AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ: ಬಂಗಾರದ ಕಿವಿಯೋಲೆ, ಸರದ ಆಸೆಗೆ ದೊಡ್ಡಮ್ಮನನ್ನೇ ಕೊಂದು ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಅಕ್ಟೋಬರ್ 24ರಂದು ದೊಡ್ಡಮ್ಮ ಕಮಲಮ್ಮ ಮಲಗಿದಾಗ ಕೊಲೆ ಮಾಡಿ ಕಿವಿಯೋಲೆ, ಬಂಗಾರದ ಸರ ಕದ್ದು ಮಹಾಂತೇಶ್ ಪರಾರಿಯಾಗಿದ್ದ.

ಹುಬ್ಬಳ್ಳಿ: ಬಂಗಾರದ ಕಿವಿಯೋಲೆ, ಸರದ ಆಸೆಗೆ ದೊಡ್ಡಮ್ಮನನ್ನೇ ಕೊಂದು ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಸಾಂದರ್ಭಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on:Dec 29, 2022 | 9:52 AM

Share

ಹುಬ್ಬಳ್ಳಿ: ಹಳೇ ಹುಬ್ಬಳ್ಳಿಯ ರಣದಮ್ಮ ಕಾಲೋನಿಯಲ್ಲಿ ದೊಡ್ಡಮ್ಮನನ್ನೇ ಕೊಂದಿದ್ದ(Murder) ಆರೋಪಿ ಮಹಾಂತೇಶನನ್ನು ಕಸಬಾಪೇಟೆ ಠಾಣೆ ಪೊಲೀಸರು(Kasabapete Police Station) ಬಂಧಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಚಿನ್ನದ ಆಸೆಗೆ ಕಮಲಮ್ಮ(72)ನನ್ನು ಕೊಂದು ಕಿವಿಯೋಲೆ ಕದ್ದು ಪರಾರಿಯಾಗಿದ್ದ ಆರೋಪಿ ಮಹಾಂತೇಶ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ಮಹಾಂತೇಶನನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳಿಸಲಾಗಿದೆ.

ಬಂಗಾರದ ಆಸೆಗೆ ದೊಡ್ಡಮ್ಮನನ್ನೇ ಕೊಂದ ಮಗ

ಅಕ್ಟೋಬರ್ 24ರಂದು ದೊಡ್ಡಮ್ಮ ಕಮಲಮ್ಮ ಮಲಗಿದಾಗ ಕೊಲೆ ಮಾಡಿ ಕಿವಿಯೋಲೆ, ಬಂಗಾರದ ಸರ ಕದ್ದು ಮಹಾಂತೇಶ್ ಪರಾರಿಯಾಗಿದ್ದ. ದೊಡ್ಡಮ್ಮನ ಮನೆಯಲ್ಲಿ ಎರಡು ದಿನ ವಾಸವಿದ್ದು, ಬಂಗಾರಕ್ಕಾಗಿ ಕೊಲೆ ಮಾಡಿದ್ದ. ಕಮಲಮ್ಮನ ಮಗ ಪ್ರಭಯ್ಯ ತಾಯಿ ಕೊಲೆಯಾದ ಬಗ್ಗೆ ಕಸಬಾಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸದ್ಯ ಎರಡು ತಿಂಗಳ ಬಳಿಕ ಹುಬ್ಬಳ್ಳಿಯ ಕಸಬಾಪೇಟೆ ಪೊಲೀಸರು ಬೆಳಗಾವಿಯಲ್ಲಿ ಪಾಪಿ ಮಹಾಂತೇಶ್​ನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಅಲರ್ಜಿ ಎಂದು ಆಸ್ಪತ್ರೆ ಸೇರಿದ ನಾಲ್ಕು ತಿಂಗಳ ಮಗು ಸಾವು; ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ

ಆಸ್ತಿಗಾಗಿ ಕುಟುಂಬಗಳ ನಡುವೆ ಜಗಳ, ಗುಂಡು ಹಾರಿಸಿದ ಆರೋಪ

ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬಿಳಿಗೇರಿ ಗ್ರಾಮದಲ್ಲಿ ಆಸ್ತಿ ವಿಷಯದಲ್ಲಿ ಎರಡು ಕುಟುಂಬಗಳ ನಡುವೆ ಹೊಡೆದಾಟವಾಗಿದ್ದು ಯುವಕನ ಮೇಲೆ ಗುಂಡು ಹಾರಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಹೊಡೆದಾಟದಲ್ಲಿ ನಿಶ್ಚಲ್(30) ಎಂಬ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು ತಲೆ, ಕೈಗೆ ಗಂಭೀರ ಪೆಟ್ಟು ಬಿದ್ದಿದೆ. ಇದಕ್ಕೂ ಮೊದಲು ತೀರ್ಥ (28) ಎಂಬಾತನ ಮೇಲೆ ನಿಶ್ಚಲ್ ಶೂಟ್ ಮಾಡಿದ ಆರೋಪ ಕೇಳಿ ಬಂದಿದೆ.

ಗುಂಡು ತಾಗದೆ ತೀರ್ಥ ಪಾರಾಗಿದ್ದು ತೀರ್ಥ ಚಲಾಯಿಸುತ್ತಿದ್ದ ಜೀಪಿಗೆ ಗುಂಡು ತಗುಲಿದೆ. ಸ್ಥಳಕ್ಕೆ ಮಡಿಕೇರಿ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಇಬ್ಬರು ಯುವಕರಿಗೆ ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:52 am, Thu, 29 December 22

Follow Us
TV9 Web
TV9 Web

TV9 Kannada

Read More
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್
ಆಟೋದಲ್ಲಿ ಸೋಮನಾಥಪುರ ದೇವಾಲಯಕ್ಕೆ ಬಂದ ರಜನಿಕಾಂತ್