2022ರ ಜನವರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕೆಎಸ್​ಸಿಎ ನಿರ್ಧಾರ!

ಟೆಂಡರ್ ಪ್ರಕ್ರಿಯೆ ಕುರಿತು ತನಿಖೆಗೆ ಆದೇಶಿಸಿರುವ ಸರಕಾರದ ನಿಲುವನ್ನು ಸ್ವಾಗತಿಸಿರುವ ಕೆಎಸ್​ಸಿಎ, ಭ್ರಷ್ಟಾಚಾರ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ಈ ಹಿನ್ನೆಲೆ ಧಾರವಾಡದಲ್ಲಿ ಸಂಘದ ವತಿಯಿಂದ ಪ್ರತಿಭಟನೆಕೂಡ ನಡೆಸಲಾಯಿತು.

2022ರ ಜನವರಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕೆಎಸ್​ಸಿಎ ನಿರ್ಧಾರ!
ಸಾಂದರ್ಭಿಕ ಚಿತ್ರ
Follow us
| Updated By: Digi Tech Desk

Updated on:Dec 30, 2021 | 6:13 PM

ಧಾರವಾಡ: ರಾಜ್ಯದ ಪ್ರಮುಖ ಕಾಮಗಾರಿಗಳನ್ನು ನಡೆಸುವ ವಿವಿಧ ಇಲಾಖೆಗಳಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ಸ್ಟೇಟ್ ಕಂಟ್ರಾಕ್ಟರ್ಸ್ ಅಸೋಸಿಯೇಷನ್ (ಕೆಎಸ್​ಸಿಎ) ಸರಕಾರವನ್ನು ಒತ್ತಾಯಿಸಿದೆ. ಜೊತೆಗೆ ಭ್ರಷ್ಟಾಚಾರವನ್ನು ನಿಯಂತ್ರಿಸುವಂತೆ ಆಗ್ರಹಿಸಿ ಸರಕಾರದ ಮೇಲೆ ಒತ್ತಡ ಹೇರಲು 2022ರ ಜನವರಿ ತಿಂಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 1 ಲಕ್ಷ ಗುತ್ತಿಗೆದಾರರು ಬೃಹತ್ ಪ್ರತಿಭಟನೆ ನಡೆಸಲು ಕೆಎಸ್​ಸಿಎ ನಿರ್ಧರಿಸಿದೆ. ಕಳೆದ ಹಲವು ವರ್ಷಗಳಿಂದ ಭ್ರಷ್ಟಾಚಾರವನ್ನು ಕೊನೆಗಾಣಿಸುವಂತೆ ಎಲ್ಲ ಸರಕಾರಗಳಿಗೂ ಮನವಿ ಮಾಡಿಕೊಳ್ಳುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಹೋರಾಟದ ಹಾದಿ ಅನಿವಾರ್ಯ ಎಂದು ಅಸೋಸಿಯೇಷನ್ ತಿಳಿಸಿದೆ.

ಟೆಂಡರ್ ಪ್ರಕ್ರಿಯೆ ಕುರಿತು ತನಿಖೆಗೆ ಆದೇಶಿಸಿರುವ ಸರಕಾರದ ನಿಲುವನ್ನು ಸ್ವಾಗತಿಸಿರುವ ಕೆಎಸ್​ಸಿಎ, ಭ್ರಷ್ಟಾಚಾರ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ. ಈ ಹಿನ್ನೆಲೆ ಧಾರವಾಡದಲ್ಲಿ ಸಂಘದ ವತಿಯಿಂದ ಪ್ರತಿಭಟನೆಕೂಡ ನಡೆಸಲಾಯಿತು. ನಗರದ ಕಡಪಾ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿವರೆಗೆ ಆಗಮಿಸಿದ ಬಳಿಕ ಕೈಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಗುತ್ತಿಗೆದಾರರು ಪ್ರತಿಭಟನೆ ನಡೆಸಿದರು. ಎರಡು ವರ್ಷದ ಗುತ್ತಿಗೆ ಬಾಕಿ ನೀಡಬೇಕು. ಅತಿಯಾದ ಭ್ರಷ್ಟಾಚಾರ ನಿಲ್ಲಬೇಕು. ಟೆಂಡರ್ ಪ್ರಕ್ರಿಯೆಯಲ್ಲಿ ರಾಜಕಾರಣಿಗಳ ಹಸ್ತಕ್ಷೇಪ ನಿಲ್ಲಬೇಕು ಅಂತಾ ಗುತ್ತಿಗೆದಾರರು ಬೇಡಿಕೆ ಇಟ್ಟರು.

