AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಲಗುಂದದ ಲಾಡ್ಜ್​ನಲ್ಲಿ ಪ್ರೇಮಿಗಳು ಆತ್ಮಹತ್ಯೆ, ಪರಿಚಯಸ್ಥರ ಮೂಲಕ ರೂಮ್ ಪಡೆದಿದ್ದ ಜೋಡಿ

ಪ್ರೇಮಿಗಳು ಲಾಡ್ಜ್​ನಲ್ಲಿ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ದಿನಗಳಿಂದ ಲಾಡ್ಜ್​ನಲ್ಲಿ ಈ ಜೋಡಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನವಲಗುಂದದ ಲಾಡ್ಜ್​ನಲ್ಲಿ ಪ್ರೇಮಿಗಳು ಆತ್ಮಹತ್ಯೆ, ಪರಿಚಯಸ್ಥರ ಮೂಲಕ ರೂಮ್ ಪಡೆದಿದ್ದ ಜೋಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 07, 2022 | 10:56 PM

Share

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ಪ್ರೇಮಿಗಳು ಆತ್ಮಹತ್ಯೆ(lovers commits )ಶರಣಾಗಿರುವ ಘಟನೆ ನಡೆದಿದೆ. ಕಳೆದ 3 ದಿನಗಳಿಂದ ನವಲಗುಂದದ ಅಶೋಕ ಲಾಡ್ಜ್​ನಲ್ಲಿ(Lodge) ಉಳಿದುಕೊಂಡಿದ್ದ ಜೋಡಿ ಇಂದು(ಡಿಸೆಂಬರ್ 07) ಒಂದೇ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದೆ.

ಇದನ್ನೂ ಓದಿ: ಕುಡಿಯಲು ಹಣ ಕೊಡಲಿಲ್ಲವೆಂದು ಪತ್ನಿಯನ್ನು ಅಮಾನುಷವಾಗಿ ಹತ್ಯೆಗೈದ ಪತಿ: ತಂದೆ ಕೃತ್ಯಕ್ಕೆ ಕೈಜೋಡಿಸಿದ ಪಾಪಿ ಮಗ

ಕುಮಾರ ತಳವಾರ (22) ಮತ್ತು ದೀಪಾ ಎತ್ತಿನಗುಡ್ಡ (18) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು. ಧಾರವಾಡ ತಾಲೂಕಿನ ನೀರಲಕಟ್ಟಿ ಗ್ರಾಮದ ದೀಪಾ ಎತ್ತಿನಗುಡ್ಡ ಹಾಗೂ ನವಲಗುಂದ ತಾಲೂಕಿನ ಬೆಳವಟಗಿ ಗ್ರಾಮದ ಕುಮಾರ ಇಬ್ಬರು ಪ್ರೀತಿಸುತ್ತಿದ್ದರು. ಕಳೆದ ಮೂರು ದಿನಗಳ ಹಿಂದೆ ಈ ಜೋಡಿ ಪರಿಚಯಸ್ಥರೊಬ್ಬರ ಮೂಲಕ ನವಲಗುಂದದ ಅಶೋಕ ಲಾಡ್ಜ್​ನಲ್ಲಿ ರೂಮ್ ಪಡೆದಿತ್ತು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಗದಗನಲ್ಲಿ ಮತ್ತೊಂದು ಚಾಕು ಇರಿತ: ಒಂದೇ ವಾರದಲ್ಲಿ ಮೂರು ಪ್ರಕರಣ, ಬೆಚ್ಚಿಬಿದ್ದ ಜನ

ಆದ್ರೆ, ಬುಧವಾರ ಇಬ್ಬರೂ ಫ್ಯಾನ್​ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನು ಈ ಪ್ರೇಮಿಗಳ ಆತ್ಮಹತ್ಯೆಗೆ ನಿಖರ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.

ಡೆತ್​ನೋಟ್​ ಬರೆದಿಟ್ಟು ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ನೆಲಮಂಗಲ ತಾಲೂಕಿನ ದೇವರಹೊಸಹಳ್ಳಿಯಲ್ಲಿ ವ್ಯಕ್ತಿಯೊಬ್ಬ ಡೆತ್​ನೋಟ್​ ಬರೆದಿಟ್ಟು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ತುಮಕೂರು ಜಿಲ್ಲೆಯ ಗುಬ್ಬಿ ನಿವಾಸಿ ಜಯಪ್ರಕಾಶ(39) ಮೃತ ವ್ಯಕ್ತಿ. ಸಾಲಬಾಧೆ, ಜಮೀನು ಪಹಣಿ ಸಿಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಿಂದ ಮೃತದೇಹ ಹೊರತೆಗೆದಿದ್ದಾರೆ. ದಾಬಸ್​ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 10:53 pm, Wed, 7 December 22

Follow Us
Web contact
Web contact

TV9 Kannada

Read More
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