನಿ ಮೋದಿಯವರ ನಿರ್ಣಯವೇ ಅಂತಿಮ: ಹೆಚ್​ಕೆ ಪಾಟೀಲ್