ಶೇ. 30-40ಕ್ಕಿಂತಲೂ ಹೆಚ್ಚು ಮೊತ್ತವನ್ನು ಭ್ರಷ್ಟಾಚಾರದ ವೆಚ್ಚಕ್ಕೆ ಸರಿದೂಗಿಸಬೇಕಂತೆ ಸರಕಾರಗಳು ಬದಲಾದಂತೆ ಭ್ರಷ್ಟಾಚಾರ ಕಡಿಮೆಯಾಗಬೇಕು. ಆದರೆ ಬೆಲೆಗಳು ಏರಿದಂತೆ ಭ್ರಷ್ಟಾಚಾರವೂ ಹೆಚ್ಚುತ್ತಿದೆ. ಇದರಿಂದ ಕಾಮಗಾರಿಗಳ ಗುಣಮಟ್ಟ ಕುಸಿಯುತ್ತಿದೆ ಮತ್ತು ಗುತ್ತಿಗೆದಾರರು ಸಂಕಷ್ಟಕ್ಕೀಡಾಗಲು ಕಾರಣವಾಗಿದೆ ಅಂತಾ ಸಂಘದ ಮುಖಂಡರು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರಮುಖ ಕಾಮಗಾರಿಗಳನ್ನು ನಿರ್ವಹಿಸುವ ಲೋಕೋಪಯೋಗಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್, ಸಣ್ಣ ನೀರಾವರಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಕಾಮಗಾರಿಗಳಿಗೆ ಮಂಜೂರಾಗುವ ಒಟ್ಟು ಅನುದಾನದಲ್ಲಿ ಶೇ. 30-40ಕ್ಕಿಂತಲೂ ಹೆಚ್ಚು ಮೊತ್ತವನ್ನು ಭ್ರಷ್ಟಾಚಾರ ಮತ್ತಿತರ ವೆಚ್ಚಗಳಿಗೆ ಸರಿದೂಗಿಸಬೇಕಾಗಿದೆ. ಟೆಂಡರ್ ಅನುಮೋದನೆಗೂ ಮುನ್ನ ಆರಂಭವಾಗುವ ಭ್ರಷ್ಟಾಚಾರ ಪ್ರಕ್ರಿಯೆ, ಬಿಲ್ ಪಾವತಿ ಆಗುವವರೆಗೆ ಮುಂದುವರಿಯುತ್ತಲೇ ಇರುತ್ತದೆ. ಆದ್ದರಿಂದ ಇತ್ತೀಚೆಗೆ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರಕಾರವನ್ನು ಎಚ್ಚರಿಸಲು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸುವ ತೀರ್ಮಾನವನ್ನು ತೆಗೆದುಕೊಂಡಿದೆ.

