ಹುಬ್ಬಳ್ಳಿ: ಅಟಲ್ ಮಿಷನ್ ಫಾರ್ ರಿಜುವಿನೇಶನ್ ಆ್ಯಂಡ್ ಅರ್ಬನ್ ಟ್ರಾನ್ಸ್ಫಾರ್ಮೇಶನ್ 2.0 ಕೇಂದ್ರ ಸರ್ಕಾರದ ಯೋಜನೆಯಡಿ ರಾಜ್ಯದ ಒಟ್ಟು 22 ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad joshi) ಹೇಳಿದ್ದಾರೆ.
ಒಟ್ಟು ರೂ. 161.60 ಕೋಟಿ ವೆಚ್ಚದಲ್ಲಿ ಯೋಜನೆಗಳನ್ನು ಕೈಗೊಳ್ಳಲಾಗುತ್ತಿದ್ದು ಇವುಗಳಲ್ಲಿ ಧಾರವಾಡ ಲೋಕಸಭಾ ವ್ಯಾಪ್ತಿಯಲ್ಲಿನ ನವಲಗುಂದ, ಕಲಘಟಗಿ, ಶಿಗ್ಗಾಂವ, ಬಂಕಾಪೂರ ಪಟ್ಟಣಗಳಲ್ಲಿ ನೀರು ಸರಬರಾಜು ಕಾಮಗಾರಿಗಳು ಸೇರಿವೆ. ನವಲಗುಂದಕ್ಕೆ 48.31 ಕೋಟಿ, ಶಿಗ್ಗಾಂವ 65.30 ಕೋಟಿ, ಕಲಘಟಗಿ 38.78 ಕೋಟಿ ಹಾಗೂ ಬಂಕಾಪೂರ 44.53 ಕೋಟಿ ವೆಚ್ಚದಲ್ಲಿ ನೀರು ಸರಬರಾಜು ಹಾಗೂ ಪೂರೈಕೆಯ ಮೂಲ ಸೌಲಭ್ಯ ನಿರ್ಮಾಣ ಯೋಜನೆಗಳು ಕಾರ್ಯಗತಗೊಳ್ಳಲಿವೆ ಎಂದು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ: ಹುಬ್ಬಳ್ಳಿ: ವಿಚಿತ್ರ ಕಾಯಿಲೆಯಿಂದ ಬಳಲುತ್ತಿರುವ ಮಗು; ಸವಾಲಾಗಿ ಸ್ವೀಕರಿಸಿದ ವೈದ್ಯರು
ಈ ಪಟ್ಟಣಗಳ ಜನರ ಬಹುದಿನಗಳ ನೀರಿನ ಬವಣೆ ತಪ್ಪಲಿದೆ. ಕರ್ನಾಟಕ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಪೌರಾಡಳಿತ ಇಲಾಖೆ ನಿರ್ದೇಶನಾಲಯಕ್ಕೆ ಈ ಅನುಮೋದಿತ ಯೋಜನೆಗಳ ಅನುಷ್ಠಾನಕ್ಕೆ ಸೂಚಿಸಲಾಗಿದೆ. “ಅಮೃತ’ ಯೋಜನೆಯ ಮಾರ್ಗದರ್ಶಕ ಸೂತ್ರಗಳನ್ವಯ ತ್ವರಿತ ಕ್ರಮ ಕೈಗೊಳ್ಳಬೇಕು. ಅಲ್ಲದೇ ಕೂಡಲೇ ಈ ಪ್ರಾಧಿಕಾರಗಳು ಕಾರ್ಯೋನ್ಮುಖವಾಗಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಯೋಜನೆಯನ್ನು ಮಂಜೂರು ಮಾಡಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ವಸತಿ ಹಾಗೂ ನಗರ ವ್ಯವಹಾರಗಳ ಸಚಿವ ಹರದೀಪಸಿಂಗ್ ಪುರಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಲ್ಹಾದ್ ಜೋಶಿ ಧನ್ಯವಾದ ಹೇಳಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