AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ

ಧಾರವಾಡದ ಅಮ್ಮಿನಬಾವಿ ಬಳಿ ಚಲಿಸುತ್ತಿದ್ದ ಸರ್ಕಾರಿ ಬಸ್‌ನ ಟೈರ್ ಸ್ಫೋಟಗೊಂಡು ಪಲ್ಟಿಯಾದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟು, ಎಂಟು ಜನ ಗಾಯಗೊಂಡಿದ್ದಾರೆ. ಇತ್ತ ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿದ ಕಾರು ಹರಿದು ಯುವಕನೊಬ್ಬ ಅಸುನೀಗಿದ್ದಾನೆ. ಮತ್ತೋರ್ವ ಮಹಿಳೆಯ ಕಾಲು ಮುರಿದಿದ್ದು, ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿ: ಮಹಿಳೆ ಸಾವು, 8 ಮಂದಿ ಪ್ರಯಾಣಿಕರಿಗೆ ಗಾಯ
ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿImage Credit source: Tv9 Kannada
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on:Jul 22, 2026 | 4:21 PM

Share

ಮುಖ್ಯಾಂಶಗಳು

  • ಮುಂಭಾಗದ ಟೈರ್ ಸ್ಫೋಟವಾಗಿ ಸರ್ಕಾರಿ ಬಸ್ ಪಲ್ಟಿ
  • ಧಾರವಾಡದ ಅಮ್ಮಿನಬಾವಿ ಗ್ರಾಮದ ಬಳಿ ಅಪಘಾತ
  • ಮಹಿಳೆ ಸಾವು, ಎಂಟು ಜನ ಪ್ರಯಾಣಿಕರಿಗೆ ಗಾಯ

ಧಾರವಾಡ/ಚಿತ್ರದುರ್ಗ, ಜುಲೈ 22: ಚಲಿಸುತ್ತಿರುವಾಗಲೇ ಮುಂದಿನ ಟೈರ್ ಸ್ಫೋಟಗೊಂಡು ಸರ್ಕಾರಿ ಬಸ್ ಪಲ್ಟಿಯಾದ ಪರಿಣಾಮ ಗಂಭೀರ ಗಾಯಗೊಂಡು ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಬೆಳಗಾವಿ ಜಿಲ್ಲೆಯ ಮುನವಳ್ಳಿಯ ಹುಸೇನಾಬಿ ಕೆಂಗನೂರ ಎಂದು ಗುರುತಿಸಲಾಗಿದ್ದು, ಅಪಘಾತದಲ್ಲಿ 8 ಮಂದಿ ಪ್ರಯಾಣಿಕರಿಗೆ ಗಾಯಗೊಂಡಿದ್ದಾರೆ. ಗಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬಸ್​​ನ ಗ್ಲಾಸ್​​ಗಳು ಪೀಸ್​​ ಪೀಸ್​​

ಟೈರ್ ಸ್ಫೋಟಗೊಂಡ ಪರಿಣಾಮ ಧಾರವಾಡದಿಂದ ಮಿರಜ್​ಗೆ ತೆರಳುತ್ತಿದ್ದ ಸರ್ಕಾರಿ ಬಸ್​​ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿ ಪಲ್ಟಿಯಾಗಿದೆ. ಘಟನೆಯಲ್ಲಿ ಮಹಿಳೆಯರು, ವೃದ್ಧರು ಸೇರಿ ಸುಮಾರು 8 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು, ಅಪಘಾತ ನಡೆದ ಕೂಡಲೇ ಇತರ ವಾಹನಗಳ ಸವಾರರು ಮತ್ತು ಸ್ಥಳೀಯರು ಬಸ್​​ನಲ್ಲಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ. ಅಪಘಾತದ ತೀವ್ರತೆಗೆ ಬಸ್​​ನ ಗ್ಲಾಸ್​​ಗಳು ಪೀಸ್​​ ಪೀಸ್​​ ಆಗಿದ್ದು, ಮುಂಭಾಗ ಜಖಂಗೊಂಡಿದೆ. ಸ್ಥಳಕ್ಕೆ ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ 1600ಕ್ಕೂ ಅಧಿಕ ಬಾಲ ಗರ್ಭಿಣಿಯರ ಕೇಸ್ ಪತ್ತೆ!

ರಸ್ತೆ ಬದಿ ನಿಂತಿದ್ದವರ ಮೇಲೆ ಹರಿದ ಕಾರು

ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾಮದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ರಸ್ತೆ ಬದಿ ನಿಂತಿದ್ದವರ ಮೇಲೆ ಕಾರು ಹರಿದ ಪರಿಣಾಮ ಓರ್ವರು ಅಸುನೀಗಿದ್ದಾರೆ. ಹೊಳಲ್ಕೆರೆ ತಾಲೂಕಿನ ದಗ್ಗೆ ಗ್ರಾಮದ ಪ್ರದೀಪ್(30) ಮೃತ ದುರ್ದೈವಿಯಾಗಿದ್ದು, ಮತ್ತೋರ್ವ ಮಹಿಳೆಯ ಕಾಲು ಮುರಿದಿದೆ. ಗಂಭೀರವಾಗಿ ಗಾಯಗೊಂಡಿರುವ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಫುಟ್​ಪಾತ್​ಗೆ ಕಾರು ನುಗ್ಗಿದ್ದು, ಘಟನೆ ಸಂಬಂಧ ಚಿತ್ರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:14 pm, Wed, 22 July 26

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
ನಾಳೆ ಮೀಸಲಾತಿ ಪಟ್ಟಿ ಪ್ರಕಟ:ಜಿಲ್ಲಾ-ತಾಲೂಕು ಪಂಚಾಯಿತಿ ಎಲೆಕ್ಷನ್ ಯಾವಾಗ?
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
‘ರಾಕ್ಷಸ ಮಂಜ’ನಿಗಾಗಿ ಹಾಡು ಹಾಡಿದ ಕಿರಣ್ ಶಾಸ್ತ್ರಿ: ವಿಡಿಯೋ ನೋಡಿ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಜಂತರ್ ಮಂತರ್ ಪ್ರತಿಭಟನೆ ವೇಳೆ ಮತ್ತೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಕೆಪಿಎಸ್​ಸಿ ಹಗರಣ:ಶಿವಶಂಕರಪ್ಪ ಸಾಹುಕಾರ್, ಗೀತಾ ಇಡಿ ಕಸ್ಟಡಿಗೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಹೆಸರಿಗಷ್ಟೇ ಸರ್ಕಾರಿ ಆಸ್ಪತ್ರೆ, ಒಳಗಡೆ ಬರೀ ಅವ್ಯವಸ್ಥೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಸೌಜನ್ಯ ಕೇಸ್ ತನಿಖಾಧಿಕಾರಿ ಖಡಕ್ ಆಫೀಸರ್ ಲೋಕೇಶ್ ಜಗಲ್ಸಾರ್ ಹಿನ್ನೆಲೆ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಎಸ್‌ಐಆರ್ ವಿವಾದ; ಎಫ್‌ಐಆರ್‌ಗಳು ನನಗೆ ಪದಕಗಳಿದ್ದಂತೆ ಎಂದ ರಾಹುಲ್ ಗಾಂಧಿ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ
ಮುಸ್ಲಿಂ ಮತದಾರರ ಹೆಸರು ಡಿಲೀಟ್ ಆರೋಪ