ಈ ಹೋರಾಟಕ್ಕೆ ಪೂರ್ವಭಾವಿಯಾಗಿ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆಗಳು ಆರಂಭವಾಗಿವೆ. ಈ ಹಿನ್ನೆಲೆ ಧಾರವಾಡದಲ್ಲಿ ಕೂಡಾ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಹೋರಾಟಕ್ಕೆ ಗುತ್ತಿಗೆದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಿದ್ದು, ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಶಕಗಳಿಂದ ಭ್ರಷ್ಟಾಚಾರ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲೇ ಇದೆ. ದಶಕಗಳ ಹಿಂದೆ ಇದ್ದ ಭ್ರಷ್ಟಾಚಾರ ಇಂದು ಮಿತಿ ಮೀರಿದೆ. ಸರಕಾರಗಳು ಕೇವಲ ಭರವಸೆಗಳನ್ನು ಮಾತ್ರ ನೀಡುತ್ತಿವೆ. ಯಾವ ಸರ್ಕಾರವೂ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಾಮಾಣಿಕ ಪ್ರಯತ್ನ ಮಾಡಲೇ ಇಲ್ಲ. ಒಂದು ವೇಳೆ ಸರಕಾರ ಮಾತುಕತೆಗೆ ಆಹ್ವಾನಿಸಿ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಪ್ರಕ್ರಿಯೆ ಆರಂಭಿಸಿದರೆ ಇಡೀ ರಾಜ್ಯದ ಗುತ್ತಿಗೆದಾರರು ಮತ್ತು ಕಾರ್ಮಿಕರು ಸರಕಾರಕ್ಕೆ ಬೆಂಬಲವಾಗಿ ನಿಲ್ಲಲಿದ್ದಾರೆ ಅಂತಾ ಸಂಘದ ಮುಖಂಡರು ಹೇಳಿದ್ದಾರೆ.

ಪ್ರಧಾನಿ ಮೋದಿಗೆ ಪತ್ರ ಸರಕಾರ ಯಾವುದೇ ಕ್ರಮ ಕೈಗೊಳ್ಳಲು ಮುಂದಾಗದೆ ಇದ್ದಾಗ ಅನಿವಾರ್ಯವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಜುಲೈ ತಿಂಗಳಲ್ಲಿ ಪತ್ರ ಬರೆಯಲಾಗಿದೆ. ಬೆರಳೆಣಿಕೆಯಷ್ಟು ಉದಾಹರಣೆಗಳನ್ನು ಹೊರತುಪಡಿಸಿ ಜನಪ್ರತಿನಿಧಿಗಳು ಮತ್ತು ಅಧಿಕಾರಶಾಹಿ ವರ್ಗ ಹೇಗೆ ಭ್ರಷ್ಟಾಚಾರದ ಆಗರವಾಗಿದೆ ಎಂದು ಪ್ರಧಾನಿಗಳಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನವನ್ನು ಸಂಘದಿಂದ ಮಾಡಲಾಯಿತು. ಇನ್ನು ಎರಡು ವಾರಗಳ ಹಿಂದೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲಟ್ ಅವರನ್ನು ಭೇಟಿ ಮಾಡಿ ಭ್ರಷ್ಟಾಚಾರ ಕುರಿತು ವಿವರಣೆ ನೀಡಲಾಯಿತು. ಅವರು ಸರಕಾರದೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ಇನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಭ್ರಷ್ಟಾಚಾರ ಕುರಿತು ಪತ್ರ ಬರೆಯಲಾಯಿತು. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್.ಡಿ. ಕುಮಾರಸ್ವಾಮಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಗಿದೆ. ಅಷ್ಟೇ ಅಲ್ಲ, 224 ಶಾಸಕರಿಗೂ ಪತ್ರ ಬರೆದು ಭ್ರಷ್ಟಾಚಾರ ನಿಯಂತ್ರಣಕ್ಕೆ ಸಹಕರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಭ್ರಷ್ಟಾಚಾರ, ಲಂಚ, ಕಮೀಷನ್ಗೆ ದಾಖಲೆಗಳು ಇರುವುದಿಲ್ಲ ಎನ್ನುವುದು ತಿಳಿದಿದ್ದರೂ ಪ್ರತೀ ಸರಕಾರ, ಸಚಿವರು, ಎಲ್ಲ ಪಕ್ಷಗಳ ಶಾಸಕರು ದಾಖಲೆಗಳನ್ನು ಕೇಳುತ್ತಾರೆ. ಇದು ಪಲಾಯನವಾದಿ ತಂತ್ರ ಅನ್ನೋದು ಗುತ್ತಿಗೆದಾರರ ಆಕ್ರೋಶ.

