ಚಾಸಿ ಕಟ್​ ಆಗಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಸರ್ಕಾರಿ ಬಸ್​; 20ಕ್ಕೂ ಹೆಚ್ಚು ಜನರಿಗೆ ಗಾಯ

Dharwad: ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯ ಆಗಿದೆ. ಅದೃಷ್ಟವಷಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಚಾಸಿ ಕಟ್​ ಆಗಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಸರ್ಕಾರಿ ಬಸ್​; 20ಕ್ಕೂ ಹೆಚ್ಚು ಜನರಿಗೆ ಗಾಯ
ಧಾರವಾಡದಲ್ಲಿ ಬಸ್ ಅಪಘಾತ
Follow us
TV9 Web
| Updated By: ganapathi bhat

Updated on:Aug 16, 2021 | 6:36 PM

ಧಾರವಾಡ: ಸರ್ಕಾರಿ ಬಸ್​ನ ಚಾಸಿ ಕಟ್​ ಆಗಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಸೋಮವಾರ (ಆಗಸ್ಟ್ 16) ಧಾರವಾಡ ತಾಲೂಕಿನ ವನಹಳ್ಳಿ ಬಳಿ ನಡೆದಿದೆ. ಧಾರವಾಡದಿಂದ ಮೊರಬ ಗ್ರಾಮಕ್ಕೆ ತೆರಳುತ್ತಿದ್ದಾಗ ಬಸ್ ಅಪಘಾತ ಸಂಭವಿಸಿದೆ. ಬಸ್​ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯ ಆಗಿದೆ. ಅದೃಷ್ಟವಷಾತ್ ಹೆಚ್ಚಿನ ಅಪಾಯ ಸಂಭವಿಸಿಲ್ಲ. ಧಾರವಾಡ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ಇಂದು (ಆಗಸ್ಟ್ 16) ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ ಸಂಭವಿಸಿದೆ. ಕೆಎ 51, ಪಿ 3384 ನೋಂದಣಿ ಕಾರು ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ವಸ್ತುಗಳು ಸುಮಾರು 50 ಮೀಟರ್ ದೂರಕ್ಕೆ ಬಿದ್ದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಫೋಟದ ತೀವ್ರತೆಗೆ ಕಾರಿನಲ್ಲಿದ್ದ ವಸ್ತುಗಳು ಸಹಿತ ಕಾರಿನ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ. ಕಾರ್ ಸ್ಫೋಟದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಾರ್ ಏಕಾಏಕಿ ಹೇಗೆ ಸ್ಫೋಟವಾಯಿತು, ಅದು ಯಾವ ಕಾರ್ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕಾರ್​ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಆದರೆ, ವ್ಯಕ್ತಿಯ ಪರಿಚಯದ ಬಗ್ಗೆಯೂ ಮಾಹಿತಿ ಲಭಿಸಿಲ್ಲ. ಪ್ರಕರಣವು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಶಿವಮೊಗ್ಗ: ಹೊತ್ತಿಉರಿದ ಬೆಂಜ್ ಕಾರ್  ಆಕಸ್ಮಿಕ ಬೆಂಕಿಯಿಂದ ಬೆಂಜ್ ಕಾರ್ ಒಂದು ಹೊತ್ತಿ ಉರಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾಮದ ಸಮೀಪ ಭಾನುವಾರ (ಆಗಸ್ಟ್ 15) ನಡೆದಿತ್ತು. ಆಕಸ್ಮಿಕ ಬೆಂಕಿಯಿಂದಾಗಿ ಕಾರು ರಸ್ತೆಯಲ್ಲೇ ಹೊತ್ತಿ ಉರಿದಿತ್ತು. ಶಿವಮೊಗ್ಗದ ಮುರಳಿ ಎಂಬವರಿಗೆ ಸೇರಿದ ಬೆಂಜ್​ ಕಾರು ಅಗ್ನಿಗೆ ಆಹುತಿ ಆಗಿತ್ತು. ಗುಳಿಗುಳಿ ಶಂಕರ ದೇಗುಲದಿಂದ ಹಿಂದಿರುಗುವಾಗ ಘಟನೆ ಸಂಭವಿಸಿತ್ತು. ಅದೃಷ್ಟವಶಾತ್​ ಕಾರಿನಲ್ಲಿ ಇದ್ದ ಇಬ್ಬರು ಕೂಡ ಅಪಾಯದಿಂದ ಪಾರಾಗಿದ್ದರು. ರಿಪ್ಪನ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಕೊಪ್ಪಳದಲ್ಲಿ ಎರಡು ಲಾರಿಗಳ ನಡುವೆ ಅಪಘಾತ; ಲಾರಿಗಳ ನಡುವಲ್ಲಿ ಸಿಕ್ಕಿಕೊಂಡ ನಾಲ್ವರು

ರಾಮನಗರ: ಏಕಾಏಕಿ ಸ್ಫೋಟಗೊಂಡ ಕಾರು; ವ್ಯಕ್ತಿ ಸಜೀವ ದಹನ

Published On - 6:36 pm, Mon, 16 August 21

‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ
ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