ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿದ್ದ ಪಿಐಎಲ್ ವಜಾ

|

Updated on: Mar 20, 2023 | 8:33 PM

ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ (Rani Chennamma) ಹೆಸರಿಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ (Karnataka High Court) ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ.

ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡುವುದನ್ನು ಪ್ರಶ್ನಿಸಿದ್ದ ಪಿಐಎಲ್ ವಜಾ
ಕರ್ನಾಟಕ ಹೈಕೋರ್ಟ್
Follow us on

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ಕಿತ್ತೂರು ರಾಣಿ ಚೆನ್ನಮ್ಮ (Rani Chennamma) ಹೆಸರಿಡುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (PIL) ಕರ್ನಾಟಕ ಹೈಕೋರ್ಟ್ (Karnataka High Court) ವಿಭಾಗೀಯ ಪೀಠ ಸೋಮವಾರ ವಜಾಗೊಳಿಸಿದೆ. ಹುಬ್ಬಳ್ಳಿ ಧಾರವಾಡ ಪಾಲಿಕೆ ಕ್ರಮ ಪ್ರಶ್ನಿಸಿ ಹುಸೇನ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ವಾದ ಮಂಡಿಸಿದ ಸರ್ಕಾರಿ ವಕೀಲ ಎಸ್.ಎಸ್.ಮಹೇಂದ್ರ, ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ಸಾರ್ವಜನಿಕರ ಆಕ್ಷೇಪಣೆ ಕೋರಲಾಗಿದೆ. ಆಕ್ಷೇಪಣೆ ಸ್ವೀಕರಿಸಿದ ಬಳಿಕವೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

ಸರ್ಕಾರಿ ವಕೀಲರ ವಾದ ಆಲಿಸಿದ ವಿಭಾಗೀಯ ಪೀಠ, ಪಿಐಎಲ್ ಅರ್ಜಿಯನ್ನು ತಿರಸ್ಕರಿಸಿತು. ಈದ್ಗಾ ಮೈದಾನಕ್ಕೆ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಹೆಸರನ್ನು ಇಡುವ ಬಗ್ಗೆ ಇತ್ತೀಚೆಗೆ ನಡೆದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಚರ್ಚೆಯಾಗಿತ್ತು. ನಂತರ ಆ ಕುರಿತು ಪ್ರಕಟಣೆ ಹೊರಡಿಸಿದ್ದ ಪಾಲಿಕೆ 30 ದಿನಗಳ ಒಳಗಾಗಿ ತಕರಾರರು ಅರ್ಜಿ ಸಲ್ಲಿಸುವಂತೆ ಸಾರ್ವಜನಿಕರಿಗೆ ಸೂಚಿಸಿತ್ತು.

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನಕ್ಕೆ ರಾಣಿ ಚೆನ್ನಮ್ಮ ಹೆಸರಿಡಲು ವಿರೋಧ: ಪಾಲಿಕೆ ಎದುರು AIMIM ಕಾರ್ಯಕರ್ತರಿಂದ ಪ್ರತಿಭಟನೆ

ರಾಣಿ ಚೆನ್ನಮ್ಮ ಹೆಸರಿಡುವ ಬಗ್ಗೆ ಎಐಎಂಐಎಂ ವಿರೋಧ ವ್ಯಕ್ತಪಡಿಸಿತ್ತು. ಹುಬ್ಬಳ್ಳಿ-ಧಾರವಾಡ ಪಾಲಿಕೆ ಕಚೇರಿ ಎದುರು ಎಐಎಂಐಎಂ ಕಾರ್ಯಕರ್ತರು ಇತ್ತೀಚೆಗೆ ಪ್ರತಿಭಟನೆಯನ್ನೂ ಮಾಡಿದ್ದಾರೆ. ಎಐಎಂಐಎಂ ಜಿಲ್ಲಾಧ್ಯಕ್ಷ ನಜೀರ್ ಅಹ್ಮದ್​ ಹೊನ್ಯಾಳ್ ನೇತೃತ್ವದಲ್ಲಿ ಧರಣಿ ನಡೆದಿದ್ದು, ಹುಬ್ಬಳ್ಳಿಯ ಈದ್ಗಾ ಮೈದಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಹೀಗಿರುವಾಗ ಮೈದಾನದ ಹೆಸರು ಬದಲಾಯಿಸುವುದು ಸರಿಯಲ್ಲ. ರಾಜಕೀಯ ದುರುದ್ದೇಶದಿಂದ ಹೆಸರು ಬದಲಿಸುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಆರೋಪಿಸಲಾಗಿತ್ತು. ಮರುನಾಮಕರಣ ಪ್ರಕ್ರಿಯೆ ಕೈಬಿಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದರು. ಬಳಿಕ ಮೇಯರ್​​ ಈರೇಶ್ ಅಂಚಟಗೇರಿಗೆ ಮನವಿ ಸಲ್ಲಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