ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ; ಪ್ರಲ್ಹಾದ ಜೋಶಿ ಶಾಕಿಂಗ್ ಹೇಳಿಕೆ

ಹುಬ್ಬಳ್ಳಿಯಲ್ಲಿ ನಡೆದ ನೇಹಾ ಕೊಲೆ ಪ್ರಕರಣ ಇದೀಗ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹಲವೆಡೆ ಬೃಹತ್ ಪ್ರತಿಭಟನೆಗಳು ಕೂಡ ನಡೆಯುತ್ತಿವೆ. ಇನ್ನು ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ​ ಶಾಕಿಂಗ್ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಪ್ರಕರಣ; ಪ್ರಲ್ಹಾದ ಜೋಶಿ ಶಾಕಿಂಗ್ ಹೇಳಿಕೆ
ಪ್ರಹ್ಲಾದ ಜೋಶಿ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: Apr 21, 2024 | 3:53 PM

ಹುಬ್ಬಳ್ಳಿ, ಏ.21: ನೇಹಾ ಕೊಲೆ ಪ್ರಕರಣ ಇದೀಗ ರಾಜ್ಯಾದ್ಯಂತ ದೊಡ್ಡ ಚರ್ಚೆಗೆ ಗ್ರಾಸವಾಗಿದೆ. ಜೊತೆಗೆ ಆರೋಪಿಗೆ ಕಠಿಣ ಶಿಕ್ಷೆ ಕೊಡಬೇಕೆಂದು ಎಲ್ಲೆಡೆ ಕೂಗು ಕೇಳಿಬರುತ್ತಿದ್ದು, ಇಂದು(ಏ.21) ಹುಬ್ಬಳ್ಳಿ(Hubli) ಯಲ್ಲಿ ಬಂದ್​ಗೆ ಕರೆ ನೀಡಲಾಗಿತ್ತು. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Pralhad Joshi), ‘ನೇಹಾಳನ್ನು ಆರೋಪಿ ಫಯಾಜ್ ಮತಾಂತರ ಮಾಡಲು ಯತ್ನಿಸಿದ್ದ. ಅದಕ್ಕೆ ನೇಹಾ ವಿರೋಧಿಸಿ, ಆತನಿಂದ ದೂರವಾದಳು. ಇದೇ ಕಾರಣಕ್ಕೆ ಫಯಾಜ್ ಆಕೆಯನ್ನು ಕೊಲೆ ಮಾಡಿದ್ದಾನೆ ಎಂದರು.

ಸರಕಾರದ ಅಸಡ್ಡೆಯೇ ಇದಕ್ಕೆ ಕಾರಣ

ಇನ್ನು ಮೃತ ನೇಹಾ ತಂದೆಗೆ ಬೆದರಿಕೆ ಕರೆಗಳು ಬರುತ್ತಿವೆ. ಇದಕ್ಕೆ ಸರಕಾರದ ಅಸಡ್ಡೆಯೇ ಕಾರಣ ಎಂದು ನಿರಂಜನ ಅವರೇ ನನ್ನ ಮುಂದೆ ಹೇಳಿದ್ದಾರೆ. ಇಂಥಹ ಅನೇಕ ವಿಚಾರಗಳನ್ನು ನನ್ನ ಬಳಿ ಹೇಳಿದ್ದಾರೆ. ಆದರೆ, ಇಲ್ಲಿ ಅವನ್ನೆಲ್ಲ ಹೇಳಲು ಆಗೋದಿಲ್ಲ. ಒಂದು ಹುಡುಗಿಯ ಜೀವ ಹೋಗಿದೆ. ಅವರ ಮನೆಯವರು ತೀವ್ರ ದುಃಖದಲ್ಲಿದ್ದಾರೆ ಎಂದು ಸರ್ಕಾರದ ವಿರುದ್ದ ಕಿಡಿಕಾರಿದರು.

ಇದನ್ನೂ ಓದಿ:ಮದುವೆಗಾಗಿ ಫಯಾಜ್ ನಮಗೆ ಪೀಡಿಸುತ್ತಿದ್ದ, ಮಗಳಿಗೆ ಜೀವ ಬೆದರಿಕೆ ಹಾಕಿದ್ದ: ನೇಹಾ ತಂದೆ​

ಫೋಟೋ ವೈರಲ್ ಆದ ವಿಚಾರ, ‘ ಫೋಟೋಗಳನ್ನು ಪೊಲೀಸರೇ ವೈರಲ್ ಮಾಡಿದ್ದು, ಸರಕಾರವೇ ಮುಂದೆ ನಿಂತು ವೈರಲ್ ಮಾಡಿದೆ. ಅವನ ಫೋನ್ ಪೊಲೀಸರ ಕೈಯಲ್ಲಿದೆ. ಸರಕಾರ ಇಂಥಹ ಚಿಲ್ಲರೆ ರಾಜಕಾರಣ ಮಾಡೋದಾ?, ಯಾರು ತಪ್ಪು ಮಾಡಿದ್ದಾರೋ ಒದ್ದು ಒಳಗೆ ಹಾಕಬೇಕು. ಇದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ನಿಷ್ಪಕ್ಷಪಾತವಾದ ತನಿಖೆ ಮಾಡಿಸಬೇಕು ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್