AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಸಮಾಧಾನ ಸ್ಫೋಟ: ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ

ಕರ್ನಾಟಕ ಬಿಜೆಪಿ (Karnataka BJP) ಪಾಳಯದಲ್ಲಿ ಮತ್ತೆ ಅಸಮಾಧಾನ ಸ್ಫೋಟಗೊಂಡಿದೆ. ರಾಜ್ಯಾಧ್ಯಕ್ಷ ಹುದ್ದೆ ಸಂಬಂಧ ಬಣ ರಾಜಕೀಯ ತಣ್ಣಗಾಯ್ತು ಎನ್ನುವಷ್ಟರಲ್ಲಿ ಮತ್ತೊಂದು ಪಕ್ಷದಲ್ಲಿ ಮತ್ತೊಂದು ಬೆಳವಣಿಗೆಯಾಗಿದ್ದು, ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಟಿಕೆಟ್ ಕೈತಪ್ಪಿದ್ದಕ್ಕೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ರಾಜೀನಾಮೆ ನೀಡಿದ್ದಾರೆ.

ಅಸಮಾಧಾನ ಸ್ಫೋಟ:  ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ರಾಜೀನಾಮೆ
Lingaraj Patil
ಸಂಜಯ್ಯಾ ಚಿಕ್ಕಮಠ
| Edited By: |

Updated on: Mar 11, 2026 | 4:28 PM

Share

ಹುಬ್ಬಳ್ಳಿ (ಮಾರ್ಚ್ 11): ಕರ್ನಾಟಕ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನಕ್ಕೆ ಲಿಂಗರಾಜ ಪಾಟೀಲ್ (Lingaraj Patil) ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್​, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ (Karnataka BJP disciplinary committee chairman ) ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಶ್ಚಿಮ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಎಸ್.ವಿ. ಸಂಕನೂರ ಅವರಿಗೆ ನೀಡಲಾಗಿದೆ, ಇದರಿಂದ ಅಸಮಾಧಾನಗೊಂಡಿರುವ ಲಿಂಗರಾಜ ಪಾಟೀಲ್ , ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ಪತ್ರ ಬರೆದಿದ್ದು,  ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ತಮ್ಮನ್ನು ಬಿಡುಗಡೆಗೊಳಿಸುವಂತೆ ಕೇಳಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ನಾನು ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ನನ್ನನ್ನು ಕಡೆಗಣಿಸಿ ಎಸ್.ವಿ.ಸಂಕನೂರು ಅವರಿಗೆ ಟಿಕೆಟ್ ನೀಡಿದ್ದರಿಂದ ನೋವಾಗಿದೆ. ಹೀಗಾಗಿ, ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸಿ ಎಂದು ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವುದಾಗಿ ತಿಳಿಸಿದರು.

ಇದನ್ನೂ ಒದಿ: ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ: ಜೆಡಿಎಸ್​​ಗೆ 1 ಸೀಟು!

ಬಿಜೆಪಿಯಲ್ಲಿ ನಿಷ್ಠಾವಂತ, ಪ್ರಾಮಾಣಿಕ ಕಾರ್ಯಕರ್ತರಿಗೆ ಬೆಲೆಯಿಲ್ಲ ಎನ್ನುವುದು ದೃಢವಾಗಿದೆ. ಬಿಜೆಪಿಯಿಂದ ನನಗೆ ಅನ್ಯಾಯವಾಗಿದೆ. ಈ ಮೂಲಕ ಕಾರ್ಯಕರ್ತರಿಗೆ ಅನ್ಯಾಯ ಮಾಡಿದಂತಾಗಿದೆ. 37 ವರ್ಷಗಳ ಕಾಲ ಪಕ್ಷಕ್ಕೆ ದುಡಿದಿದ್ದೇನೆ. ಇದನ್ನು ಗುರುತಿಸದೇ ಪಕ್ಷ ಹೊರಗಿನಿಂದ ಬಂದವರಿಗೆ ಮಣೆ ಹಾಕಿ ಟಿಕೆಟ್ ನೀಡಿದ್ದು, ಸಾಕಷ್ಟು ನೋವು ತರಿಸಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಈಗಲೂ ಕಾಲ ಮಿಂಚಿಲ್ಲ. ನನಗೆ ಟಿಕೆಟ್ ಸಿಗುವ ಭರವಸೆ ಇದ್ದು, ಎಂಟು ದಿನಗಳವರೆಗೆ ಕಾದು ನೋಡುತ್ತೇನೆ. ಅವಕಾಶ ಸಿಗದಿದ್ದರೆ ಬೇರೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಸದ್ಯಕ್ಕೆ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಸ್ಥಾನದ ಜವಾಬ್ದಾರಿಯಿಂದ ಬಿಡುಗಡೆಗೊಳಿಸುವಂತೆ ರಾಜ್ಯಾಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದೇನೆ ಎಂದು ಹೇಳಿದರು. ಈ ಮೂಲಕ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೂ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು