Republic day Parade 2023: ಕರ್ತವ್ಯಪಥ್​​ನಲ್ಲಿ ಕರ್ನಾಟಕ ಸ್ತಬ್ಧ ಚಿತ್ರ: ನಾರಿಶಕ್ತಿಯನ್ನು ಸ್ಮರಿಸಿದ ಕೇಂದ್ರ ಸಚಿವ ಜೋಶಿ

Republic day Parade 2023: ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ನಾರಿಶಕ್ತಿ ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿತ್ತು.

Republic day Parade 2023: ಕರ್ತವ್ಯಪಥ್​​ನಲ್ಲಿ ಕರ್ನಾಟಕ ಸ್ತಬ್ಧ ಚಿತ್ರ: ನಾರಿಶಕ್ತಿಯನ್ನು ಸ್ಮರಿಸಿದ ಕೇಂದ್ರ ಸಚಿವ ಜೋಶಿ
ಕರ್ನಾಟಕ ಸ್ತಬ್ಧ ಚಿತ್ರ (ಎಡಚಿತ್ರ) ಪ್ರಹ್ಲಾದ ಜೋಶಿ ಟ್ವೀಟ್​ (ಬಲ ಚಿತ್ರ)
Follow us
TV9 Web
| Updated By: ವಿವೇಕ ಬಿರಾದಾರ

Updated on:Jan 25, 2023 | 7:08 AM

ಹುಬ್ಬಳ್ಳಿ: ನವದೆಹಲಿಯಲ್ಲಿ ಜನವರಿ‌ 26 ರಂದು ನಡೆಯಲಿರುವ ಗಣರಾಜ್ಯೋತ್ಸವದ ಕಾರ್ಯಕ್ರಮದ ಪರೇಡ್‌ನಲ್ಲಿ ಭಾಗವಹಿಸಲು ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೊನೆ ಕ್ಷಣದಲ್ಲಿ ಅವಕಾಶ ನೀಡಲಾಗಿದೆ. ಪ್ರತಿ ವರ್ಷ ದೆಹಲಿಯ ಕರ್ತವ್ಯಪಥ್​​ನಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯ ಪರೇಡ್‍ನಲ್ಲಿ ಕರ್ನಾಟಕದ ಸ್ತಬ್ಧಚಿತ್ರ ಪ್ರದರ್ಶನ ಮಾಡಲಾಗುತ್ತಿತ್ತು. ಆದರೆ, ಈ ವರ್ಷ ಅನುಮತಿ ದೊರಕದೆ ಇದ್ದದ್ದು ಸುದ್ದಿಯಾಗಿತ್ತು. ಆದರೆ ಈಗ ಅನುಮತಿ ದೊರೆತಿದ್ದು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನು ಓದಿ: ಗಣರಾಜ್ಯೋತ್ಸವ ಪರೇಡ್​ನಲ್ಲಿ ಕರ್ತವ್ಯಪಥದಲ್ಲಿ ನೌಕಾದಳವನ್ನು ಮುನ್ನಡೆಸಲಿದ್ದಾರೆ ಕನ್ನಡತಿ ದಿಶಾ ಅಮೃತ್

