AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿಯ ಚನ್ನಮ್ಮ ಸರ್ಕಲ್ ಮೇಲ್ಸೇತುವೆ ನಿರ್ಮಾಣಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೆ, ಹೈಕೋರ್ಟ್​ಗೆ 87 ಮಂದಿ ಪಿಐಎಲ್ ಸಲ್ಲಿಸಿದ್ದರು. ಆದರೆ ಇದನ್ನು ಕೋರ್ಟ್ ವಜಾಗೊಳಿಸಿದ್ದು, ಮೇಲ್ಸೇತುವೆ ಎಲ್ಲಿರಬೇಕು, ಹೇಗಿರಬೇಕೆಂದು ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಆ ಮೂಲಕ ಕಾಮಗಾರಿಯಲ್ಲಿ‌ ಮಧ್ಯಪ್ರವೇಶಿಸಲು ನಿರಾಕರಿಸಿತು.

ಹುಬ್ಬಳ್ಳಿ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಹುಬ್ಬಳ್ಳಿ ಚನ್ನಮ್ಮ ಸರ್ಕಲ್ ಮೇಲ್ಸೇತುವೆ ಪ್ರಶ್ನಿಸಿದ್ದ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
Ramesha M
| Updated By: Rakesh Nayak Manchi|

Updated on:Sep 26, 2023 | 10:02 PM

Share

ಬೆಂಗಳೂರು, ಸೆ.26: ಹುಬ್ಬಳ್ಳಿಯ ಚೆನ್ನಮ್ಮ ಸರ್ಕಲ್ ಮೇಲ್ಸೇತುವೆ (Hubballi Chennamma Circle Flyover) ನಿರ್ಮಾಣಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿತ್ತು. ಅಲ್ಲದೆ, ಹೈಕೋರ್ಟ್​ಗೆ (High Court) 87 ಮಂದಿ ಪಿಐಎಲ್ ಸಲ್ಲಿಸಿದ್ದರು. ಆದರೆ ಇದನ್ನು ಕೋರ್ಟ್ ವಜಾಗೊಳಿಸಿದ್ದು, ಮೇಲ್ಸೇತುವೆ ಎಲ್ಲಿರಬೇಕು, ಹೇಗಿರಬೇಕೆಂದು ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಆ ಮೂಲಕ ಕಾಮಗಾರಿಯಲ್ಲಿ‌ ಮಧ್ಯಪ್ರವೇಶಿಸಲು ನಿರಾಕರಿಸಿತು.

ಮೇಲ್ಸೇತುವೆ ಯೋಜನೆ ಪ್ರಶ್ನಿಸಿ 87 ನಿವಾಸಿಗಳು ಸಲ್ಲಿಸಿದ್ದ ಪಿಐಎಲ್ ವಜಾಗೊಳಿಸಿದ ಸಿಜೆ ಪ್ರಸನ್ನ ಬಿ.ವರಾಳೆ,‌ ನ್ಯಾ.ಕೃಷ್ಣದೀಕ್ಷಿತ್‌ ಅವರಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದ ಯೋಜನೆ ಇದಾಗಿದೆ. ಮೇಲ್ಸೇತುವೆ ಎಲ್ಲಿರಬೇಕು, ಹೇಗಿರಬೇಕೆಂದು ಕೋರ್ಟ್ ನಿರ್ಧರಿಸಲು ಸಾಧ್ಯವಿಲ್ಲ. 196 ಕೋಟಿ ವೆಚ್ಚದ ಯೋಜನೆಯಲ್ಲಿ ಅರ್ಧದಷ್ಟು ವೆಚ್ಚವಾಗಿದೆ. ತಜ್ಞರು ಮೇಲ್ಸೇತುವೆ ಯೋಜನೆಯ ರೂಪರೇಷೆ ಸಿದ್ಧಪಡಿಸಿದ್ದಾರೆ ಎಂದು ಹೇಳಿ ಕಾಮಗಾರಿಯಲ್ಲಿ‌ ಮಧ್ಯಪ್ರವೇಶಿಸಲು ನಿರಾಕರಿಸಿತು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ವಿರುದ್ಧದ ಚುನಾವಣಾ ತಕರಾರು ಅರ್ಜಿ: ವಿಚಾರಣೆ ಅ. 6ಕ್ಕೆ ಮುಂದೂಡಿದ ಹೈಕೋರ್ಟ್

ಕನಿಷ್ಟ 30 ಮೀಟರ್ ತಿರುವು ಇರಬೇಕು. ಸುರಕ್ಷಿತ ನಿಲುಗಡೆಗೆ 25 ಮೀಟರ್, 2 ಮೀಟರ್ ಸೈಕಲ್ ಟ್ರಾಕ್, 1.8 ಮೀಟರ್ ಪಾದಚಾರಿ ಮಾರ್ಗ, 7 ಮೀಟರ್ ಅಗಲದ ಸರ್ವಿಸ್ ರಸ್ತೆ ನಿರ್ಮಾಣವಾಗಬೇಕು. ಆದರೆ ಸದ್ಯ ನಿರ್ಮಾಣವಾಗುತ್ತಿರುವ ಮೇಲ್ಸೇತುವೆ ಈ ನಿಯಮ ಪಾಲಿಸುತ್ತಿಲ್ಲ ಎಂದು ವಾದಿಸಿದ್ದರು.

ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪ ಎತ್ತಿದ ಕೇಂದ್ರ ಸರ್ಕಾರದ ಡಿಎಸ್ ಜಿ ಶಾಂತಿಭೂಷಣ್ ಅರ್ಜಿದಾರರ ಆರೋಪಗಳು ಆಧಾರರಹಿತ, ಅಲ್ಲದೇ ಯೋಜನೆ ಅರ್ಧದಷ್ಟು ಮುಕ್ತಾಯವಾಗಿದೆ. 196 ಕೋಟಿ ವೆಚ್ಚದ ಯೋಜನೆಯಲ್ಲಿ 81 ಲಕ್ಷ ರೂಪಾಯಿಗಳಷ್ಟು ಕಾಮಗಾರಿ ಮುಕ್ತಾಯವಾಗಿದೆ. ಅಲ್ಲದೇ ಎಲ್ಲಾ ತಾಂತ್ರಿಕ ಅಂಶಗಳನ್ನು ಪರಿಗಣಿಸಲಾಗಿದೆ ಎಂದು ರಾಷ್ಟ್ರೀಯ ಪ್ರಾಧಿಕಾರದ ಪ್ರಮಾಣಪತ್ರ ಸಲ್ಲಿಸಿದರು.

ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ. ವರಾಳೆ, ಹಾಗೂ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ರಿದ್ದ ಹೈಕೋರ್ಟ್ ಪೀಠ ಸಂಚಾರ ದಟ್ಟಣೆ ನಿವಾರಿಸುವ ಉದ್ದೇಶದ ಯೋಜನೆ ಇದಾಗಿದೆ. ಮೇಲ್ಸೇತುವೆ ಎಲ್ಲಿರಬೇಕು, ಹೇಗಿರಬೇಕೆಂದು ಕೋರ್ಟ್ ನಿರ್ಧರಿಸಲು ಸಾದ್ಯವಿಲ್ಲ.. 196 ಕೋಟಿ ವೆಚ್ಚದ ಯೋಜನೆಯಲ್ಲಿ ಅರ್ಧದಷ್ಟು ವೆಚ್ಚವಾಗಿದೆ. ತಜ್ಞರು ಯೋಜನೆಯ ರೂಪುರೇಷೆ ಸಿದ್ದಪಡಿಸಿದ್ದಾರೆ. ನಗರದ ಜನಸಂಖ್ಯೆ ಹೆಚ್ಚುತ್ತಿರುವ ಕಾರಣದಿಂದ ಸಂಚಾರ ದಟ್ಟಣೆ ತಪ್ಪಿಸಲು ಮೇಲ್ಸೇತುವೆ ಅಗತ್ಯವಿದೆ ಎಂದು ಅಭಿಪ್ರಾಯ ಪಟ್ಟ ನ್ಯಾಯಪೀಠ ಕಾಮಗಾರಿಯಲ್ಲಿ‌ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ಸಾರ್ವಜನಿಕರ ವಿರೋಧದ ನಡುವೆಯೂ ಚೆನ್ನಮ್ಮ ವೃತ್ತದಲ್ಲಿ ಮೇಲ್ಸೇತುವೆ ನಿರ್ಮಾಣಕ್ಕೆ ತಜ್ಞರ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ. ಸಮಗ್ರ ಅಧ್ಯಯನ ನಡೆಸಿದ ನಂತರ ಸಮಿತಿಯು ಮೇಲ್ಸೇತುವೆ ನಿರ್ಮಾಣಕ್ಕೆ ಅನುಮತಿ ನೀಡಿದೆ. ಅದಾಗ್ಯೂ, ಕೆಲವೊಂದು ಬದಲಾವಣೆಗಳೊಂದಿಗೆ ಮೇಲ್ಸೇತುವೆ ನಿರ್ಮಾಣಕ್ಕೆ ಶಿಫಾರಸ್ಸು ಮಾಡಲಾಗಿತ್ತು.

ಚನ್ನಮ್ಮ ವೃತ್ತ ಸಂಪರ್ಕ ಏಳು ರಸ್ತೆಗಳಲ್ಲಿ ನಾಲ್ಕು ರಸ್ತೆಗಳ ಮೇಲೆ ಈಗಾಗಲೇ ಒತ್ತಡ ಹೆಚ್ಚಿದೆ. ದಿನೇ ದಿನೇ ವಾಹನ ದಟ್ಟಣೆ ಹೆಚ್ಚಾಗುತ್ತಲೇ ಇದೆ. ಪರ್ಯಾಯ ರಸ್ತೆಗಳನ್ನು ನಿರ್ಮಿಸಿದರೆ ಸ್ಥಳೀಯ ಮನೆ ಹಾಗೂ ವಾಣಿಜ್ಯ ಕಟ್ಟಡಗಳಿಗೆ ಧಕ್ಕೆ ಉಂಟಾಗಲಿದೆ. ಹೀಗಾಗಿ ಮೇಲ್ಸೇತುವೆ ನಿರ್ಮಾಣವೊಂದೇ ಮುಂದಿನ ದಾರಿ ಎಂದು ಈ ಹಿಂದೆ ಇದ್ದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:59 pm, Tue, 26 September 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