ಮಹಿಳೆಯರ ಬಟ್ಟೆ ಕದಿಯುವಾಗ ಸಿಕ್ಕಿಬಿದ್ದ ಯುವಕ, ಸ್ಥಳೀಯರಿಂದ ಬಿತ್ತು ಸಿಕ್ಕಾಪಟ್ಟೆ ಗೂಸಾ
ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕನಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಗೂಸಾ ಬಿದ್ದ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ. ಕಳೆದ ಹಲವು ದಿನಗಳಿಂದ ಬಡಾವಣೆಯಲ್ಲಿರುವ ಮನೆಗಳಿಂದ ಮಹಿಳೆಯರ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕೊನೆಗೂ ಆ ಅಪರಿಚಿತ ಯುವಕನನ್ನು ಹಿಡಿದ ಸ್ಥಳೀಯರು ಆತನನ್ನ ಕಂಬಕ್ಕೆ ಕಟ್ಟಿ ಹಾಕಿ ಚೆನ್ನಾಗಿ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ.
ಹುಬ್ಬಳ್ಳಿ: ಮಹಿಳೆಯರ ಬಟ್ಟೆ ಕದಿಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಯುವಕನಿಗೆ ಸ್ಥಳೀಯರಿಂದ ಸಿಕ್ಕಾಪಟ್ಟೆ ಗೂಸಾ ಬಿದ್ದ ಘಟನೆ ಹುಬ್ಬಳ್ಳಿಯ ಈಶ್ವರ ನಗರದಲ್ಲಿ ನಡೆದಿದೆ.
ಕಳೆದ ಹಲವು ದಿನಗಳಿಂದ ಬಡಾವಣೆಯಲ್ಲಿರುವ ಮನೆಗಳಿಂದ ಮಹಿಳೆಯರ ಬಟ್ಟೆಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಕೊನೆಗೂ ಆ ಅಪರಿಚಿತ ಯುವಕನನ್ನು ಹಿಡಿದ ಸ್ಥಳೀಯರು ಆತನನ್ನ ಕಂಬಕ್ಕೆ ಕಟ್ಟಿ ಹಾಕಿ ಚೆನ್ನಾಗಿ ಥಳಿಸಿದ್ದಾರೆ. ನಂತರ ಸ್ಥಳಕ್ಕೆ ಆಗಮಿಸಿದ ಹಳೇ ಹುಬ್ಬಳ್ಳಿ ಠಾಣೆ ಪೊಲೀಸರಿಗೆ ಆತನನ್ನು ಒಪ್ಪಿಸಿದ್ದಾರೆ.