ಈ ಬಾರಿಯ ಗಣರಾಜ್ಯೋತ್ಸವದ ಸ್ತಬ್ಧಚಿತ್ರ ಪ್ರದರ್ಶನಕ್ಕೆ ತಮಿಳುನಾಡು, ಕೇರಳ ಸೇರಿ ಒಟ್ಟು 13 ರಾಜ್ಯಗಳ ಸ್ತಬ್ಧಚಿತ್ರಗಳನ್ನು ಆಯ್ಕೆ ಮಾಡಲಾಗಿದೆ. ಆದರೆ, ಕರ್ನಾಟಕದ ಟ್ಯಾಬ್ಲೊಗೆ ಅವಕಾಶ ದೊರಕಿರಲಿಲ್ಲ. ಬೇರೆ ರಾಜ್ಯಗಳಿಗೆ ಅವಕಾಶ ಮಾಡಿಕೊಡುವ ಸಲುವಾಗಿ ಕರ್ನಾಟಕದ ಸ್ತಬ್ಧಚಿತ್ರಕ್ಕೆ ಕೇಂದ್ರ ಆಯ್ಕೆ ಸಮಿತಿ ಅವಕಾಶ ನಿರಾಕರಿಸಿದೆ ಎನ್ನಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅವಕಾಶ ದೊರೆತಿದ್ದು, ಈ ಬಾರಿಯ ಸ್ತಬ್ಧ ಚಿತ್ರ ಹೊಸ ಸಂದೇಶವನ್ನು ದೇಶಕ್ಕೆ ನೀಡಲಿದ್ದು, ಸಾಧಕರ ಸೇವೆಯನ್ನು ಸ್ಮರಿಸಲಿದೆ ಎಂದು ಟ್ವೀಟ್​ ಮಾಡುವ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನು ಓದಿ: ಗಣರಾಜ್ಯೋತ್ಸವ ಪರೇಡ್​ನಲ್ಲಿ ಎಲ್ಲಾ ಸ್ವದೇಶಿ ಸೇನಾ ಯುದ್ಧ ಉಪಕರಣಗಳ ಪ್ರದರ್ಶನ

ಇನ್ನೂ ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪಥ ಸಂಚಲನದಲ್ಲಿ ಕರ್ನಾಟಕ ರಾಜ್ಯದ ನಾರಿಶಕ್ತಿ ಹೆಸರಿನ ಸ್ತಬ್ಧಚಿತ್ರದ ತಾಲೀಮು ಭರದಿಂದ ಸಾಗಿತ್ತು. ರಾಜ್ಯದ ಮಾದರಿ ಮಹಿಳೆಯರಾದ ಸೂಲಗಿತ್ತಿ ನರಸಮ್ಮ, ತುಳಸೀ ಗೌಡ ಹಾಗೂ ಸಾಲು ಮರದ ತಿಮ್ಮಕ್ಕ ಅವರ ಪ್ರತಿಕೃತಿಗಳನ್ನು ಹೊಂದಿದ ಆಕರ್ಷಕ ಸ್ತಬ್ಧಚಿತ್ರವನ್ನು ಹೊತ್ತ ವಾಹನ ಸೋಮವಾರ ಕರ್ತವ್ಯಪಥ್​​ ಮಾರ್ಗದಲ್ಲಿ ಸಾಗುತ್ತಾ ಗಣರಾಜ್ಯೋತ್ಸವ ತಾಲೀಮಿನಲ್ಲಿ ಪಾಲ್ಗೊಂಡಿರುವ ಆಕರ್ಷಕ ಚಿತ್ರಗಳು ನಯನ ಮನೋಹರವಾಗಿದೆ.

8,000 ಗಿಡಗಳನ್ನು ನೆಟ್ಟಿರುವ ತುಮಕೂರಿನ ಗುಬ್ಬಿಯ ಹಸಿರು ಯೋಧೆ ಸಾಲುಮರದ ತಿಮ್ಮಕ್ಕ, 30,000 ಕ್ಕೂ ಹೆಚ್ಚು ಸಸಿಗಳನ್ನು ನೆಟ್ಟ ಉತ್ತರ ಕನ್ನಡದ ಅಂಕೋಲಾದ ತುಳಸಿಗೌಡ ಹಾಗೂ 70 ವರ್ಷಗಳಲ್ಲಿ ಉಚಿತವಾಗಿ 2,000 ಕ್ಕೂ ಹೆಚ್ಚು ಸಾಂಪ್ರದಾಯಿಕ ಹೆರಿಗೆ ಮಾಡಿಸಿರುವ ಸೂಲಗಿತ್ತಿ ಪಾವಗಡದ ನರಸಮ್ಮ ಅವರ ಪ್ರತಿಮೆಗಳನ್ನು ಟ್ಯಾಬ್ಲೋ ಹೊಂದಿದೆ. ಈ ಕುರಿತು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅಭಿನಂದನೆ ಸಲ್ಲಿಸಿದ್ದಾರೆ.

ರಹಮತ್ ಕಂಚಗಾರ್ ಟಿವಿ9 ಹುಬ್ಬಳ್ಳಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:53 am, Wed, 25 January 23

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?