ಉನ್ನತ ಮಟ್ಟದ ತನಿಖೆ ನಡೆಸಲು ಆಗ್ರಹ ಸರಕಾರದ ವಿವಿಧ ಇಲಾಖೆಗಳಲ್ಲಿ 10 ಕೋಟಿ ರೂ. ಗಳಿಗಿಂತ ಹೆಚ್ಚು ಅನುದಾನದ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಮತ್ತು ಬಿಲ್ ಪಾವತಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಮುಖ್ಯಮಂತ್ರಿಗಳು ಆದೇಶ ನೀಡಿರುವುದನ್ನು ಸಂಘ ಸ್ವಾಗತಿಸಿದೆ. ಆದರೆ ಭ್ರಷ್ಟಾಚಾರ ಕುರಿತು ಜಾಣ ಮೌನ ವಹಿಸಲಾಗಿದೆ ಅನ್ನೋದು ಕೂಡ ಸಂಘದ ಆರೋಪ. ಆದ್ದರಿಂದ ಕಾಮಗಾರಿಗಳ ಗುತ್ತಿಗೆಯಲ್ಲಿ ಪಾರದರ್ಶಕವಾದ ಟೆಂಡರ್ ಪ್ರಕ್ರಿಯೆ ಮತ್ತು ಬಿಲ್ ಪಾವತಿಗೆ ಹೊಸ ತಂತ್ರಜ್ಞಾನವನ್ನು ಒಳಗೊಂಡ ವ್ಯವಸ್ಥೆಯೊಂದನ್ನು ರೂಪಿಸಬೇಕಿದ್ದು, ಸರಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕು ಅನ್ನೋದು ಸಂಘದ ಆಗ್ರಹ. ಸರಕಾರದ ಪ್ರತಿಕ್ರಿಯೆ ಆಧರಿಸಿ ಮುಂದಿನ ದಿನಗಳಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ನಿರ್ಧರಿಸಲಾಗಿದೆ. ಅಷ್ಟೇ ಅಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಖುದ್ದಾಗಿ ಭೇಟಿ ಮಾಡಿ ಗುತ್ತಿಗೆದಾರರ ಸಮಸ್ಯೆಗಳನ್ನು ಮನವರಿಕೆ ಮಾಡಿಕೊಡುವ ಪ್ರಯತ್ನ ಮಾಡಲು ಕೂಡ ನಿರ್ಧರಿಸಲಾಗಿದೆ.

ಈ ಮುಂಚೆಯೂ ಪ್ರತಿಭಟನೆ ನಡೆಸಿದ್ದ ಸಂಘ ಈ ಹಿಂದೆ ಎಸ್ಎಂ ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಈ ಬೇಡಿಕೆಗಳನ್ನಿಟ್ಟುಕೊಂಡು ಬೃಹತ್ ಪ್ರತಿಭಟನೆ ನಡೆಸಲಾಗಿತ್ತು. ಅಂದು ಪ್ರತಿಪಕ್ಷದಲ್ಲಿದ್ದ ಆನೇಕ ಮುಖಂಡರು ಈ ಹೋರಾಟವನ್ನು ಬೆಂಬಲಿಸಿದ್ದರು. ಇತ್ತೀಚೆಗೆ ಸಿದ್ದರಾಮಯ್ಯ ಮತ್ತು ಎಚ್ಡಿ ಕುಮಾರಸ್ವಾಮಿ ಅವರ ಅವಧಿಯಲ್ಲೂ ಮನವಿ ಪತ್ರಗಳನ್ನು ಸಲ್ಲಿಸಿ ಹೋರಾಟ ನಡೆಸಿದೆ. ಕೊವಿಡ್ ಹೆಮ್ಮಾರಿ ದೇಶವನ್ನು ಬಾಧಿಸದಿದ್ದರೆ ಎರಡು ವರ್ಷಗಳ ಹಿಂದೆಯೇ ಬೃಹತ್ ಹೋರಾಟವನ್ನು ನಡೆಸುತ್ತಿದ್ದೆವು ಅನ್ನುತ್ತಾರೆ ಸಂಘದ ಮುಖಂಡರು. ಭ್ರಷ್ಟಾಚಾರದ ಆರೋಪಗಳು ಹೊರ ಬಂದ ನಂತರವೂ ಕಡಿವಾಣ ಹಾಕುವ ಬದಲಾಗಿ ಕೆಸರೆರಚಾಟವೇ ಮುಂದುವರೆದಿದೆ. ಹಿಂದಿನ ಸರಕಾರಗಳಲ್ಲಿಯೂ ಭ್ರಷ್ಟಾಚಾರ ಇತ್ತು ಎಂದು ಸಂಘ ಪ್ರತಿಪಾದಿಸುತ್ತಲೇ ಬಂದಿದೆ. ರಾಜಕಾರಣ ಅನ್ನುವುದು ರಾಜಕಾರಣಿಗಳು ಮತ್ತು ರಾಜಕೀಯ ಪಕ್ಷಗಳಿಗೆ ಮಾತ್ರ ಅನಿವಾರ್ಯವಾಗಿರಬಹುದು, ಆದರೆ ಗುತ್ತಿಗೆದಾರರಿಗೆ ಅಲ್ಲ. ಇದನ್ನು ಸರಕಾರ ಅರ್ಥ ಮಾಡಿಕೊಳ್ಳಬೇಕಿದೆ ಅಂತ ಸಂಘ ಮನವಿ ಮಾಡಿದೆ.

22,000 ಕೋಟಿ ರೂಪಾಯಿ ಬಿಡುಗಡೆಗೆ ಆಗ್ರಹ ಗುತ್ತಿಗೆದಾರರಿಗೆ ವಿವಿಧ ಇಲಾಖೆಗಳಿಂದ ಸುಮಾರು 22,000 ಕೋಟಿ ರೂಪಾಯಿಗೂ ಅಧಿಕ ಹಣ ಬಿಡುಗಡೆಯಾಗಬೇಕಿದೆ. ಪ್ರಮುಖವಾಗಿ ಲೋಕೋಪಯೋಗಿ, ನೀರಾವರಿ ಇಲಾಖೆ ಮತ್ತು ಬಿಬಿಎಂಪಿಯಲ್ಲಿ ಅತಿ ಹೆಚ್ಚು ಕಾಮಗಾರಿಗಳು ನಡೆಯುತ್ತಿದ್ದು, ಈ ಮೂರೂ ಇಲಾಖೆಗಳಲ್ಲಿ ಈ ಹಿಂದೆ ಪೂರ್ಣಗೊಳಿಸಿರುವ ಕಾಮಗಾರಿಗಳ ಬಾಕಿ ಮೊತ್ತ ಸುಮಾರು 10,000 ಕೋಟಿ ರೂಪಾಯಿಗಳನ್ನು ಮೀರುತ್ತದೆ. ಲೋಕೋಪಯೋಗಿ ಇಲಾಖೆ ಸುಮಾರು 5,000 ಕೋಟಿ ರೂಪಾಯಿ ಹಣ ಬಾಕಿ ಉಳಿಸಿಕೊಂಡಿದ್ದರೆ, ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ಸಣ್ಣ ನೀರಾವರಿ ಇಲಾಖೆ ಸುಮಾರು 8,000 ಕೋಟಿ ರೂಪಾಯಿ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸುಮಾರು 1000 ಕೋಟಿ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದೆ. ಕೊರೊನಾ ನೆಪವೊಡ್ಡಿ ಕಳೆದ ಎರಡು ವರ್ಷಗಳಿಂದ ಯಾವುದೇ ಇಲಾಖೆಯಿಂದಲೂ ಗುತ್ತಿಗೆದಾರರಿಗೆ ಹಣ ಬಿಡುಗಡೆಯಾಗಿಲ್ಲ. ಈ ಹಿಂದೆ ಇಷ್ಟೊಂದು ಬೃಹತ್ ಮೊತ್ತದ ಬಾಕಿ ಉಳಿಸಿಕೊಂಡಿರುವ ಉದಾಹರಣೆಗಳು ಕಡಿಮೆ. ಆದರೆ 2018-19 ರಿಂದ ಈಚೆಗೆ ಬಾಕಿ ಉಳಿಸಿಕೊಳ್ಳುವ ಪರಿಪಾಠ ಹೆಚ್ಚಳವಾಗಿದೆ ಅಂತ ಗುತ್ತಿಗೆದಾರರ ಸಂಘ ಆರೋಪಿಸುತ್ತಿದೆ.

