ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಕಾರಣ ಬಿಚ್ಚಿಟ್ಟ ಹತ್ಯೆಯಾದ ಅಂಜಲಿ ತಂಗಿ ಯಶೋಧಾ

ಇಂದು (ಮೇ 19) ಬೆಳಿಗ್ಗೆ ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋಧ, ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಇದೀಗ ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಬಳಿಕ ಮಾತನಾಡಿದ ಯಶೋಧಾ, ಆತ್ಮಹತ್ಯೆಗೆ ಯತ್ನಿಸಿದ ಕಾರಣ ತಿಳಿಸಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ್ಯಾಕೆ? ಕಾರಣ ಬಿಚ್ಚಿಟ್ಟ ಹತ್ಯೆಯಾದ ಅಂಜಲಿ ತಂಗಿ ಯಶೋಧಾ
ಅಂಜಲಿ ತಂಗಿ ಯಶೋಧಾ
Follow us
ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 19, 2024 | 6:30 PM

ಹುಬ್ಬಳ್ಳಿ, ಮೇ.19: ಮನೆಗೆ ನುಗ್ಗಿ ಅಂಜಲಿ ಅಂಬಿಗೇರ(Anjali Ambiger) ಬರ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಮೇ.19) ಆಕೆಯ ತಂಗಿ ಯಶೋಧಾ(Yashoda) ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ್ದರು. ಇದೀಗ ಆತ್ಮಹತ್ಯೆಗೆ ನಿಖರ ಕಾರಣ ಬಿಚ್ಚಿಟ್ಟಿದ್ದಾರೆ. ‘ನನ್ನ ಅಕ್ಕ ಅಂಜಲಿ ಹತ್ಯೆ ಕಣ್ಣಾರೆ ಕಂಡು ಮನಸ್ಸಿಗೆ ನೋವಾಗಿತ್ತು. ಹೀಗಾಗಿ ನಾನು ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಮಾಡಿದ್ದೆ ಎಂದು ಹುಬ್ಬಳ್ಳಿ ಕಿಮ್ಸ್‌ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಬಳಿಕ ಯಶೋಧಾ ಹೇಳಿದ್ದಾರೆ.

ಪೊಲೀಸರಿಗಿಂತ ನನಗೆ ನಿರಂಜನ್‌ ಮತ್ತು ಅನೂಪ್ ಅಂಕಲ್ ಮೇಲೆ ನಂಬಿಕೆ ಇದೆ. ನ್ಯಾಯಾಲಯದ ಆರ್ಡರ್ ಎಂದು ಆರೋಪಿಗೆ ಚಿಕಿತ್ಸೆ ಕೊಡುತ್ತಿದ್ದಾರಂತೆ. ಜೊತೆಗೆ ಆರೋಪಿ ವಿಶ್ವ ನಮ್ಮ ಅಕ್ಕನ ಬಗ್ಗೆ ಕೆಟ್ಟದಾಗಿ ಮಾತನಾಡುತ್ತಿದ್ದಾನಂತೆ. ಹೀಗಾಗಿ ಮನಸ್ಸಿಗೆ ನೋವಾಗಿದೆ, ಬರೀ ಸುಳ್ಳು ಹೇಳುತ್ತಿದ್ದಾನೆ. ಆತನಿಗೆ ಗಲ್ಲು ಶಿಕ್ಷೆ ಕೊಡಿ, ಇಲ್ಲವೇ ಎನ್‌ಕೌಂಟರ್ ಮಾಡಿ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ:ಹುಬ್ಬಳ್ಳಿ: ಅಂಜಲಿ ಅಂಬಿಗೇರ ಸಹೋದರಿ ಆತ್ಮಹತ್ಯೆಗೆ ಯತ್ನ

ಇನ್ನು ಘಟನೆ ಕುರಿತು ಯಶೋಧಾ ಅಜ್ಜಿ ಗಂಗಮ್ಮ ಪ್ರತಿಕ್ರಿಯಿಸಿ, ‘ಅವಳು ಮಾನಸಿಕವಾಗಿ ಕುಗ್ಗಿ ಹೋಗಿದ್ದಾಳೆ. ನಮ್ಮ ಜೊತೆ ಇಡೀ ಸಮಾಜ ನಿಂತಿದೆ. ಇನ್ನು ಪೊಲೀಸರು ಆರೋಪಿಗೆ ಚಿಕಿತ್ಸೆ ಕೊಡಿಸಿ ಆತನನ್ನು ಗುಣಮುಖನನ್ನಾಗಿ ಮಾಡಲು ಯತ್ನಿಸ್ತಿದ್ದಾರೆ. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಹೀಗೆ ಮಾಡಿದ್ದಾಳೆ. ನಿನ್ನೆ ಬೆಳಗ್ಗೆಯಿಂದ ಆಕೆ ಮಾನಸಿಕವಾಗಿ ಕುಗ್ಗಿದ್ದಳು. ರಾತ್ರಿ ಮನೆಯಲ್ಲಿದ್ದ ಫಿನಾಯಿಲ್ ಕುಡಿದಿದ್ದಾಳೆ. ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದೆವು. ಇದೀಗ ಯಶೋಧಾ ಗುಣಮುಖಳಾಗುತ್ತಿದ್ದಾಳೆ ಎಂದರು.

ಘಟನೆ  ವಿವರ

ಇಂದು (ಮೇ 19) ಬೆಳಿಗ್ಗೆ ಕೊಲೆಯಾದ ಅಂಜಲಿ ಅಂಬಿಗೇರ ಸಹೋದರಿ ಯಶೋಧ, ಅಕ್ಕನ ಸಾವಿನಿಂದ ಮನನೊಂದು ಪಿನಾಯಲ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೆ ಅವರನ್ನು ಕಿಮ್ಸ್​ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.  ಬಳಿಕ ಯಶೋಧ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್