NWKRTC ಬಸ್​​ ನಿರ್ವಾಹಕನ ಮನೆ ಮೇಲೆ ಲೋಕಾಯುಕ್ತ ದಾಳಿ!: ರೇಡ್​​ ಹಿಂದಿನ ಅಸಲಿ ಕಾರಣ ಇಲ್ಲಿದೆ

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಹುಬ್ಬಳ್ಳಿಯ ಗಾಂಧಿನಗರದಲ್ಲಿ NWKRTC ಬಸ್ ಚಾಲಕ ಕಂ ನಿರ್ವಾಹಕ ಷಡಕ್ಷರಯ್ಯ ಅವರ ಮನೆ ಮೇಲೆ ಧಾರವಾಡ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ. ಸಾರ್ವಜನಿಕ ಸೇವಾ ವಲಯದಲ್ಲಿರುವ ಕಂಡಕ್ಟರ್‌ ಆದಾಯದಲ್ಲಿ ಅಕ್ರಮವಾಗಿ ಆಸ್ತಿಯನ್ನು ಗಳಿಸಲು ಸಾಮಾನ್ಯವಾಗಿ ಅವಕಾಶಗಳು ಕಡಿಮೆ. ಆದರೆ, ಈ ಘಟನೆ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.

NWKRTC ಬಸ್​​ ನಿರ್ವಾಹಕನ ಮನೆ ಮೇಲೆ ಲೋಕಾಯುಕ್ತ ದಾಳಿ!: ರೇಡ್​​ ಹಿಂದಿನ ಅಸಲಿ ಕಾರಣ ಇಲ್ಲಿದೆ
NWKRTC ಸಿಬ್ಬಂದಿ ಮನೆ ಮೇಲೆ ಲೋಕಾಯುಕ್ತ ದಾಳಿ
Edited By:

Updated on: Nov 18, 2026 | 11:54 AM

ಹುಬ್ಬಳ್ಳಿ, ನವೆಂಬರ್​​ 18: ಹುಬ್ಬಳ್ಳಿಯ ಗಾಂಧಿನಗರದಲ್ಲಿ NWKRTC ಬಸ್ ಚಾಲಕ ಕಂ ನಿರ್ವಾಹಕ ಷಡಕ್ಷರಯ್ಯ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದ್ದಾರೆ. ನಿಗದಿತ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಮೇಲೆ ಧಾರವಾಡ ಲೋಕಾಯುಕ್ತ ಎಸ್‌ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಮನೆಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ. ದಾಳಿಯ ವೇಳೆ, ಅಧಿಕಾರಿಗಳು ಮನೆಯಲ್ಲಿ ಲಭ್ಯವಿರುವ ದಾಖಲೆಗಳು, ಆಸ್ತಿ ಪತ್ರಗಳು ಮತ್ತು ಇತರೆ ಮಹತ್ವದ ಮಾಹಿತಿಗಳನ್ನು ಪರಿಶೀಲಿಸಿದ್ದಾರೆ.

ಕಂಡಕ್ಟರ್‌ ಕೆಲಸದ ಜೊತೆಗೆ ರಿಯಲ್ ಎಸ್ಟೇಟ್ ವ್ಯವಹಾರ

ಸಾರ್ವಜನಿಕ ಸೇವಾ ವಲಯದಲ್ಲಿರುವ ಕಂಡಕ್ಟರ್‌ ಆದಾಯದಲ್ಲಿ ಅಕ್ರಮವಾಗಿ ಆಸ್ತಿಯನ್ನು ಗಳಿಸಲು ಸಾಮಾನ್ಯವಾಗಿ ಅವಕಾಶಗಳು ಕಡಿಮೆ. ಆದರೆ, ಷಡಕ್ಷರಯ್ಯ ಅವರ ಮೇಲೆ ದಾಳಿ ನಡೆದಿರುವುದು ಮತ್ತು ಅವರು ಹೊಂದಿರುವ ಆಸ್ತಿಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಲಭ್ಯವಾಗಿರುವ ಪ್ರಾಥಮಿಕ ಮಾಹಿತಿಯ ಪ್ರಕಾರ, ಷಡಕ್ಷರಯ್ಯ ಅತ್ತಿಕಟ್ಟಿಮಠ ಅವರು ಕಂಡಕ್ಟರ್‌ ಕೆಲಸದ ಜೊತೆಗೆ ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಸಕ್ರಿಯರಾಗಿದ್ದರು ಎನ್ನಲಾಗಿದೆ. ಈ ವ್ಯವಹಾರಗಳ ಮೂಲಕ ಅಪಾರ ಪ್ರಮಾಣದ ಸಂಪತ್ತನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಮಾಹಿತಿ ಇದೆ. ಅವರ ಆದಾಯ ಮತ್ತು ಪ್ರಸ್ತುತ ಅವರು ಸಂಪಾದಿಸಿರುವ ಆಸ್ತಿಗಳ ನಡುವೆ ಸಾಕಷ್ಟು ವ್ಯತ್ಯಾಸಗಳು ಕಂಡುಬಂದಿರುವುದೇ ಈ ದಾಳಿಗೆ ಮುಖ್ಯ ಕಾರಣ ಎನ್ನಲಾಗಿದೆ.

Loading...

ಸರ್ಕಾರಿ ನೌಕರರಾಗಿ, ಷಡಕ್ಷರಯ್ಯ ಅವರು ಯಾವುದೇ ರೀತಿಯ ಇತರೆ ವ್ಯವಹಾರ ಅಥವಾ ಬ್ಯುಸಿನೆಸ್ ನಡೆಸಿದಲ್ಲಿ, ಅದರ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ನೀಡಿ ತಮ್ಮ ಸೇವಾ ಪುಸ್ತಕಗಳಲ್ಲಿ ಅದನ್ನು ದಾಖಲಿಸುವುದು ಕಡ್ಡಾಯವಾಗಿರುತ್ತದೆ. ಆದರೆ, ಅವರು ಈ ನಿಯಮಗಳನ್ನು ಪಾಲಿಸದೆ ಅಕ್ರಮವಾಗಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಗಂಭೀರ ಆರೋಪವಿದೆ. ಈ ಹಿನ್ನೆಲೆಯಲ್ಲಿ, ಅವರು ಸಕ್ರಮವಾಗಿ ಗಳಿಸಿದ ಆಸ್ತಿ ಎಷ್ಟು ಮತ್ತು ಅಕ್ರಮ ಮೂಲಗಳಿಂದ ಗಳಿಸಿದ ಆಸ್ತಿ ಎಷ್ಟು ಎಂಬುದನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

ಸಂಜಯ್ಯಾ ಚಿಕ್ಕಮಠ

ಸಂಜಯ್ಯಾ ಚಿಕ್ಕಮಠ. ಹುಟ್ಟಿದ್ದು ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ರಾಮನಾಳ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 14 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್​ನಿಂದ ಆರಂಭವಾದ ವೃತ್ತಿ ಬದುಕು, ಕಲಬುರಗಿ, ಕೊಪ್ಪಳದಿಂದ ಇದೀಗ ಹುಬ್ಬಳ್ಳಿಗೆ ಬಂದಿದ್ದು, ಉತ್ತರ ಕರ್ನಾಟಕ ಪ್ರಮುಖ ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಕೃಷಿ ನನ್ನಿಷ್ಟ.ಆದ್ರೆ ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More
Loading...
Unable to load recommendations.
Follow Us