ಶೇ. 40 ರಷ್ಟು ಕಮಿಷನ್ ಬಗ್ಗೆ ದಾಖಲೆಗಳಿವೆ: ಡಿ. ಕೆಂಪಣ್ಣ ರಾಜ್ಯದಲ್ಲಿ 2019ರ ವರೆಗೆ ಶೇ. 19 ರಷ್ಟು ಕಮಿಷನ್ ಇತ್ತು. ಇತ್ತೀಚೆಗೆ ಅದು ಶೇ. 40 ರಷ್ಟು ಆಗಿದೆ ಅಂತಾ ಟಿವಿ9 ಡಿಜಿಟಲ್ಗೆ ಕರ್ನಾಟಕ ಸ್ಟೇಟ್ ಕಂಟ್ರ್ಯಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಡಿ.ಕೆಂಪಣ್ಣ ಪ್ರತಿಕ್ರಿಯಿಸಿದ್ದಾರೆ. ಹಿಂದಿನ ಸಿಎಂ ಬಿಎಸ್ವೈಗೆ ಮನವಿ ಮಾಡಿದ್ದಕ್ಕೆ ಪ್ರತಿಕ್ರಿಯೆ ಬರಲಿಲ್ಲ. ಪ್ರಧಾನಿಗೆ ಕೂಡ ನಾವು ಪತ್ರ ಬರೆದಿದ್ದೆವು. ಆದರೆ ಅವರು ಕೂಡ ಯಾವುದೇ ಪ್ರತಿಕ್ರಿಯೆ ಕೊಟ್ಟಿಲ್ಲ. ಇನ್ನು ಈ ಬಗ್ಗೆ ರಾಜ್ಯಪಾಲರಿಗೂ ಪತ್ರ ಬರೆದಿದ್ದೇವೆ. ಪ್ರಧಾನಿ ಮೋದಿ ಹಿಂದಿನ ಸರ್ಕಾರಕ್ಕೆ 10 ಪರ್ಸೆಂಟ್ ಸರ್ಕಾರ ಎಂದು ಹೇಳುತಿದ್ದರು. ನಾವು ಈ ಸರ್ಕಾರ 40 % ಎಂದು ಹೇಳುತ್ತೇವೆ. ಇದಕ್ಕೆ ನಮ್ಮ ಬಳಿ ಇದಕ್ಕೆ ದಾಖಲೆಗಳಿವೆ ಅಂತಾ ಹೇಳಿದ್ದಾರೆ.

