ಕೋವಿಡ್ ಎದುರಿಸಲು ಸಿದ್ಧವಾದ ಹುಬ್ಬಳ್ಳಿಯ ಕಿಮ್ಸ್: ರೋಗಿಗಳಿಗಾಗಿ 100 ಬೆಡ್ ಮೀಸಲು

ಕರುನಾಡಿನಲ್ಲಿ ಕೊರೊನಾ ವೈರಸ್ ಆತಂಕ ಮತ್ತಷ್ಟು ಹೆಚ್ಚಾಗುತ್ತಿದೆ. ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರು ಮನವಿ ಮಾಡಿದ್ದಾರೆ. 

ಕೋವಿಡ್ ಎದುರಿಸಲು ಸಿದ್ಧವಾದ ಹುಬ್ಬಳ್ಳಿಯ ಕಿಮ್ಸ್: ರೋಗಿಗಳಿಗಾಗಿ 100 ಬೆಡ್ ಮೀಸಲು
ಹುಬ್ಬಳ್ಳಿ ಕಿಮ್ಸ್ ‌
Edited By:

Updated on: Dec 20, 2023 | 7:31 PM

ಹುಬ್ಬಳ್ಳಿ, ಡಿಸೆಂಬರ್​​ 20: ಕರ್ನಾಟಕದಲ್ಲಿ ಕೊರೊನಾ ಆತಂಕ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಜಿಲ್ಲೆಯಿಂದ ಜಿಲ್ಲೆಗೆ ವ್ಯಾಪಿಸುತ್ತಿದೆ. ಕೊರೊನಾ ವೈರಸ್​​ನ ಜೆಎನ್​​1 ರೂಪಾಂತರಿ (Coronavirus JN1) ತಳಿ ಭೀತಿ ಮಾತ್ರ ಹೆಚ್ಚಾಗಿದೆ. ರಾಜ್ಯದಲ್ಲಿ ಕೋವಿಡ್ ಮತ್ತೆ ಮೆಲ್ಲಗೆ ಶುರುವಾಗಿದ್ದು, ವಿವಿಧ ಜಿಲ್ಲೆಗಳಲ್ಲಿ ಪಾಸಿಟಿವ್​ ಕೇಸ್​ಗಳು ಪತ್ತೆಯಾಗುತ್ತಿವೆ. ಈಗಾಗಲೇ ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ. ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಪಾಲಿಸುವಂತೆ ಹುಬ್ಬಳ್ಳಿ ಕಿಮ್ಸ್ ನಿರ್ದೇಶಕರು ಮನವಿ ಮಾಡಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್​​ನಲ್ಲಿ ಮುಂಜಾಗ್ರತಾ ಕ್ರಮಕೈಗೊಂಡಿದ್ದು, ಕೋವಿಡ್ ಎದುರಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ. ಕೋವಿಡ್ ರೋಗಿಗಳಿಗಾಗಿ 100 ಬೆಡ್ ಮೀಸಲಿಡಲಾಗಿದ್ದು, 60 ಆಕ್ಸಿಜನ್, 40 ಬೆಡ್ ಆಕ್ಸಿಜನ್ ಜೊತೆಗೆ ICU ವ್ಯವಸ್ಥೆ ಮಾಡಲಾಗಿದೆ.

ಇದನ್ನೂ ಓದಿ: ರಾಮನಗರ ಜಿಲ್ಲೆಯಲ್ಲಿ 2ನೇ ಕೋವಿಡ್ ​ಪ್ರಕರಣ ಪತ್ತೆ: ಕಾರವಾರ, ಚಿಕ್ಕಮಗಳೂರಿನಲ್ಲೂ ಕೊರೊನಾ

ಈಗಾಗಲೇ ವೈದ್ಯರೊಂದಿಗೆ ಮೀಟಿಂಗ್ ಮಾಡಿರುವ ನಿರ್ದೇಶಕರು ಕೋ ಆರ್ಡಿನೇಟರ್ ನೇಮಕ ಮಾಡಿದೆ. ಕೋವಿಡ್ ಎದುರಿಸಲು ಎಲ್ಲ ರೀತಿಯಲ್ಲಿ ಸಿದ್ದತೆ ಮಾಡಿಕೊಂಡಿದ್ದೇವೆ. ರೋಗಿಗಳಿಗಾಗಿ 100 ಬೆಡ್ ಮೀಸಲಿಡಾಗಿದೆ. ಕಿಮ್ಸ್​ನಲ್ಲಿ ಆಕ್ಸಿಜನ್ ಸಮಸ್ಯೆ ಇಲ್ಲ. 40 KL ಫ್ಲಾಂಟ್ ನಮ್ಮಲ್ಲಿ ಇದೆ ಎಂದು ಕಿಮ್ಸ್ ನಿರ್ದೇಶಕ ಕಮ್ಮಾರ್ ಹೇಳಿದ್ದಾರೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಒಂದೇ ದಿನ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಟೆಸ್ಟ್ ಮಾಡಿಸಿದ್ದ 45 ಜನರ ಪೈಕಿ ನಾಲ್ವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ನಿನ್ನೆ ಜಿಲ್ಲಾ ಆಸ್ಪತ್ರೆಯಲ್ಲಿ 45 ಜನರು ಕೊರೊನಾ ಟೆಸ್ಟ್ ಮಾಡಿಸಿದ್ದರು.

ಇದನ್ನೂ ಓದಿ: ದೇಶದಲ್ಲಿ JN1 ಹೊಸ ವೈರಸ್ ಆತಂಕದ ನಡುವೆ ಕೋವಿಡ್​ಗೆ ಬೆಂಗಳೂರಿನಲ್ಲಿ ಮೊದಲ ಬಲಿ

ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ನಾಲ್ವರಿಗೆ ಸೋಂಕು ದೃಢಪಟ್ಟಿದೆ. ಟಿವಿ9ಗೆ ಚಿಕ್ಕಮಗಳೂರು ಡಿಹೆಚ್‌ಒ ಅಶ್ವತ್ಥ್‌ ಬಾಬಾ ಪ್ರತಿಕ್ರಿಯಿಸಿದ್ದು, ಸೋಂಕಿತ ನಾಲ್ವರನ್ನೂ ಹೋಂ ಐಸೋಲೇಷನ್ ಮಾಡಲಾಗಿದೆ. ಸೋಂಕಿತ ನಾಲ್ವರ ಪೈಕಿ ಓರ್ವರಿಗೆ ಮಾತ್ರ ಟ್ರಾವೆಲ್ ಹಿಸ್ಟರಿ ಇದೆ. ಓರ್ವ ಸೋಂಕಿತ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಗೆ ಹೋಗಿ ಬಂದಿದ್ದರು ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Shivakumar Pattar

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Follow Us