AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು

ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ(Cottonpet Police Station)ವ್ಯಾಪ್ತಿಯಲ್ಲಿ ಮಗಳೇ ಪ್ರಿಯಕರನೊಟ್ಟಿಗೆ ಸೇರಿ ಬರೋಬ್ಬರಿ ಒಂದು ಕೋಟಿ ರೂಪಾಯಿ ಹಣವನ್ನು ಕಳ್ಳತನ ಮಾಡಿದ ಘಟನೆ ನಡೆದಿದೆ. ಈ ಕುರಿತು ತಂದೆಯೇ ಮಗಳ ವಿರುದ್ದ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಕ್ರಮಕ್ಕೆ ಮನವಿ ಸಲ್ಲಿಸಿದ್ದಾರೆ.

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು
ಪ್ರಾತಿನಿಧಿಕ ಚಿತ್ರ
Jagadisha B
| Edited By: |

Updated on:May 15, 2024 | 8:18 PM

Share

ಬೆಂಗಳೂರು, ಮೇ.15: ಪ್ರಿಯಕರನ ಜೊತೆಗೂಡಿ ಯುವತಿ ಒಂದು ಕೋಟಿ ರೂ. ಹಣ ಕದ್ದ ಆರೋಪ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ(Cottonpet Police Station)ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮನ ಜೊತೆಗೂಡಿ ಮನೆಯಲ್ಲಿದ್ದ ಹಣವನ್ನ ಕಳ್ಳತನ ಮಾಡಿ ಮದುವೆಯಾಗಿರುವ ಬಗ್ಗೆ ಯುವತಿ ತಂದೆ ಬಟ್ಟೆ ವ್ಯಾಪಾರ ಮಾಡುವ ಉದ್ಯಮಿ ಶರವಣನ್ ಅವರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಇನ್ನು ಕಳೆದ ಎಪ್ರಿಲ್​ 21 ನೇ ತಾರೀಖಿನಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮಗಳ ವಿರುದ್ದ ಕ್ರಮಕ್ಕೆ ತಂದೆ ಮನವಿ‌

ಇನ್ನು ಯುವತಿ ಕಣ್ಮರೆಯಾಗಿದ್ದ ಹಿನ್ನಲೆ ಪೋಷಕರು ಹುಡುಕಾಟ ನಡೆಸಿದ್ದಾರೆ. ಆ ಬಳಿಕ ಯುವತಿ ಪ್ರಿಯಕರನ ಜೊತೆಗೂಡಿ ಹೋಗಿದ್ದ ಮಾಹಿತಿ ತಿಳಿದು ಪೊಲೀಸರನ್ನು ಸಂಪರ್ಕ ಮಾಡಿದ್ದಾರೆ. ಆಗ ಯುವತಿ ಮದುವೆಯಾಗಿದ್ದು, ಪೋಷಕರ ಜೊತೆ ಬರೋದಿಲ್ಲವೆಂದು ಪೊಲೀಸರ ಮುಂದೆ ಹೇಳಿದ್ದಾಳೆ. ಇದಾದ ಒಂದು ವಾರದ ಬಳಿಕ ಮನೆಯಲ್ಲಿನ ಲಾಕರ್ ಪರಿಶೀಲಿಸಿದಾಗ ಒಂದು ಕೋಟಿ ನಗದು ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ನಿವೇಶನ ಖರೀದಿಗೆ ಈ ಹಣವನ್ನು ಸಂಗ್ರಹಿಸಿದ್ದ ಮಾಹಿತಿ ಇದ್ದು, ಸದ್ಯ ಕಳ್ಳತನ ಮಾಡಿದ ಆರೋಪದ ಮೇಲೆ ಮಗಳ ವಿರುದ್ದ ಕ್ರಮಕ್ಕೆ ತಂದೆ ಮನವಿ‌ ಸಲ್ಲಿಸಿದ್ದಾರೆ. ಈ ಕುರಿತು ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಿದ್ದಾರೆ.

ಇದನ್ನೂ ಓದಿ:ಉಡುಪಿ: ಮೊಬೈಲ್ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರಿಂದ ಧರ್ಮದೇಟು

ಶಾರ್ಟ್ ​ಸರ್ಕ್ಯೂಟ್​ನಿಂದಾಗಿ ಹೊತ್ತಿ ಉರಿದ ಮನೆ

ಕಲಬುರಗಿ: ತಾಲೂಕಿನ ಆಲಗೂಡ ಗ್ರಾಮದಲ್ಲಿ ಶಾರ್ಟ್ ​ಸರ್ಕ್ಯೂಟ್​ನಿಂದಾಗಿ ಮನೆಯೊಂದು ಹೊತ್ತಿ ಉರಿದ ಘಟನೆ ನಡೆದಿದೆ. ಈ ಹಿನ್ನಲೆ ಸೈಬಣ್ಣ ಎಂಬುವವರ ಮನೆ ಸಂಪೂರ್ಣ ಬೆಂಕಿಗಾಹುತಿಯಾಗಿದೆ. ಅಗ್ನಿ ಅವಘಡದಲ್ಲಿ ಮನೆಯಲ್ಲಿದ್ದ 20 ಸಾವಿರ ನಗದು, ಚಿನ್ನಾಭರಣ, ಗೃಹೋಪಯೋಗಿ ವಸ್ತುಗಳು ಸುಟ್ಟು ಭಸ್ಮವಾಗಿದೆ. ಈ ಕುರಿತು ಕಲಬುರಗಿ ಉಪನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಇದ್ದ ಮನೆಯನ್ನು ಕಳೆದುಕೊಂಡು ಸೈಬಣ್ಣ ಕುಟುಂಬ ಅತಂತ್ರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:12 pm, Wed, 15 May 24

‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