ಡಿಮ್ಹಾನ್ಸ್ ಆಸ್ಪತ್ರೆಗೆ ಸೌಕರ್ಯ ಕಲ್ಪಿಸದ ಸರ್ಕಾರ: ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದ ಹೈಕೋರ್ಟ್
ಅಧಿಕಾರಿ ಹಾಜರಾಗದಿರುವುದಕ್ಕೆ ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ ಗರಂ ಆಗಿದ್ದಾರೆ. ಕೋರ್ಟ್ ಆದೇಶಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ. ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳುಹಿಸುತ್ತೇವೆ. ಕೋರ್ಟ್‌ನ ಆದೇಶದ ಪ್ರಾಮುಖ್ಯತೆ ಅರ್ಥ ಮಾಡಿಸುತ್ತೇವೆ ಎಂದಿದ್ದಾರೆ.
ಧಾರವಾಡ: ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಗೆ ಮೂಲಸೌಕರ್ಯ ಕಲ್ಪಿಸದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್ ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳಿಸ್ತೇವೆ ಎಂದು ಗುಡುಗಿದೆ. ಧಾರವಾಡದ ಡಿಮ್ಹಾನ್ಸ್ ಆಸ್ಪತ್ರೆಗೆ ಸರ್ಕಾರ ಮೂಲಸೌಕರ್ಯ ಕಲ್ಪಿಸಿಲ್ಲ. ವಿಚಾರಣೆಗೆ ಹಾಜರಾಗಲು ಸೂಚಿಸಿದ್ದರೂ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಗೈರು ಹಾಜರಾಗಿದ್ದಾರೆ. ಕ್ಯಾಬಿನೆಟ್ ಮೀಟಿಂಗ್‌ಗೆ ಹಾಜರಾಗಲು ತೆರಳಿರುವುದಾಗಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ತರಾಟೆಗೆ ತೆಗೆದುಕೊಂಡಿದೆ.
ಅಧಿಕಾರಿ ಹಾಜರಾಗದಿರುವುದಕ್ಕೆ ಹೈಕೋರ್ಟ್ ಸಿಜೆ ರಿತುರಾಜ್ ಅವಸ್ತಿ ಗರಂ ಆಗಿದ್ದಾರೆ. ಕೋರ್ಟ್ ಆದೇಶಗಳನ್ನು ಅಧಿಕಾರಿಗಳು ಪಾಲಿಸುತ್ತಿಲ್ಲ. ಸಂಬಂಧಿಸಿದ ಅಧಿಕಾರಿಯನ್ನು ಜೈಲಿಗೆ ಕಳುಹಿಸುತ್ತೇವೆ. ಕೋರ್ಟ್‌ನ ಆದೇಶದ ಪ್ರಾಮುಖ್ಯತೆ ಅರ್ಥ ಮಾಡಿಸುತ್ತೇವೆ. ಡಿಮ್ಹಾನ್ಸ್ ಆಸ್ಪತ್ರೆಗೆ ಎಂಆರ್‌ಐ ಸಿಟಿ ಸ್ಕ್ಯಾನ್ ಯಂತ್ರ ಒದಗಿಸಿಲ್ಲ. ಮೆಡಿಕಲ್ ಸೂಪರಿಂಟೆಂಡೆಂಟ್ ನೇಮಕ ಮಾಡಿಲ್ಲ ಯಾಕೆ ಎಂದು ಆಕ್ರೋಶ ವ್ಯಕ್ತಪಡಿಸಿದ ನ್ಯಾಯಪೀಠವು ವೈದ್ಯಕೀಯ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಜರಿಗೆ ಸೂಚಿಸಿದೆ.
Appu Family Samadhi Pooje: ಅಪ್ಪು ಸಮಾಧಿಗೆ ಕುಟುಂಬಸ್ಥರಿಂದ ಪೂಜೆ ಆರಂಭ|Tv9 kannada
(karnataka government fails to provide basic facilities to dharwad dimhans high court orders officer to be present)