ನಾವು ಈ ಭ್ರಷ್ಟಾಚಾರದ ಬಗ್ಗೆ ದನಿ ಎತ್ತಿದ ಬಳಿಕ ತನಿಖೆಗೆ ಮಾಡೋದಾಗಿ ಹೇಳಿದರು. ಆದರೆ 50 ಕೋಟಿ ರೂಪಾಯಿ ಮೇಲಿನ ಟೆಂಡರ್​ಗಳ ಬಗ್ಗೆ ಮಾತ್ರ ತನಿಖೆ ನಡೆಸಿದ್ದಾರೆ. ಈ ತನಿಖೆಯನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮಾಡುತ್ತಿದ್ದಾರೆ. ಅವರು ನಮಗೆ ಯಾವ ರೀತಿ ನ್ಯಾಯ ಕೊಡುತ್ತಾರೆ ಅನ್ನೋದು ಅವರ ಪ್ರಶ್ನೆ. ಅವರು ಒಳ್ಳೆ ಅಧಿಕಾರಿ ಇರಬಹುದು. ಆದರೆ ಅವರು ಪ್ರತಿನಿಧಿಸುವ ಇಲಾಖೆಯೂ ಸಹ ಇದರ ಒಂದು ಭಾಗ. ಹೀಗಾಗಿ ನಾವು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆಗೆ ಆಗ್ರಹಿಸುತ್ತೇವೆ ಅನ್ನುತ್ತಾರೆ. ಈ ಸಂಬಂಧ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ. ನಾವು ಯಾವ ಪಕ್ಷಕ್ಕೂ ಸೇರಿಲ್ಲ. ನಮ್ಮದು ಒಂದೇ ಕುಟುಂಬ. ಆದರೆ ಕೆಲವರು ನಮ್ಮ ಸಂಘಟನೆ ಒಡೆಯಲು ಪ್ರಯತ್ನ ಮಾಡುತ್ತಿದ್ದಾರೆ. ಸಚಿವ ಸಿಸಿ ಪಾಟೀಲ್ ಪ್ರಯತ್ನ ಮಾಡಿದ್ದಾರೆ. ಅವರು ಉತ್ತರ ಕರ್ನಾಟಕ ಅಸೋಸಿಯೇಷನ್ ಕರೆದು ಮಾತಾಡಿದ್ದು ನಾಚಿಕೆಗೇಡಿತನ. ಒಬ್ಬ ಸಚಿವ ಆದವರು ಸಂಘಟನೆ ಒಡೆಯುವ ಕೆಲಸ ಮಾಡಬಾರದು. ಅಖಂಡ ಕರ್ನಾಟಕಕ್ಕೆ ಸೇರಿದವರು ನಾವು. ಯಾರೋ ನಮ್ಮ ಸಂಘಟನೆ ಬಿಟ್ಟು ಹೋಗಿ ತಮ್ಮ ಸ್ವಂತಕ್ಕೋಸ್ಕರ ಸಂಘಟನೆ ಮಾಡಿದ್ದಾರೆ. ಅಂಥವರನ್ನು ಕರೆದು ಸಿಸಿ ಪಾಟೀಲ್ ಮಾತನಾಡಿದ್ದಾರೆ. ಸಚಿವರಾದವರು ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು. ಅವರು ಒಳ್ಳೆಯ ಮಂತ್ರಿ, ನಾವು ಭೇಟಿ ಮಾಡಿದ್ದೇವೆ. ಆಗ ಅವರು ಚೆನ್ನಾಗಿ ಮಾತನಾಡಿದ್ದಾರೆ. ಅಲ್ಲದೇ ಆಗ ಕೆಲ ಸುಳ್ಳುಗಳನ್ನು ಕೂಡ ಹೇಳಿದ್ದಾರೆ ಅಂತಾ ಅಸಮಾಧಾನ ವ್ಯಕ್ತಪಡಿಸಿದರು. ಇನ್ನು ತಮಿಳುನಾಡು ಹಾಗೂ ಕೇರಳ, ಗುಜರಾತ್ ಪ್ಯಾಕೇಜ್ ಪದ್ಧತಿ ಇಲ್ಲ. ಅದರೆ ಈ ಪದ್ಧತಿ ನಮ್ಮಲ್ಲಿ ಮಾತ್ರ ಇದೆ. ಇನ್ನು ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಅವರು ಸಿಎಂ ಆದ ಕೂಡಲೇ ಪತ್ರ ಬರೆದಿದ್ದೇವೆ. ಆದರೆ ಅವರು ಇದುವರೆಗೂ ಭೇಟಿಗೆ ಅವಕಾಶ ನೀಡಿಲ್ಲ ಅಂತಾ ಕೆಂಪಣ್ಣ ಬೇಸರ ವ್ಯಕ್ತಪಡಿಸಿದರು.

ವರದಿ: ನರಸಿಂಹಮೂರ್ತಿ ಪ್ಯಾಟಿ

ಇದನ್ನೂ ಓದಿ

ಅಯೋಧ್ಯೆ ಭೂ ಒಪ್ಪಂದ: ಸುಪ್ರೀಂಕೋರ್ಟ್ ಮಧ್ಯಪ್ರವೇಶಕ್ಕೆ ಮಾಯಾವತಿ, ಪ್ರಿಯಾಂಕಾ ಗಾಂಧಿ ಆಗ್ರಹ

ಕರ್ನಾಟಕದಲ್ಲಿ ಇಂದು ಒಂದೇ ದಿನ 12 ಒಮಿಕ್ರಾನ್ ಕೇಸ್ ಪತ್ತೆ; ಬೆಂಗಳೂರಿನಲ್ಲೇ ಅತಿ ಹೆಚ್ಚು ಸೋಂಕಿತರು

Published On - 5:10 pm, Thu, 23 December 21

Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
Daily Devotional: ನಂಬಿಕೆ ದ್ರೋಹ ಮಾಡಿದ್ರೆ ಪರಿಣಾಮ ಹೇಗಿರುತ್ತೆ ಗೊತ್ತಾ?
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ 2ನೇ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ದೆಹಲಿಯ ದೇವಸ್ಥಾನದಲ್ಲಿ ಕರೆಂಟ್ ಶಾಕ್ ಹೊಡೆದು 9ನೇ ತರಗತಿ ವಿದ್ಯಾರ್ಥಿ ಸಾವು
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ನಿವೃತ್ತರಾದ ತಹಸೀಲ್ದಾರ್ ಬೀಳ್ಕೊಡುಗೆ ವೇಳೆ ಬಾರ್​ ಡ್ಯಾನ್ಸರ್​ಗಳ ನೃತ್ಯ
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿಯಾದ ಕ್ರಿಸ್ ಗೇಲ್
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
ಹೆಚ್​ಡಿ ಕುಮಾರಸ್ವಾಮಿ ಆರೋಪ‌ಕ್ಕೆ ಎಡಿಜಿಪಿ ಚಂದ್ರಶೇಖರ್ ಮತ್ತೆ ತಿರುಗೇಟು
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
‘ಮನೆ ಕೆಲಸದವರಿಗೂ ನಾನು ಇಂಥ ಮಾತು ಹೇಳಲ್ಲ’: ಕಣ್ಣೀರು ಹಾಕಿದ ಐಶ್ವರ್ಯಾ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ದರ್ಶನ್ ನೋಡಲು ಜೈಲಿಗೆ ಬಂದ ವಿನೀಶ್: ವಿಡಿಯೋ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ರಾತ್ರೋರಾತ್ರಿ ಪುಷ್ಪಗಿರಿ ವೇರ್​ಹೌಸ್ ಶೆಡ್ ನಿರ್ಮಾಣ: HDR ತನಿಖೆಗೆ ಆಗ್ರಹ
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?
ಐಶ್ವರ್ಯಾ, ಧರ್ಮ, ಅನುಷಾ: ಬಿಗ್ ಬಾಸ್ ಮನೆಯಲ್ಲಿ ತ್ರಿಕೋನ ಪ್ರೇಮ ಶುರು?